ಕೋಲಾರ: ಮುಂದಿನ ಬಜೆಟ್‍ನಲ್ಲಿ ಐನೂರು ಕೋಟಿ ಕ್ರಿಶ್ಚಿಯನ್ನರಿಗೆ ಮೀಸಲಿಡಲು ಐವನ್ ಡಿಸೋಜಾ ಅಗ್ರಹ

Source: shabbir | By Arshad Koppa | Published on 18th October 2017, 8:19 AM | State News |

ಕೋಲಾರ; ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳ ಮಾದರಿಯಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಮುಂದಿನ ಬಜೆಟ್‍ನಲ್ಲಿ ಆ ನಿಗಮದಲ್ಲಿ 500 ಕೋಟಿ ರೂ ಮೀಸಲಿಡುವುದರ ಮೂಲಕ ಕ್ರಿಶ್ಚಿಯನ್ ಸಮುದಾಯದ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಅನುವು ಮಾಡಿಕೊಡಬೇಕೆಂದು ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದರು.
 ನಗರದ ಪ್ರವಾಸಿ ಮಂದಿರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 2750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಅನುದಾನದಲ್ಲಿ 800 ರೂಗಳನ್ನು ಕಾಲೋನಿಗಳ ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ ಎಂದು ಹೇಳಿದರು.
 ಸರ್ಕಾರದಿಂದ ಸಾಕಷ್ಟು ಪ್ರಮಾಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅನುದಾನ ಬಿಡುಗಡೆಯಾಗುತ್ತಿದ್ದರೂ ಕ್ರಿಶ್ಚಿಯನ್ ಸಮುದಾಯದವರಿಗೆ ಈ ಬಗ್ಗೆ ಸಮಗ್ರವಾದ ಮಾಹಿತಿ ಕೊರತೆ ಇದೆ. ಹಾಗಾಗಿ ಸರ್ಕಾರದ ಸೌಲತ್ತುಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಸರ್ಕಾರದ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕ್ರಿಶ್ಚಿಯನ್ ಸಮುದಾಯದವರಿಗೆ ಜಾಗೃತಿ ಮೂಡಿಸಲು ಜಿಲ್ಲೆಗೆ ಭೇಟಿ ನೀಡಿರುವುದಾಗಿ ತಿಳಿಸಿದರು.
  ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೆ.ಜಿ.ಎಫ್, ಶ್ರೀನಿವಾಸಪುರ, ಮಾಲೂರು, ಕೋಲಾರ ಸೇರಿದಂತೆ ಕ್ರಿಶ್ಚಿಯನ್ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುವ ಭಾಗಗಳಿಗೆ ಭೇಟಿ ಕೊಡುವುದರ ಮೂಲಕ ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡುವುದಾಗಿ ಹೇಳಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೆಂಕಟಪತಿಯಪ್ಪ, ಕೋಲಾರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಮುನಿಯಪ್ಪ,  ಮುಖಂಡರಾದ ಸಿ.ವೆಂಕಟೇಶ್, ರಾಮಕೃಷ್ಣಪ್ಪ, ಕಠಾರಿಪಾಳ್ಯ ಶಂಕರ್ ಉಪಸ್ಥಿತರಿದ್ದರು.

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...