ಕೇರಳ ಪೊಲೀಸ್ ಇಲಾಖೆಯ ಸಂಘೀಗಳಿಂದ ರಹಸ್ಯ ಸಭೆ? ತನಿಖೆ ಆರಂಭ

Source: sonews | By Staff Correspondent | Published on 5th October 2017, 11:27 PM | National News | Don't Miss |

ತಿರುವನಂತಪುರಂ: ಕೇರಳ ಪೊಲೀಸ್  ಇಲಾಖೆಯಲ್ಲಿದ್ದಾರೆ ಎನ್ನಲಾದ ಆರೆಸ್ಸೆಸ್, ಬಿಜೆಪಿ ಬೆಂಬಲಿಗರ ರಹಸ್ಯ ಸಭೆಯೊಂದು ನಡೆದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಕೇರಳದ ಮಾಧ್ಯಮವೊಂದು ವರದಿ ಮಾಡಿದೆ.

ಕೇರಳದಲ್ಲಿ ಸಭೆ ಸೇರಿದರೆ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬರಬಹುದೆಂದು ತಮಿಳುನಾಡಿನ ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರದಲ್ಲಿ ಸಭೆ ನಡೆಸಲಾಗಿದೆ ಎಂದು ಅದು ವರದಿ ಮಾಡಿದೆ.

ಆದರೆ, ಸಭೆಯ ತೀರ್ಮಾನಗಳನ್ನು ವಾಟ್ಸ್ ಆ್ಯಪ್ ಮೂಲಕ ಸದಸ್ಯರಿಗೆ ಕಳುಹಿಸಲಾಗಿದ್ದು, ಇದು ಸೋರಿಕೆಯಾಗಿ ರಹಸ್ಯ ಸಭೆಯ ವಿವರಗಳು ಬಹಿರಂಗಗೊಂಡಿದೆ ಎಂದು ಆರೋಪಿಸಲಾಗಿದೆ. ಭಾಗವಹಿಸಿದ ಪೊಲೀಸರ ವಿವರಗಳನ್ನು ಸಂಗ್ರಹಿಸುವ ಕೆಲಸ ಆರಂಭವಾಗಿದೆ. ಪೊಲೀಸರ ಹಿನ್ನೆಲೆ, ಈಗ ಸಂಘಪರಿವಾರ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆಯೇ ಎನ್ನುವ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ವರದಿಯಾಗಿದೆ.

ಆರೆಸ್ಸೆಸ್ ನ ರಾಜ್ಯ ನಾಯಕರ ಸಮ್ಮುಖದಲ್ಲಿ ಪೊಲೀಸ್ ಇಲಾಖೆಯಲ್ಲಿರುವ ಸಂಘಪರಿವಾರದ ಬೆಂಬಲಿಗರ ಅನೌಪಚಾರಿಕ ಸಭೆಯನ್ನು ನಡೆಸಲಾಗಿದೆ. ಈ ಹಿಂದಿನ ತತ್ವಮಸಿ ಗ್ರೂಪ್  ಅನ್ನು ಸಕ್ರಿಯಗೊಳಿಸಬೇಕು ಎಂದು ಕನ್ಯಾಕುಮಾರಿಯ ಸಭೆಯ ಮುಖ್ಯ ನಿರ್ಧಾರವಾಗಿದೆ. ತತ್ವಮಸಿಯ ಅಧ್ಯಕ್ಷರನ್ನಾಗಿ ಗೋಪಕುಮಾರ್, ಕಾರ್ಯದರ್ಶಿಯಾಗಿ ರಾಜೇಶ್ ಮತ್ತು ಖಜಾಂಚಿಯಾಗಿ ಪ್ರಶಾಂತ್ ರನ್ನು, ಪ್ರಧಾನ ಕನ್ವೀನರ್ ಆಗಿ ಶ್ಯಾಮ್  ರನ್ನು ಹಾಗೂ  ಹದಿನಾರು ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕೇರಳದ ಮಾಧ್ಯಮಗಳು ವರದಿ ಮಾಡಿವೆ.

ತನಿಖಾ ವರದಿ ಸಿಕ್ಕಿದ ಬಳಿಕ ಕನ್ಯಾಕುಮಾರಿಯ ರಹಸ್ಯ ಸಭೆಯಲ್ಲಿ ಪಾಲ್ಗೊಂಡ ಪೊಲೀಸರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎನ್ನಲಾಗಿದೆ.

ಕೃಪೆ: vbnewsonline

Read These Next

ಮೋದಿ ಸರ್ಕಾರ ಅವಧಿಯಲ್ಲಿ ’ಬೀಫ್’ ರಪ್ತು ಪ್ರಮಾಣದಲ್ಲಿ ಗರಿಷ್ಠ ಏರಿಕೆ; 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ಬೀಫ್ ರಫ್ತು

2014ರಲ್ಲಿ ಮೋದಿ ಸರಕಾರ ಅಧಿಕಾರ ವಹಿಸಿದಂದಿನಿಂದ ಎಮ್ಮೆ ಮಾಂಸದ ರಫ್ತು ಗಣನೀಯಾಗಿ ಹೆಚ್ಚಾಗಿದೆ. 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ...

ಹೊಸದಿಲ್ಲಿ:ಬಿಜೆಪಿ ರಾಷ್ಟ್ರೀಯ ಪ್ರ. ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಟಕ ಮೂಲದ ಬಿ.ಎಲ್ ಸಂತೋಷ್ ನೇಮಕ

ಹೊಸದಿಲ್ಲಿ: ಕಳೆದ 13 ವರ್ಷಗಳಿಂದ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮಲಾಲ್ ಹುದ್ದೆ ತೊರೆದ ಹಿನ್ನೆಲೆಯಲ್ಲಿ ತೆರವಾದ ...

ವಂಚನೆಯ ಮತ್ತೊಂದು ಮಾರ್ಗ

ಸಾಮಾಜಿಕ-ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಅತ್ಯಂತ ಹೀನಾಯವಾದ ಕಾರ್ಯನಿರ್ವಹಣೆ ತೋರಿದ ಸರ್ಕಾರವೊಂದು ಹಿಂದಿಗಿಂತಲೂ ಹೆಚ್ಚಿನ ...

ತಡೆಗಟ್ಟಬಹುದಾದ ಸಾವುಗಳು

ಕಳೆದ ತಿಂಗಳು ಬಿಹಾರದ ಮುಝಫರ್‌ಪುರ್  ಜಿಲ್ಲೆಯಲ್ಲಿ ತೀವ್ರ ಮೆದುಳು ಜ್ವರಕ್ಕೆ ಬಲಿಯಾಗಿ ಪ್ರಾಣ ತೆತ್ತಿರುವ ೧೫೩ ಮಕ್ಕಳ ಸಾವುಗಳು ...

ಮೋದಿ ಸರ್ಕಾರ ಅವಧಿಯಲ್ಲಿ ’ಬೀಫ್’ ರಪ್ತು ಪ್ರಮಾಣದಲ್ಲಿ ಗರಿಷ್ಠ ಏರಿಕೆ; 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ಬೀಫ್ ರಫ್ತು

2014ರಲ್ಲಿ ಮೋದಿ ಸರಕಾರ ಅಧಿಕಾರ ವಹಿಸಿದಂದಿನಿಂದ ಎಮ್ಮೆ ಮಾಂಸದ ರಫ್ತು ಗಣನೀಯಾಗಿ ಹೆಚ್ಚಾಗಿದೆ. 2014-15ರಲ್ಲಿ 14.8 ಲಕ್ಷ ಮೆಟ್ರಿಕ್ ಟನ್ ...