ಕೋಲಾರ:ತೆರಿಗೆ ಸಂಗ್ರಹದಲ್ಲಾಗುವ ಅಕ್ರಮ ತಡೆಯಲು ಜಿ ಎಸ್ ಟಿ ಸಹಕಾರಿ: ಬಿ ಬಿ ಕಾವೇರಿ

Source: shabbir | By Arshad Koppa | Published on 1st August 2017, 7:47 AM | State News | Guest Editorial |

ಕೋಲಾರ, ಜುಲೈ 31:ತೆರಿಗೆ ಸಂಗ್ರಹದಲ್ಲಿ ನಡೆಯುವಂತ ಅಕ್ರಮಗಳನ್ನು ತಡೆಯಲು ಜಿಎಸ್‍ಟಿ ಕಾಯ್ದೆಯ ಕ್ರಾಂತಿಕಾರಿ ವ್ಯವಸ್ಥೆಯಿಂದ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಬಿ ಬಿ ಕಾವೇರಿ ಅವರು ಅಭಿಪ್ರಾಯ ಪಟ್ಟರು. 


ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರ ಸರ್ಕಾರವು ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯನ್ನು ಜಾರಿಗೆ ತಂದಿದ್ದು, ತೆರಿಗೆಯನ್ನು ಕಟಾಯಿಸುವ ಬಗ್ಗೆ ಹೊಸ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಎದುರಾಗುವ ಸವಾಲುಗಳು ಹಾಗೂ ಅವುಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿಯು ಈ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಯಾವುದೇ ಸಣ್ಣ ಅಥವಾ ದೊಡ್ಡ ಸಂದೇಹಗಳಿದ್ದರೂ ನಿಸ್ಸಂಕೋಚವಾಗಿ ಕೇಳಿ ಪರಿಹಾರ ಕಂಡುಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.


ವಾಣ ಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಶ್ರೀ ಅಶೋಕ್ ಅವರು ಪಿ ಪಿ ಟಿ ಮೂಲಕ ಪ್ರಾತ್ಯಕ್ಷಿಕೆ ನೀಡಿ ಜಿ ಎಸ್ ಟಿ ಕಾಯ್ದೆಯ ನಿಯಮಗಳು, ನೋಂದಣ  ಸೇರಿದಂತೆ ತೆರಿಗೆ ಕಟಾಯಿಸುವ ಹಾಗೂ ಪಾವತಿ ಮಾಡುವ ವಿಧಾನಗಳನ್ನು ಸವಿವರವಾಗಿ ತಿಳಿಸಿಕೊಟ್ಟರು. ಶ್ರೀ ಅಶೋಕ್ ಅವರು ಅಧಿಕಾರಿಗಳು ಕೇಳಿದಂತ ಹಲವಾರು ವಾಸ್ತವ ಸಮಸ್ಯೆಗಳನ್ನು ಕಾಯಾಗಾರದಲ್ಲಿ ಚರ್ಚಿಸಿ ಅವುಗಳಿಗೆ ಪರಿಹಾರ ನೀಡಿದರು. ಜಿಎಸ್‍ಟಿಯಡಿ ಪ್ರತಿಯೊಂದು ವ್ಯವಹಾರವು ತೆರಿಗೆಗೆ ಒಳಪಡುತ್ತದೆ ಎಂದ ಅವರು ಪೂರೈಕೆ ಹಾಗೂ ಸೇವೆಗಳಿಗೂ ಜಿಎಸ್‍ಟಿಯಡಿ ಟಿ.ಡಿ.ಎಸ್ ಪಾವತಿಸುವುದು ಕಡ್ಡಾಯ ಎಂದು ತಿಳಿಸಿದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...