ಕೋಲಾರ:ಖೇಲ್ ಇಂಡಿಯಾ-ರಾಜ್ಯಮಟ್ಟದ ಪಂದ್ಯಾವಳಿಗೆ ಹೊರಟ ಮುಳಬಾಗಿಲು ವಿದ್ಯಾರ್ಥಿನಿಯರಿಗೆ ಶುಭ ಹಾರೈಕೆ

Source: shabbir ahmed | By Arshad Koppa | Published on 15th January 2017, 10:03 AM | Sports News |

ಕೋಲಾರ, ಜ ೧೫: ಖೇಲ್ ಇಂಡಿಯಾ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ ರಾಜ್ಯಮಟ್ಟದ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಪ್ರಯಾಣ ಬೆಳೆಸಿದ ಮುಳಬಾಗಿಲು ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿಯರನ್ನು ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಇ.ಶ್ರೀನಿವಾಸಗೌಡ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಶುಭ ಕೋರಿದ ಅವರು, ಜಿಲ್ಲಾಮಟ್ಟದಲ್ಲಿ ಮಾಡಿದ ಸಾಧನೆ ರಾಜ್ಯಮಟ್ಟದಲ್ಲೂ ಪುನರಾವರ್ತನೆಯಾಗಲಿ, ಆತ್ಮಸ್ಥೈರ್ಯದಿಂದ ಪಾಲ್ಗೊಳ್ಳಿ ಗೆಲುವಿನೊಂದಿಗೆ ವಾಪಸ್ಸು ಬನ್ನಿ ಎಂದು ತಿಳಿಸಿದರು.
ಗೆಲುವಿಗಿಂತ ಮುಖ್ಯವಾಗಿ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಶಿಸ್ತು,ಕ್ರೀಡಾ ನಿಯಮ ಪಾಲಿಸುವ ಮೂಲಕ ಜಿಲ್ಲೆಯ ಘನತೆ ಎತ್ತಿಹಿಡಿಯಿರಿ ಎಂದು ಕಿವಿಮಾತು ಹೇಳಿದರು.


ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕ ರಹೀಂಷರೀಫ್ ಮತ್ತಿತರರಿದ್ದರು.

ಕೋಲಾರ ಜಿಲ್ಲಾ ಮಟ್ಟದ ಖೇಲ್ ಇಂಡಿಯಾ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ರಾಜ್ಯಮಟ್ಟಕ್ಕೆ ತೆರಳಿದ ವಿದ್ಯಾರ್ಥಿನಿಯರನ್ನು ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಇ.ಶ್ರೀನಿವಾಸಗೌಡ ಬೀಳ್ಕೊಟ್ಟರು. 

Read These Next

ಹ್ಯಾಮರ್ ಥ್ರೋ; ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಭಟ್ಕಳ: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಬುಧವಾರ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ...

ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕರೆ

ಭಟ್ಕಳ:  ವಿದ್ಯಾರ್ಥಿಗಳು  ಪಟ್ಯಪುಸ್ತಕದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿದ್ದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ...