ಕೋಲಾರ:ಪ್ರತಿ ಹಾಲು ಉತ್ಪಾದಕನೂ ಯಶಸ್ವಿನಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಬೈರಾರೆಡ್ಡಿ ಕರೆ

Source: shabbir | By Arshad Koppa | Published on 12th August 2017, 8:16 AM | State News | Guest Editorial |

ಕೋಲಾರ,ಆ.11: ಪ್ರತಿಯೊಬ್ಬ ಹಾಲು ಉತ್ಪಾದಕರ ಯಶಸ್ವಿನಿ ಯೋಜನೆಯ ಪಲಾನುಭವಿಗಳಾಗಿ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋಚಿಮುಲ್ ನಿರ್ದೇಶಕ ಎಂ.ಬೈರಾರೆಡ್ಡಿ ಹೇಳಿದರು.
     ನಮ್ಮ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ ಕೋಲಾರ, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಶಿಬಿರ ಕಚೇರಿ ಶ್ರೀನಿವಾಸಪುರ ಹಾಗೂ ಸಹಕಾರ ಇಲಾಖೆ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ನೌಕರರ ಭನವದಲ್ಲಿ ಹಮ್ಮಿಕೊಂಡಿದ್ದ ಶ್ರೀನಿವಾಸಪುರ ತಾಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ 2017-18ನೇ ಸಾಲಿನ ಯಶಸ್ವಿನಿ ಯೋಜನೆ ಅನುಷ್ಟಾನ ಮತ್ತು ಜವಾಬ್ದಾರಿಗಳು ಕುರಿತು ಒಂದು ದಿನದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.


