ಕೋಲಾರ:ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Source: shabbir | By Arshad Koppa | Published on 24th May 2017, 9:03 AM | State News |

ಕೋಲಾರ, ಮೇ 23:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಶ್ರೀನಿವಾಸಪುರ ತಾಲ್ಲೂಕಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಗಳಾದ ರೋಣೂರು, ಲಕ್ಷ್ಮೀಪುರ, ರಾಯಲ್ಪಾಡು, ಯಲ್ದೂರು, ಬಾಲಕಿಯರ ವಿದ್ಯಾರ್ಥಿನಿಲಯಗಳಾದ ರಾಯಲ್ಪಾಡು, ಶ್ರೀನಿವಾಸಪುರ ಟೌನ್ ಈ ವಸತಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಬಾಲಕ/ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. 
ಅರ್ಜಿಯೊಂದಿಗೆ ತಹಸಿಲ್ದಾರ್‍ರವರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ,  ಆಧಾರ್‍ಕಾರ್ಡ್‍ನ ಜೆರಾಕ್ಸ್ ಪ್ರತಿ, ವಾಸಸ್ಥಳದ ಪ್ರಮಾಣ ಪತ್ರ, ರೇಷನ್ ಕಾರ್ಡ್ ಝೆರಾಕ್ಸ್ ಪ್ರತಿ, ಎರಡು ಭಾವಚಿತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿ ಈ ದಾಖಲೆಗಳನ್ನು ಲಗತ್ತಿಸಬೇಕು.
ಪ್ರವರ್ಗ-1 ಮತ್ತು ಎಸ್.ಸಿ/ಎಸ್.ಟಿ ಗೆ ಸೇರಿದ ವಿದ್ಯಾರ್ಥಿಗಳ ವಾರ್ಷಿಕ ಆದಾಯ 1.00 ಲಕ್ಷಕ್ಕಿಂತ ಕಡಿಮೆ ಇರತಕ್ಕದ್ದು. 2ಎ, 2ಬಿ ಮತ್ತು 3ಎ, ಎಬಿ ಇವರ ವಾರ್ಷಿಕ ಆದಾಯ 44500/- ರೊಳಗೆ ಇರಬೇಕು.
ನಿಗದಿತ ಅರ್ಜಿಯನ್ನು ಶ್ರೀನಿವಾಸಪುರ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಛೇರಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದಿನಾಂಕ:10-06-2017ರೊಳಗೆ ಸಲ್ಲಿಸಬೇಕು.   
 ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿಸ್ತರಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶ್ರೀನಿವಾಸಪುರ  ಇವರನ್ನು ಸಂಪರ್ಕಿಸಬಹುದು. 
 
ಆಧಾರ್ ನೋಂದಣಿಯನ್ನು ಶೇಕಡ 100ರಷ್ಟು ಪೂರ್ಣಗೊಳಿಸಲುಮೇ ೨೪ ರಂದು ಕಾರ್ಯಾಗಾರ 


ಕೋಲಾರ, ಮೇ 23:ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಧಾರ್ ನೋಂದಣಿಯನ್ನು ಶೇಕಡ 100ರಷ್ಟು ಪೂರ್ಣಗೊಳಿಸಲು ಹಾಗೂ ಸರ್ಕಾರದ ಸೇವೆಗಳನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಒದಗಿಸುವ ಕುರಿತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಲು ಹಾಗೂ ಸಾರ್ವಜನಿಕರಿಗೆ ಆಧಾರ್ ಸೇವೆಗಳ ಕುರಿತಾಗಿ ಅರಿವು ಮೂಡಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಗೆ ದಿನಾಂಕ: 24-05-2017 ರಂದು ಒಂದು ದಿನದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.  ಸದರಿ ಕಾರ್ಯಾಗಾರಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಬೆಳಿಗ್ಗೆ 10-00 ಗಂಟೆಗೆ ಹಾಜರಾಗಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...