ಕೋಲಾರ:ಚದುಮನಹಳ್ಳಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Source: shabbir | By Arshad Koppa | Published on 19th August 2017, 7:56 AM | State News | Guest Editorial |

ಕೋಲಾರ:- ತಾಲ್ಲೂಕಿನ ಚದುಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಜನಶ್ರೀ ಟ್ರಸ್ಟ್ ಹಾಗೂ ನಗರದ ರಮ್ಯ ಬುಕ್ ಸ್ಟೋರ್ಸ್ ಸಹಯೋಗದಲ್ಲಿ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಮ್ಯ ಸ್ಟೋರ್ಸ್‍ನ ಜಗದೀಶ್, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉಳ್ಳವರು ಕೈಜೋಡಿಸಬೇಕು, ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು ಎಂದು ಕೋರಿದರು.
ಸರ್ಕಾರಿ ಶಾಲೆಗಳೆಂದರೆ ಕೀಳಿರಿಮೆ ಅಗತ್ಯವಿಲ್ಲ, ಈ ದೇಶ ಕಟ್ಟಿದ ಎಲ್ಲಾ ಮಹಾನುಭಾವರು ಸರ್ಕಾರಿ ಶಾಲೆಯಲ್ಲೇ ಓದಿದ್ದು ಎಂಬುದನ್ನು ಮರೆಯಬಾರದು ಎಂದರು.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿರುವದು ವಿಷಾದದ ಸಂಗತಿ ಎಂದ ಅವರು, ಸಮಾನ ಶಿಕ್ಷಣದ ಉಳಿವಿಗಾಗಿ ಸರ್ಕಾರಿ ಶಾಲೆ ಉಳಿಸುವ ಕಾರ್ಯದಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಮುಂದಾಗಬೇಕೆಂದರು.
ಈ ಸಂದರ್ಭದಲ್ಲಿ ಶಾಲೆಯ 1ನೇ ತರಗತಿಯಿಂದ 7ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕ,ಲೇಖನ ಸಾಮಗ್ರಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರಮ್ಯಸ್ಟೋರ್ಸ್‍ನ ಶ್ರೀನಿವಾಸ್, ಜನಶ್ರಿ ಟ್ರಸ್ಟ್‍ನ ಕೃಷ್ಣಪ್ಪ ಕುಟುಂಬದವರು, ಎಸ್‍ಡಿಎಂಸಿ ಅಧ್ಯಕ್ಷೆ ಸುಧಾ, ಗ್ರಾಮದ ಮುಖಂಡರಾದ ಕೃಷ್ಣಪ್ಪ, ಜೆಡಿ ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದು, ಮುಖ್ಯ ಶಿಕ್ಷಕಿ ವೆಂಕಟಲಕ್ಷ್ಮಮ್ಮ ಸ್ವಾಗತಿಸಿ,ಶಿಕ್ಷಕರಾದ ಗೌರಮ್ಮ ನಿರೂಪಿಸಿ, ಬಿ.ಎನ್.ಮಂಜುನಾಥ್ ವಂದಿಸಿದರು.

 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...