ಕೋಲಾರ:ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೌಶಲ್ಯ ತರಬೇತಿ ಅವಶ್ಯಕ; ಮಹಾಲಕ್ಷ್ಮೀ 

Source: so english | By Arshad Koppa | Published on 15th July 2017, 8:10 PM | Coastal News | Special Report |

ಕೋಲಾರ, ಜುಲೈ 15:ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೌಶಲ್ಯ ಅಭಿವೃದ್ದಿ ತರಬೇತಿಯು ಅತ್ಯವಶ್ಯಕವಾಗಿದ್ದು ಎಲ್ಲರೂ ಈ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಮಹಾಲಕ್ಷ್ಮೀ ಅವರು ತಿಳಿಸಿದರು. 


ನಗರದ ನ್ಯೂ ಕೋಲಾರ ನರ್ಸಿಂಗ್ ಹೋಂ ಕಟ್ಟಡದ ಮುಂಭಾಗ ರೂಮನ್ ಟೆಕ್ನಾಲಜೀಸ್ ಸಂಸ್ಥೆಯ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಪ್ರಾಯೋಜಿತ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 


ದೇಶದಲ್ಲಿ ಹೆಚ್ಚು ಮಂದಿ ಯುವಕ-ಯುವತಿಯರು ಇದ್ದಾರೆ. ಇವರಿಗೆಲ್ಲಾ ಉದ್ಯೋಗಗಳನ್ನು ಕಲ್ಪಿಸಿಕೊಡಬೇಕಾದುದು ಸರ್ಕಾರಗಳ ಕರ್ತವ್ಯ. ಇದಕ್ಕಾಗಿಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯೋಗಕ್ಕೆ ಅವಶ್ಯಕವಾದ ತರಬೇತಿಗಳನ್ನು ನೀಡಲು ಆದ್ಯತೆ ನೀಡಿವೆ ಎಂದರು. 
ಯುವಕರಿಗೆ ಉದ್ಯೋಗ ಕಲ್ಪಿಸಲು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರ್ಕಾರವು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುತ್ತಿವೆ. ಈ ಸಂಸ್ಥೆಗಳ ಮೂಲಕ ಯುವಕರಿಗೆ ಉಚಿತವಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವುದೇ ಅಲ್ಲದೆ ಉದ್ಯೋಗವನ್ನೂ ಸಹ ಕಲ್ಪಿಸಿಕೊಡುವ ಕೆಲಸವನ್ನು ಮಾಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. 
ಹೆಣ್ಣು ಮಕ್ಕಳು ಕೇವಲ ಮನೆಯ ಕೆಲಸಕ್ಕೆ ಮಾತ್ರ ಸೀಮಿತವಾಗಬಾರದು. ಇಂತಹ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಪಡೆದುಕೊಂಡು ಉದ್ಯೋಗಗಳನ್ನು ಪಡೆದುಕೊಳ್ಳಬೇಕು. ಆ ಮೂಲಕ ಹೆಣ್ಣು ಮಕ್ಕಳು ಸ್ವತಃ ತಮ್ಮ ಕಾಲಿನ ಮೇಲೆ ತಾವು ನಿಲ್ಲಬೇಕು ಎಂದು ತಿಳಿಸಿದರು. 
ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಪ್ರಸ್ತುತ ಪೈಪೋಟಿ ಯುಗದಲ್ಲಿ ಉದ್ಯೋಗ ಪಡೆದುಕೊಳ್ಳಲು ಕೌಶಲ್ಯ ಅವಶ್ಯಕ. ಶಿಕ್ಷಣ ಮತ್ತು ವೃತ್ತಿ ಶಿಕ್ಷಣದ ನಡುವೆ ಸಾಕಷ್ಟು ಅಂತರವಿದೆ. ಉದ್ಯೋಗ ಮತ್ತು ನಿರುದ್ಯೋಗದ ನಡುವೆ ಒಂದು ಕೊರೆತೆ ಇದೆ. ಅದೇ ಕೌಶಲ್ಯವಾಗಿದೆ. ಉದ್ಯೋಗಕ್ಕೆ ಕೌಶಲ್ಯ ಅವಶ್ಯಕವಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿವೆ ಎಂದು ಹೇಳಿದರು. 
ಉದ್ಯೋಗ ಅರಿಸಿ ಹೋಗುವ ಎಷ್ಟೋ ಮಂದಿಗೆ ಅವಶ್ಯಕವಾದ ಶಿಕ್ಷಣ ಪಡೆದಿದ್ದರೂ ಸಹ ಕೌಶಲ್ಯಗಳ ಕೊರತೆಯಿಂದಾಗಿ ಸಂದರ್ಶನಗಳಲ್ಲಿ ಯಶಸ್ವು ಸಾಧಿಸಲು ಸಾಧ್ಯವಾಗುತ್ತಿಲ್ಲ. ಸಂದರ್ಶನಗಳಲ್ಲಿ ಕೇವಲ ಅಂಕಪಟ್ಟಿಗಳನ್ನು ಮಾತ್ರವಲ್ಲದೆ ನಡತೆ, ಜ್ಞಾನ, ವೇಷಭೂಷಣ, ಸಂವಹನ ಶೈಲಿ ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಳ್ಳುತ್ತಾರೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಕೊರತೆಗಳನ್ನು ನೀಗಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. 
ರೂಮನ್ ಟೆಕ್ನಾಲಜೀಸ್‍ನ ವ್ಯವಸ್ಥಾಪಕ ನಿರ್ದೇಶಕ ಮನೀಷ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಮೂರು ತಿಂಗಳು ತರಬೇತಿಯನ್ನು ನೀಡಿದ ನಂತರ ಉದ್ಯೋಗವನ್ನೂ ಸಹ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು. 
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಪ್ರಸಾದ್ ಬಾಬು, ವಾರ್ತಾ ಸಹಾಯಕರಾದ ರಮೇಶ್, ಪತ್ರಕರ್ತರಾದ ಸಿ.ಜಿ.ಮುರಳಿ, ಸಂಸ್ಥೆಯ ಪ್ರತಿನಿಧಿಗಳಾದ ಮಂಜುನಾಥ್, ವಿಕ್ರಂ, ರಮೇಶ್ ಪಾಟಿಲ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...