ಕೋಲಾರ: ಕ್ರೀಡಾಪಟುಗಳಿಗೆ ಟ್ರಾಕ್ ಸ್ಯೂಟ್ ವಿತರಿಸಲು ಅರ್ಜಿಆಹ್ವಾನ

Source: shabbir | By Arshad Koppa | Published on 19th April 2017, 8:58 AM | Sports News |

ಕೋಲಾರ, ಏಪ್ರಿಲ್ 18 :    2016-17 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆ ಅಥವಾ ಪಂದ್ಯಾವಳಿಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರಿಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಟ್ರಾಕ್ ಸ್ಯೂಟ್‍ಗಳನ್ನು ನೀಡಲಾಗುವುದು. 
    ಅರ್ಹ ಪದಕ ವಿಜೇತ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಪಟ್ಟ ದಾಖಲೆ, ಪ್ರಶಸ್ತಿ ಪ್ರಮಾಣ ಪತ್ರ, ಪದಕಗಳ ವಿವರಗಳನ್ನು ಏ.20 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಏ.20 ರಂದು ಜಿಪಂ ಸಾಮಾನ್ಯ ಸಭೆ
ಕೋಲಾರ, ಏಪ್ರಿಲ್ 18 :    ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದಡಿ ಜಿಲ್ಲೆಯ ವಿವಿಧ ಇಲಾಖೆಗಳು 2016-17 ನೇ ಸಾಲಿನ ಮಾರ್ಚ್-2017ರ ಮಾಹೆಯ ಅಂತ್ಯದವರೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಏ.20 ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಭೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗಳ ಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್