ಕೋಲಾರ: ಆ.14 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

Source: shabbir | By Arshad Koppa | Published on 8th August 2017, 8:12 AM | State News | Guest Editorial |

ಕೋಲಾರ, ಆಗಸ್ಟ್ 07:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ದಿನಾಂಕ:14-08-2017 ರಂದು ಮಧ್ಯಾಹ್ನ 1.30 ಗಂಟೆಗೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. 
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ಉದ್ಘಾಟಿಸಲಿದ್ದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವರ್ತೂರು ಆರ್. ಪ್ರಕಾಶ್ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಕೆ.ಹೆಚ್.ಮುನಿಯಪ್ಪ ಅವರು ಘನ ಉಪಸ್ಥಿತಿ ವಹಿಸುವರು. 

ಮಾವು ಕುರಿತು ತಾಲ್ಲೂಕು ಮಟ್ಟದ ತರಬೇತಿ ಕಾರ್ಯಕ್ರಮ
ಕೋಲಾರ, ಆಗಸ್ಟ್ 07 :ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಯುಕ್ತಾಶ್ರದಲ್ಲಿ ಡಾ.ಎಂ.ಹೆಚ್. ಮರಿಗೌಡ ಅವರ ಜನ್ಮದಿನಾಚರಣೆ ಅಂಗವಾಗಿ ದಿನಾಂಕ: 08-08-2017 ರಂದು ಬೆಳಗ್ಗೆ 10.30 ಗಂಟೆಗೆ ತೋಟಗಾರಿಕೆ ದಿನಾಚರಣೆ ಹಾಗೂ ಮಾವಿನ ತೋಟಗಳಲ್ಲಿ ಸವರುವಿಕೆ ಮತ್ತು ಪುನಶ್ಚೇತನ ಕುರಿತು ತಾಲ್ಲೂಕು ಮಟ್ಟದ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರದ ಎ.ಪಿ.ಎಂ.ಸಿ ಆವರಣದಲ್ಲಿ ಆಯೋಜಿಸಲಾಗಿದೆ. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ವಹಿಸುವರು. ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಹಾಗೂ ಮಾರುಕಟ್ಟೆ ನಿಗಮದ ಅಧ್ಯಕ್ಷರಾದ ಎಲ್.ಗೋಪಾಲಕೃಷ್ಣ ಅವರು ಉದ್ಘಾಟಿಸುವರು. ಉಪಾಧ್ಯಕ್ಷರಾದ ಪಿ.ರಾಜಕುಮಾರ್ ಅವರು ಮಳಿಗೆಗಳನ್ನು ಉದ್ಘಾಟಿಸುವರು. 
ತಾಂತ್ರಿಕ ಕಾರ್ಯಕ್ರಮದಲ್ಲಿ ಬೆಂಗಳೂರು ಲಾಲ್‍ಬಾಗ್‍ನ ನಿವೃತ್ತ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಎಸ್.ವಿ. ಹಿತ್ತಲಮನಿ ಅವರು ವಯಸ್ಸಾದ ಹಾಗೂ ಅನುತ್ಪಾದಕ ಮಾವಿನ ತೋಟಗಳ ಪುನಃಶ್ಚೇತನದ ಬಗ್ಗೆ, ಬೆಂಗಳೂರು ಐ.ಐ.ಹೆಚ್.ಆರ್. ನಿವೃತ್ತ ಪ್ರಧಾನ ವಿಜ್ಞಾನಿ ಡಾ.ವೈ.ಟಿ.ಎನ್.ರೆಡ್ಡಿ ಅವರು ಮಾವಿನಲ್ಲಿ ಪೋಷಕಾಂಶಗಳು ಹಾಗೂ ಅನಿಯತಕಾಲಿಕ ಫಸಲಿನ ನಿರ್ವಹಣೆ ಕುರಿತು ಮತ್ತು ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಹಾಲಲಿಂಗಯ್ಯ ಅವರು ಮಾವಿನ ಸವರುವಿಕೆ ಹಾಗೂ ಆಕಾರ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿಕೆ ನೀಡುವರು. 

ಪ್ರವೇಶಕ್ಕೆ ಅರ್ಜಿ ಅಹ್ವಾನ
ಕೋಲಾರ, ಆಗಸ್ಟ್ 07 :ನೂತನವಾಗಿ ಪ್ರಾರಂಭವಾಗುವ ಮೌಲಾನ ಅಜಾದ್ ಮಾದರಿ ಆಂಗ್ಲ ಮಾದ್ಯಮ ಶಾಲೆಗಳ 2017-18 ನೇ ಸಾಲಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ.  ಪ್ರವೇಶ 6 ನೇ ತರಗತಿಯಿಂದ ಪ್ರಾರಂಭವಾಗುತ್ತಿದೆ. ಪ್ರತಿ ತರಗತಿಗೆ 60 ವಿದ್ಯಾರ್ಥಿಗಳಿಗೆ ದಾಖಲಾತಿ ನೀಡಲಾಗುತ್ತಿದೆ. 
ದಾಖಲಾತಿಯಲ್ಲಿ ಶೇ.75% ರಷ್ಟುನ್ನು ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಹಾಗೂ ಶೇ.25% ರಷ್ಟನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಿಸಲಾತಿ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ, ಪಠ್ಯಪುಸ್ತಕ, ಲೇಖನ ಸಾಮಾಗ್ರಿ, ಸಮವಸ್ತ್ರ ಇತರೆ ಮೂಲಭೂತ ಸೌಕರ್ಯ ಒದಗಿಸಲಾಗುವುದು. 
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೋಲಾರ ಅಥವಾ ದೂ.ನಂ.08152-220257, 998667530 ನ್ನು ಸಂಪರ್ಕಿಸಬಹುದಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...