ಶಿಡ್ಲಘಟ್ಟ:ಸಮಯಕ್ಕೆ ಸರಿಯಾಗಿ ತುರ್ತು ವಾಹನ ಸೇವೆ ಲಭಿಸದೇ ರೋಗಿಯ ಪರದಾಟ

Source: tamim | By Arshad Koppa | Published on 29th September 2017, 9:16 AM | State News | Special Report |

ಶಿಡ್ಲಘಟ್ಟ,ಸೆಪ್ಟೆಂಬರ್25: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ತುರ್ತು ವಾಹನ ಸೇವೆ ಲಭಿಸದೆ ಮಹಿಳಾ ರೋಗಿಯೊಬ್ಬಳು ಚಿಕಿತ್ಸೆಗಾಗಿ ಪರದಾಡಿದ ಅಮಾನವೀಯ ಪ್ರಸಂಗ ನಡೆದಿದೆ.
    ಚಿಕಿತ್ಸೆಗೆಂದು ಬಂದಿದ್ದ ತಾಲೂಕಿನ ಗೊರಮಡುಗು ಗ್ರಾಮದ ಮುನಿಯಮ್ಮ ಎಂಬಾಕೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಲು 108 ತುರ್ತು ವಾಹನಕ್ಕೆ ಕರೆ ಮಾಡಿ ಮೂರು ತಾಸುವಾದರು ಸಾರ್ವಜನಿಕ ಆಸ್ಪತ್ರೆಯ ಮುಂದೆ ರೋಗಿ ಚಳಿ ಚಳಿಯೆಂದು ಪರಿತಪ್ಪಿಸುವಂತಾಯಿತು ಆಸ್ಪತ್ರೆಯ ವೈದ್ಯರಾಗಲಿ ಅಥವಾ ಸಿಬ್ಬಂದಿಯಾಗಲಿ ಚಳಿಯಿಂದ ನರಳುತ್ತಿದ್ದ ರೋಗಿಯನ್ನು ಕನಿಷ್ಠ ಸೌಜನಕ್ಕಾದರೂ ಆಸ್ಪತ್ರೆಯಲ್ಲಿ ಪುನಃ ಸೇರಿಸಲು ಗೋಜಿಗೆ ಹೋಗಿಲ್ಲ.
    ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಮುಖ್ಯದ್ವಾರದಲ್ಲಿ ರೋಗಿಯೊಬ್ಬಳು ತುರ್ತು ವಾಹನಕ್ಕಾಗಿ ಕಾದು ಚಳಿಯಿಂದ ನರಳುತ್ತಿದ್ದರು ಸಹ ಆಸ್ಪತ್ರೆಯ ಅಧಿಕಾರಿಗಳ ಅಮಾನವೀಯ ಧೋರಣೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿದರಿಂದ ಪುನಃ ಮತ್ತೊಂದು ತುರ್ತು ವಾಹನ ಕರೆಸಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರಕ್ಕೆ ಕಳುಹಿಸಲಾಯಿತು.
    ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾಷಣ ಬಿಗಿಯುತ್ತಾರೆ ಆದರೇ ಆಸ್ಪತ್ರೆಯಲ್ಲಿ ಮಾತ್ರ ಬಡ ರೋಗಿಗಳಿಗೆ ಸೌಲಭ್ಯಗಳು ಗಗನ ಕುಸುಮವಾಗಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿ ಆಸ್ಪತ್ರೆಯಲ್ಲಿ ತುರ್ತು ವಾಹನ ಮೂಲೆಗುಂಪಾಗಿದೆ ಅದನ್ನು ದುರಸ್ಥಿಗೊಳಿಸಲು ಆರೋಗ್ಯ ರಕ್ಷಾ ಸಮಿತಿ ಸಂಪೂರ್ಣವಾಗಿ ವಿಫಲವಾಗಿದೆ ಆಸ್ಪತ್ರೆಯಲ್ಲಿ ಐಸಿಯುಐ ಇದ್ದರು ಇಲ್ಲದಂತಾಗಿದೆ ಸ್ಕ್ಯಾನಿಂಗ್ ಯಂತ್ರ ಧೂಳು ತಿನ್ನುತ್ತಿದೆ ಎಂದು ಆಸ್ಪತ್ರೆಯ ಅವ್ಯವಸ್ಥೆಗಳ ವಿರುಧ್ಧ ಕಿಡಿಕಾರಿದರು.
    ಶಿಡ್ಲಘಟ್ಟ ನಗರ ಸೇರಿದಂತೆ ತಾಲೂಕಿನಾದ್ಯಂತ ಡೆಂಘಿ ಮತ್ತು ಚಿಕುನ್ ಗುನ್ಯಾ ಜ್ವರ ವ್ಯಾಪಕವಾಗಿ ಹರಡಿದೆ ಇದರಿಂದ ರೋಗಿಗಳ ಸಂಖ್ಯೆಯೂ ಸಹ ಅಧಿಕವಾಗಿದ್ದು ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಕೌನ್ಸಿಲಿಂಗ್ ಮೂಲಕ 10 ಶುಷ್ರೋಷಕಿಯರು ವರ್ಗಾವಣೆಯಾದರು ಪರ್ಯಾಯ ವ್ಯವಸ್ಥೆಯನ್ನು ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.

 ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ವಾಹನಕ್ಕಾಗಿ ಕಾದು ಕುಳಿತ ರೋಗಿ..
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...