ಕೋಲಾರ: ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಮಂದಿರ, ಅಂಬೇಡ್ಕರ್ ಪತ್ರಿಮೆಗೆ ಸ್ಥಳಕ್ಕೆ ಮನವಿ

Source: shabbir | By Arshad Koppa | Published on 14th July 2017, 11:06 AM | State News | Guest Editorial |

ಕೋಲಾರ,ಜು.13: ಮಾಲೂರು ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಮಂದಿರ, ಅಂಬೇಡ್ಕರ್ ಪತ್ರಿಮೆಗೆ ಸ್ಥಳ ಮತ್ತು 100 ನಿವೇಶನಗಳಿಗೆ ಸ್ಥಳವನ್ನು ನೀಡುವಂತೆ ಅಖಿಲ ಭಾರತ ಅಂಬೇಡ್ಕರ್ ಅಲ್ಪಸಂಖ್ಯಾತರ ವಾಲ್ಮೀಕಿ ಪ್ರಜಾಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ. ಪ್ರಕಾಶ್‍ಬಾಬು ರವರು ಶಾಸಕ ಮಂಜುನಾಥಗೌಡ ರವರಿಗೆ ಮನವಿ ಸಲ್ಲಿಸಿದರು.
    ಮಾಲೂರು ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಹೈಮಾಕ್ಸ್ ಲೈಟ್ ಉದ್ಘಾಟನೆ ಸಮಾರಂಭಕ್ಕೆ ಆಗಮಿಸಿದ್ದ ಶಾಸಕರಿಗೆ ಮನವಿ ಸಲ್ಲಿಸಿದ ಅವರು ಗ್ರಾಮದಲ್ಲಿ ಎಸ್.ಸಿ/ಎಸ್.ಟಿ ಜನಾಂಗದ ಸುಮಾರು 700 ಕುಟುಂಬಗಳು ವಾಸವಾಗಿದ್ದು ಅನೇಕರಿಗೆ ಮನೆಗಳ ನಿರ್ಮಾಣಕ್ಕೆ  ನಿವೇಶನಗಳಿಲ್ಲದೆ ತುಂಬಾ ಅನಾನಕೂಲವಾಗಿದೆ ಕೂಡಲೇ 100 ನಿವೇಶನಗಳಿಗೆ ಸ್ಥಳಾವಕಾಶ, ಅಂಬೇಡ್ಕರ್ ಮಂದಿರ ನಿರ್ಮಾಣ ಹಾಗೂ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸ್ಥಳವನ್ನು ಕೊಡಿಸಕೊಡಬೇಕೆಂದು ಒತ್ತಾಯಿಸಿಲಾಗಿದೆ.
    ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಶಾಸಕರು ಶೀಘ್ರವಾಗಿ ಸ್ಥಳಾವಕಾಶ ಮಾಡಿಕೊಡುವುದಾಗಿ ಹಾಗೂ ಗ್ರಾಮದಲ್ಲಿ ಸಿ.ಸಿ.ರಸ್ತೆಗಳನ್ನು ನಿರ್ಮಿಸಲು ಹಾಗೂ ಸ್ಮಶಾನ ದಾರಿಯನ್ನು ಮಾಡಿಸಿಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.


 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...