ಕೋಲಾರ: ಜಿಲ್ಲೆಯಲ್ಲಿ ಉತ್ತಮ ಮಳೆ; ಶೇ.79 ರಷ್ಟು ಬಿತ್ತನೆ: ಡಾ.ಕೆ.ವಿ.ತ್ರಿಲೋಕ್ ಚಂದ್ರ 

Source: shabbir | By Arshad Koppa | Published on 22nd August 2017, 8:38 AM | State News | Guest Editorial |

ಕೋಲಾರ, ಆಗಸ್ಟ್ 21 :    ಜಿಲ್ಲೆಯಲ್ಲಿ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು ಶೇ.79 ರಷ್ಟು ಈಗಾಗಲೇ ಭಿತ್ತನೆಯಾಗಿದೆ. ಮುಂದಿನ ವಾರದೊಳಗೆ ಭಿತ್ತನೆ ಪ್ರಮಾಣವು ಶೇ.85 ರಷ್ಟು ಆಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದರು. 
    ನಗರದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬರ ಅಧ್ಯಯನ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರಿಗೆ ಅವಶ್ಯಕವಾಗಿರುವ ಮಿನಿಕಿಟ್‍ಗಳನ್ನು ಕೂಡಲೇ ವಿತರಿಸಿ ಕೆ.ಎಂ.ಎಫ್ ಬಳಿ 3 ಸಾವಿರ ಮಿನಿಕಿಟ್‍ಗಳು ಲಭ್ಯವಿದ್ದು ವಾರದೊಳಗೆ ವಿತರಣೆಯಾಗಬೇಕು ಎಂದು ಸೂಚಿಸಿದರು. 
    ಎಲ್ಲಾ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ರೈತರಿಗೆ ಅವಶ್ಯಕವಿರುವ ಮಿನಿಕಿಟ್‍ಗಳನ್ನು ವಿತರಣೆ ಮಾಡುವಂತೆ ನೋಡಿಕೊಂಡು ಮೇವು ಬೆಳೆ ಬೆಳೆಯಲು ಅನುಕೂಲಕರ ವಾತಾವರಣವನ್ನು ಕಲ್ಪಿಸಬೇಕೆಂದು ಸೂಚನೆ ನೀಡಿದರು. 
    ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಅವರು ಮಾತನಾಡಿ, ಬೆಳೆಹಾನಿಗೊಳಗಾದ ಕ್ಷೇತ್ರಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಬೇಟಿ ನೀಡಿ ಶೀಘ್ರ ಪರಿಹಾರ ನೀಡಬೇಕು. ಪೋಡಿ ಮುಕ್ತ ಆಂದೋಲನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು. 
    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಉಪವಿಭಾಗಾಧಿಕಾರಿ ಶುಭಾ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. 

Read These Next

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...