ಕಾರವಾರ: ಜೂ. 21 ರಂದು ಅಂತರಾಷ್ರ್ಟೀಯ ಯೋಗ ದಿನಾಚರಣೆ

Source: varthabhavan | By Arshad Koppa | Published on 16th June 2017, 6:35 AM | Coastal News | National News | Special Report |

ಕಾರವಾರ ಜೂನ 15 : ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ 21 ರಂದು ಕಾರವಾರದಲ್ಲಿ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ ಸಾಮೂಹಿಕ ಯೋಗ ಕಾರ್ಯಕ್ರಮ ಆಯೋಜಿಸಲಾಗಿದೆ. 
ಸದರಿ ದಿನದಂದು ದೇಶದಾದ್ಯಂತ ಯೋಗ ಶಿಬಿರ ಆಯೋಜಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಯೋಗ ಕಾರ್ಯಕ್ರಮವನ್ನು ನಗರದ ಸಾಯಿ ಮಂದಿರ ರೋಡ, ದೈವಜ್ಞ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಯೋಗಾಸಕ್ತ ಪ್ರೌಢಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು, ಸರಕಾರಿ ನೌಕರರು ಮತ್ತು ಸಾರ್ವಜನಿಕರು ಭಾಗವಹಿಬಹುದಾಗಿದೆ

ಜೂ. 20 ರಂದು ಯೋಗ ನಡಿಗೆ  :
 ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ 20 ರಂದು ಮದ್ಯಾಹ್ನ 3 ಗಂಟೆಗೆ ಯೋಗ ನಡಿಗೆ ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಾರ್ಯಾಲಯದವರೆಗೆ ನಡೆಯಲಿದೆ. 
 ಯೋಗ ನಡಿಗೆಯಲ್ಲಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಸಿ.ಸಿ ಕೆಡೆಟಗಳು, ಆಶಾಕಾರ್ಯಕರ್ತೆಯರು ಭಾಗವಹಿಸಲಿದ್ದು, ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಅಯುಷ್ ಅಧಿಕಾರಿ ಅವರು ಕೋರಿದ್ದಾರೆ.

Read These Next

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...