ಕೋಲಾರ: ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಜನಜಾಗೃತಿ ಕಾರ್ಯಕ್ರಮ

Source: shabbir | By Arshad Koppa | Published on 14th July 2017, 11:04 AM | State News | Special Report |

ಕೋಲಾರ ಜು 13: ಶಾಶ್ವತ ನೀರಾವರಿ ಹೋರಾಟ ಸಮಿತಿಯು ಇಂದು ಹಳ್ಳಿಗಳಿಗೆ ತೆರಳಿ ಜನರಲ್ಲಿ ನೀರಿನ ಸಮಸ್ಯಗಳ ಬಗ್ಗೆ ಜಾಗೃತಿ ಮೂಡಿಸಿದರು. 
    ಸಂಚಾಲಕರು ಅಹಿಂದ ಮಂಜುನಾಥ್ ಮಾತನಾಡಿ ಶಾಶ್ವತ ನಿರಾವರಿ ಹೋರಾಟವು ಒಂದು ವರ್ಷಗಳ ಸುಧೀರ್ಘವದಿ ಹೋರಾಟ ಮಾಡಿ ಕರ್ನಾಟಕದಾದ್ಯಂತ ಆದೋಲ ನಡೆಸಿ ಜನರಲ್ಲಿ ಪ್ರಸ್ತುತ ಕುಡಿಯುವ ನೀರಿನ ಅಭಾವ ತಲೆದೋರಿದ್ದು, ಮುಂದಿನ ದಿನಗಳಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಅಗತ್ಯ ತಕ್ಕಂತೆ ಬಳಸಿ ಹಾಗೂ ಮುಂದಿನ ಹೋರಾಟಗಳಲ್ಲಿ ಮನೆಗೊಬ್ಬರಂತೆ ಭಾಗವಹಿಸಲು ಮನವಿ ಮಾಡಿದರು ಕೆ.ಸಿ. ವ್ಯಾಲಿ, ಯರಗೋಳ್ ಯೋಜನೆಯ ಕಾಮಗಾರಿಗಳು ವಿಳಂಭವಾಗಂದತೆ ಜಿಲ್ಲಾಡಳಿತ ಜವಾಬ್ದಾರಿಯುತವಾಗಿ ಕಾಮಗಾರಿಗಳನ್ನು ಕಾಲಕಾಲಕ್ಕೂ ಪರಿಶೀಲಿಸಿ ಆದಷ್ಟು ಬೇಗ ಕಾಮಗಾರಿ ಮುಗಿಸಿ ಕೋಲಾರ ಜಿಲ್ಲೆಯ ಜನತೆಗೆ ನೀರು ಪೂರೈಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು. 
    ಸಂಚಾಲಕ ಕುರುಬರಪೇಟೆ ವೆಂಕಟೇಶ್ ಮಾತನಾಡಿ  ಕೆ.ಸಿ. ವ್ಯಾಲಿ ನೀರು ಪೂರೈಸುವ ಕಾಮಗಾರಿಗೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಇದೇ ಜುಲೈ 15ರಂದು ಎ.ಹೆಚ್.ಎ.ಐ. ಮತ್ತು ಲ್ಯಾಂಕೋ ಕಂಪನಿಗಳ ವಿರುದ್ಧ ಹೋರಾಟ ಮಾಡುವುದಾಗಿ ತಿಳಿಸಿದ್ದೇವು. ಆದರೆ ಕೋಲಾರ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ಕೆ.ಸಿ. ವ್ಯಾಲಿ ಕಾಮಗಾರಿಗೆ ಯಾವುದೇ ತೊಂದರೆ ಇಲ್ಲವೆಂದು ತಿಳಿಸಿದ ಹಿನ್ನಲೆಯಲ್ಲಿ ನಾವು ಧರಣ ಯನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ತಿಳಿಸಿರುತ್ತಾರೆ. 
    ಇದೇ ಸಂದರ್ಭದಲ್ಲಿ ಮೂರ್ತಿ, ಹೋಟೆಲ್ ಶಂಕರಪ್ಪ, ಜಾನಕಿರಾಮ್,ಮುನಿರಾಜು, ಚರಣ್, ನವೀನ್, ವಿದ್ಯಾಶಂಕರ್ ಮುಂತಾದವರು ಉಪಸ್ಥಿತರಿದ್ದರು.

(ಅಹಿಂದ ಮಂಜುನಾಥ್)
ನೀರಾವರಿ ಹೋರಾಟ ಸಮಿತಿ, ಕೋಲಾರ ಜಿಲ್ಲೆ.
    


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...