    2016-17ನೇ ಸಾಲಿನ ಯಶಸ್ವಿನಿ ಯೋಜನೆಯ ಬಗ್ಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರೈತರಿಗೆ ಅನಕೂಲವಾಗುವ ರೀತಿ ಸದರಿ ಯೋಜನೆಯ ಪ್ರಯೋಜನ ಪಡೆಯಲು ಅರಿವು ಮೂಡಿಸಬೇಕು.  ಶ್ರೀನಿವಾಸಪುರ ತಾಲೂಕಿನ ಹಾಲು ಉತ್ಪಾದಕರು ಯಶಸ್ವಿನಿ ಯೋಜನ ನೊಂದಣೆಯಲ್ಲಿ ಕಡಿಮೆಯಾಗಿದ್ದು, ಇನ್ನು ಮುಂದಾದರೂ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಿಕೊಂಡು ಸರ್ಕಾರದ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
    ಎಸ್.ಜೀಡುಮಾಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಕಳೆದ ವರ್ಷ ತಾಲೂಕಿನಲ್ಲೇ ಅತಿ ಹೆಚ್ಚಿಗೆ ಯಶಸ್ವಿನಿ ಯೋಜನೆಗೆ ನೊಂದಣೆ ಮಾಡಿಸಿ ಪ್ರಶಸ್ತಿಯನ್ನು ಪಡೆದಿರುತ್ತದೆ. ಈ ಭಾರಿಯೂ ಸಹ ಈ ಸಂಘವೇ ಪ್ರಶಸ್ತಿ ಪಡೆಯುವ ಮುಂಚೂಣಿಯಲ್ಲಿದೆ. 
    ಪಶು ಆಹಾರ ದರವನ್ನು ಹೆಚ್ಚಿಸಲು ಕೆ.ಎಂ.ಎಫ್ ಸೂಚಿಸಿತ್ತು. ಆದರೆ ಈಗಿರುವ ದರವನ್ನೇ ರೈತರಿಗೆ ಹೊರೆಯಾಗದಂತೆ ಮುಂದುವರೆಸಲು ತೀರ್ಮಾನ ಕೈಗೊಂಡಿದ್ದು ಅದೇ ದರವನ್ನು ಮುಂದುವರೆಸಿರುವುದಾಗಿ ತಿಳಿಸಿದರು.
    ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್.ಗೋಪಾಲಕೃಷ್ಟ ಮಾತನಾಡಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಾನೂನಿನ ಅರಿವನ್ನು ಅರಿತು ತಮ್ಮ ಜವಾವ್ದಾರಿ ಮತ್ತು ಕರ್ತವ್ಯಗಳನ್ನು ಕಾರ್ಯನಿರ್ವಹಿಸಿದಾಗ ಮಾತ್ರ ಸಹಕಾರ ಸಂಘಗಳ ಅಭಿವೃದ್ಧಿ ಸಾಧ್ಯ ಎಂದರು.
    ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಅಧ್ಯಕ್ಷೆ ವಹಿಸಿ ಮಾತನಾಡಿ ಒಕ್ಕೂಡದಿಂದ ಆಗ್ಗಿಂದ್ದಾಗೆ ವಿವಿಧ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಭೇತಿ  ಮತ್ತು ಕಾರ್ಯಾಗಾರಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದು ಇದರ ಪ್ರಯೋಜನವನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸದಸ್ಯರು ಪಡೆದುಕೊಳ್ಳುವಂತೆ ತಿಳಿಸಿದರು.
    ಇತ್ತೀಚೆಗೆ ಕಾನೂನು ತಿದ್ದುಪಡಿಗಳು, ಯಶಸ್ವಿನಿ ಯೋಜನೆ, ಶುದ್ಧವಾದ ಹಾಲನ್ನು ಒಕ್ಕೂಟಕ್ಕೆ ಸರಬರಾಜು ಮಾಡುವ ಮೂಲಕ ಸ್ವಾವಲಂಭಿ ಜೀವನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. 
    ಶ್ರೀನಿವಾಸಪುರ ಹಾಲು ಒಕ್ಕೂಟದ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಬಿ.ಶಿವರಾಜ್ ರವರು ಜನಶ್ರೀ, ಯಶಸ್ವಿನಿ, ಪ್ರೋತ್ಸಾಹಧನ, ವಿಮಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
    ಕೆ.ಎಂ.ಜಗದೀಶ್, ಗೀತಾ ರವರು ವಿವಿಧ ಯೋಜನೆಗಳ ಬಗ್ಗೆ ಉಪನ್ಯಾಸ ನೀಡಿದರು.
    ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಂ.ವೆಂಕಟರೆಡ್ಡಿ, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಎಂ.ನಾಗರಾಜ್, ಡಿ.ಆರ್.ರಾಮಚಂದ್ರೇಗೌಡ, ತಾಲೂಕಿನ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ  ಬಿ.ಆರ್.ನಾಗೇಶ್‍ಗೌಡ, ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಆರ್.ಶಿವಶಂಕರ್ ಉಪಸ್ಥಿತರಿದ್ದರು.
    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಕೆ.ಎಂ. ಸ್ವಾಗತಿಸಿ, ನಿರೂಪಿಸಿದರು. 


ಡಿಸಿಸಿ ಬ್ಯಾಂಕ್ ಪ್ರಗತಿಪರಿಶೀಲನಾ ಸಭೆ

ಕೋಲಾರ:- ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಪ್ರಗತಿ ಪರಿಶೀಲನೆ ಹಾಗೂ ಬ್ಯಾಂಕಿನ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಜಿಲ್ಲೆಯ ಬ್ಯಾಂಕಿನ ಎಲ್ಲಾ ನೌಕರರು,ಅಧಿಕಾರಿಗಳ ಸಭೆಯನ್ನು ಆ.12 ರ ಶನಿವಾರ ಬೆಳಗ್ಗೆ 11 ಗಂಟೆಗೆ ನಗರದ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಕರೆಯಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ವಹಿಸಲಿದ್ದು, ಸಭೆಯಲ್ಲಿ ಎರಡೂ ಜಿಲ್ಲೆಗಳ ಬ್ಯಾಂಕಿನ ಎಲ್ಲಾ ನಿರ್ದೇಶಕರು ಉಪಸ್ಥಿತರಿರುವರು. 

 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...