ಕೋಲಾರ: ಅಲ್ಪಸಂಖ್ಯಾತರ ಯುವಕ-ಯುವತಿಯರಿಗೆ ಉಚಿತ ತರಬೇತಿಗಾಗಿ ಅರ್ಜಿಗಳ ಆಹ್ವಾನ

Source: shabbir ahmed | By Arshad Koppa | Published on 24th February 2017, 1:26 PM | State News |

ಕೋಲಾರ, ಫೆಬ್ರವರಿ 23 (ಕರ್ನಾಟಕ ವಾರ್ತೆ) :  2016-17ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಯುವಕ/ಯುವತಿಯರಿಗೆ ವಿವಿಧ ತರಬೇತಿ(Beauty Therapist & Hair Styling Level-1, Asst Fire Operator File and Rescue Operator, Tailor(Basic Sewing Operator), Zardori Work, Accounts Assistant using Tally, DTP and Print Publishing Assistant, computer hardware assistant, computer network assistant, bpo non voice, asst. solar pv technician, solar hot water system installation etc)ಗಳನ್ನು ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು 5ನೇ, 8ನೇ ಅಥಾವ 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ, 18-35 ರ ವಯೋಮಿತಿಯೊಳಗೆ ಇರುವ ಹಾಗೂ ವಾರ್ಷಿಕ ಆದಾಯ ರೂ.2.00 ಲಕ್ಷಗಳಿಗಿಂತ ಮೀರಿರದ  ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಹಾಗೂ ನಿಗಧಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹನುಮೇಗೌಡ ಕಾಂಪ್ಲೆಕ್ಸ್, ನರೇಂದ್ರ ಹಾಸ್ಪಿಟಲ್ ಹಿಂಭಾಗ, ಎಂ.ಬಿ ರಸ್ತೆ, ಕೋಲಾರ ರವರ ಕಛೇರಿಯಲ್ಲಿ ಪಡೆದು ಭರ್ತಿ ಮಾಡಿ ಮಾ.01 ರೊಳಗಾಗಿ ಈ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...