ಕೋಲಾರ:ಗ್ರಾಮೀಣ ಕೃಷಿ ಸೇವಾ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ

Source: shabbir | By Arshad Koppa | Published on 22nd September 2017, 3:33 PM | State News |

ಕೋಲಾರ, ಸೆಪ್ಟೆಂಬರ್ 21 :    ಗ್ರಾಮೀಣ ಯುವಕರನ್ನು ಕೃಷಿಯ ಕಡೆಗೆ ಆಕರ್ಷಿಸಲು ಮತ್ತು ಸ್ಥಳೀಯವಾಗಿ ಸಣ್ಣ ಕೃಷಿ ಉಪಕರಣಗಳ ತಯಾರಿಕೆ ಸೌಲಭ್ಯದೊಂದಿಗೆ ಕೃಷಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸಲು ಮತ್ತು ಯುವ ರೈತರನ್ನು ಕೃಷಿಯಲ್ಲೇ ಉಳಿಸಿಕೊಳ್ಳುವಲ್ಲಿ ಅವರಿಗೆ ಉದ್ಯೋಗಾವಕಾಶ ಸೃಷ್ಠಿಸಲು ಗ್ರಾಮೀಣ ಕೃಷಿ ಯಂತ್ರೋಪಕರಣ/ ಸೇವಾ ಕೇಂದ್ರಗಳ ಸ್ಥಾಪನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
    ಕೇಂದ್ರಗಳಲ್ಲಿ ಟ್ರಾಕ್ಟರ್, ಪವರ್ ಟಿಲ್ಲರ್, ಪಂಪ್‍ಸೆಟ್, ಸಸ್ಯ ಸಂರಕ್ಷಣಾ ಉಪಕರಣಗಳು, ಸೂಕ್ಷ್ಮ ನೀರಾವರಿ ಘಟಕಗಳು ಮತ್ತು ಕೊಳವೆ ಬಾವಿಗಳ ದುರಸ್ತಿಗಳನ್ನೊಳಗೊಂಡಂತೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಎಲ್ಲಾ ಯಂತ್ರೋಪರಕಣಗಳ ದುರಸ್ತಿಯನ್ನು ಮಾಡುವುದು. 
    ಕೃಷಿ ಇಂಜಿನಿಯರಿಂಗ್ ಡಿಪ್ಲೊಮೊ, ಕೃಷಿಯಲ್ಲಿ ಡಿಪ್ಲಮೊ, ಆಟೋ ಮೊಬೈಲ್ ಡಿಪ್ಲಮೊ, ಮೆಕ್ಯಾನಿಕಲ್ ಡಿಪ್ಲಮೊ, ಐಟಿಐ, ಪಿ.ಯು.ಸಿ ತೇರ್ಗಡೆ ಹೊಂದಿದ ಗ್ರಾಮೀಣ ಅಭ್ಯರ್ಥಿಗಳನ್ನು ಈ ಯೋಜನೆಗೆ ಪರಿಗಣ ಸಲಾಗುವುದು. ಕೃಷಿ ವಿದ್ಯಾಲಯದಿಂದ ಕೃಷಿ ಯಂತ್ರೋಪಕರಣಗಳ ದುರಸ್ತಿ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ರೈತ ಕುಟುಂಬಕ್ಕೆ ಸೇರಿದವರಾಗಿರಬೇಕು. 
    ಕೋಲಾರ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕುಗಳನ್ನು ಸಾಮಾನ್ಯ ವರ್ಗಕ್ಕೂ ಹಾಗೂ ಬಂಗಾರಪೇಟೆ ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಮಾಲೂರು ತಾಲ್ಲೂಕು ಪರಿಶಿಷ್ಟ ವರ್ಗಕ್ಕೆ ಮೀಸರಿಸಿದೆ. ಕೋಲಾರ ತಾಲ್ಲೂಕಿನ ಹೋಳೂರ, ಮುಳಬಾಗಿಲು ತಾಲ್ಲೂಕಿನ ದುಗ್ಗಸಂದ್ರ, ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ, ಮಾಲೂರು ತಾಲ್ಲೂಕಿನ ಮಾಸ್ತಿ ಹಾಗೂಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಗಳಲ್ಲಿ ಈ ಗ್ರಾಮೀಣ ಕೃಷಿ ಯಂತ್ರೋಪಕರಣ ಅಥವಾ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ನಿಗದಿ ಪಡಿಸಲಾಗಿದೆ. 
    ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷದೊಳಗಿರಬೇಕು. ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ತಾಲ್ಲುಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ದಿನಾಂಕ:07-10-2017 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. 

ಕೋಲಾರ: ಕೊಲ್ಲೂರು ಕ್ಷೇತ್ರ ಮಹಾತ್ಮೆ ಕುರಿತ ಯಕ್ಷಗಾನ
ಕೋಲಾರ, ಸೆಪ್ಟೆಂಬರ್ 21 :     ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರಾವಳಿ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ, ನಿಡ್ಲೆ ಧರ್ಮಸ್ಥಳದ ವೃತ್ತಿ ಕಲಾವಿದರಿಂದ “ಕೊಲ್ಲೂರು ಕ್ಷೇತ್ರ ಮಹಾತ್ಮೆ” ಎಂಬ ಪೌರಾಣ ಕ ನಾಟಕವನ್ನು ಯಕ್ಷಗಾನ ರೂಪದಲ್ಲಿ ನಡೆಸಲಾಗುವುದು.
    ನಗರದ ಟಿ.ಚೆನ್ನಯ್ಯ ರಂಗಮಂದಿರಲ್ಲಿ ದಿನಾಂಕ:23-09-2017 ರಂದು ಸಂಜೆ 6 ಗಂಟೆಗೆ ನಡೆಯುವ ಪೌರಾಣ ಕ ನಾಟಕವನ್ನು ಕೆ.ಜಿ.ಎಫ್‍ನ ಬೆಮೆಲ್ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕರಾದ ಅಶೋಕ್‍ಕುಮಾರ್ ಬೆಳ್ಳೆರವರು ಉದ್ಘಾಟನೆ ಮಾಡುವರು.  ಜಿಲ್ಲಾ ಪ್ರಗತಿ ಗ್ರಾಮೀಣ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ವೈ.ರಾಘವೇಂದ್ರ ಭಟ್‍ರವರು ಮುಖ್ಯ ಅತಿಥಿಗಳಾಗಿ  ಆಗಮಿಸಲಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ಎಂ.ರವಿಕುಮಾರ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...