ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರಿಗೂ ಹೊಣೆಗಾರಿಕೆಯಿದೆ - ಶಶಿವದನ

Source: sonews | By sub editor | Published on 10th April 2018, 5:25 PM | State News | Don't Miss |


ಕೋಲಾರ: ಶಾಲೆಗಳು ಸಹ ಸಮುದಾಯದ ಒಂದು ಭಾಗ ಆಗಿರುವುದರಿಂದ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರಿಗೂ ಮಹತ್ವದ ಹೊಣೆಗಾರಿಕೆ ಇದೆ ಎಂದು ಸಮುದಾಯದತ್ತ ಶಾಲೆ ಮೇಲ್ವಿಚಾರಕರಾದ ಶಶಿವದನ ಅಭಿಪ್ರಾಯಪಟ್ಟರು.
    
ತಾಲ್ಲೂಕಿನ ಹರಟಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಏರ್ಪಡಿಸಿದ್ದ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಪೋಷಕರಿಗೆ ವಿದ್ಯಾರ್ಥಿಗಳ ಪ್ರಗತಿಪತ್ರ ನೀಡಿ ಅವರು ಮಾತನಾಡುತ್ತಿದ್ದರು.
    
ಶಾಲೆಯೆಂದರೆ ಕೇವಲ ಶಿಕ್ಷಕರು ಮತ್ತು ಮಕ್ಕಳಿಗಷ್ಟೇ ಸೀಮಿತವಲ್ಲ. ಎಲ್ಲರ ಶೈಕ್ಷಣಿಕ ಬದುಕು ಆರಂಭವಾಗುವುದೇ ಶಾಲೆಯಿಂದ ಶಾಲೆಗಳೂ ಸಹ ಸಮುದಾಯದ ಒಂದು ಭಾಗವೇ ಆಗಿರುವುದರಿಂದ ಶಾಲೆಯ ಪ್ರಗತಿಗೆ ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಿದೆ ಎಂದರು. 
    
ಮಕ್ಕಳ ಕಲಿಕೆಯ ಬಗ್ಗೆ ನಿಗಾ ವಹಿಸಬೇಕು. ಎಲ್ಲಾ ಮಕ್ಕಳೂ ತಪ್ಪದೇ ಶಾಲೆಗೆ ಬರುವಂತಾಗಬೇಕು. ಶಾಲೆಗಳಲ್ಲಿನ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ಜಾಗೃತಿ ಉಂಟುಮಾಡುವತ್ತ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶೈಕ್ಷಣಿಕ ಪ್ರಗತಿಯ ಚಿಂತನ ಮಂಥನಗಳು ನಡೆಯುತ್ತಿರುವುದು ಸುತ್ಯಾರ್ಹ ಎಂದರು.
    
ಶಾಲೆಗಳಲ್ಲಿನ ಹಾಜರಾತಿ ಹೆಚ್ಚಿಸಲು ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಮಕ್ಕಳಿಗೆ ಕಬ್ಬಿಣಾಂಶದ ಮಾತ್ರೆ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಈ ರೀತಿಯ ಶಾಲೆಯಲ್ಲಿರುವ ಯೋಜನೆಗಳ ಬಗ್ಗೆ ಮಕ್ಕಳ ಪಾಲಕರು ಅರಿವು ಪಡೆದುಕೊಳ್ಳಲು ಸಮುದಾಯದತ್ತ ಶಾಲಾ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ವಿ. ಮುನೇಗೌಡ ತಿಳಿಸಿದರು.
    
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಿ. ಶ್ರೀನಿವಾಸ್ ಮಾತನಾಡಿ ಮಕ್ಕಳನ್ನು ಶಾಲೆಗೆ ಕಳುಹಿಸಿದ ಮಾತ್ರಕ್ಕೆ ಪಾಲಕರ ಜವಾಬ್ದಾರಿ ಪೂರ್ಣಗೊಳ್ಳುವುದಿಲ್ಲ. ಪಾಲಕರು ಶಾಲೆಗೆ ಆಗಾಗ್ಗೆ ಬೇಟಿ ನೀಡಿ ಮಕ್ಕಳ ಕಲಿಕೆಯ ಬಗ್ಗೆ ಶಿಕ್ಷಕರೊಂದಿಗೆ ಸಮಾಲೋಚನೆ ಮಾಡುವುದು ಸೂಕ್ತ ಎಂದರು.
    
ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಪಿ.ಎಂ.ಗೋವಿಂದಪ್ಪ, ಹೆಚ್.ಮುನಿಯಪ್ಪ, ಆರ್.ಮಂಜುಳ, ಕೆ.ಮಮತ, ಎಂ.ಆರ್.ಮೀನಾ, ಹೆಚ್.ಕೃಷ್ಣಪ್ಪ ಮತ್ತಿತರರು ಹಾಜರಿದ್ದು, ವಿದ್ಯಾರ್ಥಿ ಪೋಷಕರೊಂದಿಗೆ ಶೈಕ್ಷಣಿಕ ಪ್ರಗತಿಯ ಬಗ್ಗೆ ಚರ್ಚೆ ಮಾಡಿದರು.

                                        
     
 

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...