ಕೋಲಾರ:ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ:ಡಾ: ಕೆ ವಿ ತ್ರಿಲೋಕಚಂದ್ರ

Source: shabbir | By Arshad Koppa | Published on 2nd August 2017, 8:09 AM | State News | Guest Editorial |

ಕೋಲಾರ, ಆಗಸ್ಟ್ 01:ಸ್ವಾತಂತ್ರ ದಿನಾಚರಣೆಯನ್ನು ಈ ಬಾರಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಪ್ಲಾಸ್ಟಿಕ್ ನಿಷೇಧ ಹಾಗೂ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಧಿಕಾರಿ ಡಾ: ಕೆ ವಿ ತ್ರಿಲೋಕಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 
ಧ್ವಜಾರೋಹಣಾ ಸಂದರ್ಭದಲ್ಲಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯುವ ಆವರಣದಟಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಧ್ವಜಗಳ ಬಳಕೆ ಆಗದಂತೆ ಎಚ್ಚರವಹಿಸಿ, ಕಾರ್ಯಕ್ರಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 
ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ರೆಹರ್ಸಲ್ ಹಾಗೂ ಸ್ವಾತಂತ್ರೋತ್ಸವ ದಿನದಂದು ಕುಡಿಯುವ ನೀರು, ಉಪಹಾರ ಹಾಗೂ ಪ್ರಯಾಣ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.  ಸಾರ್ವಜನಿಕ ಶಿಕ್ಷಣಾಧಿಕಾರಿ ಅವರು ಕೆ.ಎಸ್.ಆರ್.ಟಿ.ಸಿ ಸಂಸ್ಥೆಯೊಂದಿಗೆ ಸಕಾಲದಲ್ಲಿ ಸಮನ್ವಯ ನಡೆಸಿ ಅಗತ್ಯವಿರುವ ವಾಹನಗಳಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು, ಹಾಗೂ ಅಂದಿನ ಮಧ್ಯಾಹ್ನದ ಬಿಸಿಯೂಟವನ್ನು ಮುಂಜಾನೆಯ ಉಪಹಾರವಾಗಿ ನೀಡಿ ನಂತರ ಮೈದಾನಕ್ಕೆ ಮಕ್ಕಳನ್ನು ಕರೆತರುವಂತೆ ಸೂಚಿಸಿದರು.  
ಸಭೆಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಸುಗಮವಾಗಿ ನಡೆಸಲು ಹಲವಾರು ಉಪಸಮಿತಿಗಳನ್ನು ರಚಿಸಲಾಯಿತು. ಪಥಸಂಚಲನ ಸಂಬಂಧಿಸಿದಂತೆ ನಿರ್ವಹಣೆ ಕಾರ್ಯಕ್ಕೆ ಪರೇಡ್‍ಸಮಿತಿ, ಕಾರ್ಯಕ್ರಮಗಳ ಪ್ರತಿ ಅಂಶದ ವಿವರ ತಯಾರಿಸಿ, ಗಣ್ಯರು, ಮಾಧ್ಯಮದವರು ಹಾಗೂ ಇತರೆ ಅತಿಥಿಗಳಿಗೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಿಸಲು ಸ್ವಾಗತ ಸಮಿತಿ, ಸಂಸ್ಕøತಿಕ ಕಾರ್ಯಕ್ರಮಗಳ ಸಮಿತಿ ಹಾಗೂ ಪ್ರಚಾರ ಸಮಿತಿಗಳನ್ನು ರಚಿಸಲಾಯಿತು.
ಈ ಎಲ್ಲಾ ಉಪಸಮಿತಿಗಳು ತಮ್ಮ ಮಟ್ಟದಲ್ಲೆ ಸಭೆ ನಡೆಸಿ ಅಗತ್ಯ ಸಿದ್ದತಾ ಕಾರ್ಯಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಆಗಸ್ಟ್ 10ರೊಳಗೆ ಕೈಗೊಂಡ ಕ್ರಮಗಳ ಬಗ್ಗೆ ತಮಗೆ ತಿಳಿಸಲು ಸೂಚಿಸಿದರು. ವೇದಿಕೆ, ಶಾಮಿಯಾನ, ಅಲಂಕಾರ, ಕುಡಿಯುವ ನೀರಿನ ಪೂರೈಕೆ, ಆಂಬುಲನ್ಸ್, ಅಗ್ನಿ ಶ್ಯಾಮಕ ವಾಹನ ಸೇರಿದಂತೆ ಇತರೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸಂಬಂಧಪಟ್ಟ ಅಧಿಕಾರಿಗಳು ವ್ಯವಸ್ಥೆಗೋಲಿಸಬೇಕೆಂದು ಅವರು ತಿಳಿಸಿದರು.
ಧ್ವಜಾರೋಹಣ ಮೈದಾನದ ಸುತ್ತಮುತ್ತಲು ಸ್ವಚ್ಛತೆ ಕುರಿತು ಇರುವಂತ ಸಮಸ್ಯೆಯನ್ನು ಈ ಕೂಡಲೇ ಬಗೆಹರಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಸ್ವಾತಂತ್ರ ದಿನಾಚರಣೆಯು ಕೇವಲ ಸರ್ಕಾರಿ ಅಧಿಕಾರಿಗಳ ಕಾಂiÀರ್iಕ್ರಮವಾಗದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳಲು ಸೂಕ್ತ ಪ್ರಚಾರ ನೀಡುವಂತೆ ಮಾಧ್ಯಮಗಳನ್ನು ಕೋರಿದರು.   
ಸಭೆಯಲ್ಲಿ ಕೋಲಾರ ಉಪವಿಭಾಗಾಧಿಕಾರಿ ಶುಭ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...