ಕೋಲಾರ: ಪತ್ರಿಕೋದ್ಯಮ ಸ್ನಾನತಕೋತ್ತರ ಪದವೀಧರರಿಗೆ ತರಬೇತಿ

Source: shabbir | By Arshad Koppa | Published on 22nd August 2017, 8:39 AM | State News | Guest Editorial |

ಕೋಲಾರ, ಆಗಸ್ಟ್ 21:    ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಐದು ಮಂದಿಗೆ ಹಾಗೂ ಇತರೆ ವರ್ಗಗಳ ಐದು ಮಂದಿಗೆ ಪ್ರಮುಖ ದಿನಪತ್ರಿಕೆ/ ವಿದ್ಯುನ್ಮಾನ ಮಾಧ್ಯಮಗಳ ಕಚೇರಿಯಲ್ಲಿ ತರಬೇತಿ ನೀಡಲಾಗುವುದು. 
    ಆಯ್ಕೆಯನ್ನು ಮೆರಿಟ್ ಆಧಾರದ ಮೇಲೆ ಮಾಡಲಾಗುತ್ತದೆ. ಅಭ್ಯರ್ಥಿಗಳು 28 ವರ್ಷದೊಳಗಿನವರಾಗಿರಬೇಕು. ತರಬೇತಿ ಅವಧಿಯು 10 ತಿಂಗಳಾಗಿದ್ದು ಈ ಅವಧಿಯಲ್ಲಿ ತಲಾ ಮಾಸಿಕ 10 ಸಾವಿರ ರೂಗಳ ಗೌರವಧನ ನೀಡಲಾಗುವುದು. 
    ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸ್ವ ವಿವರ, ವಿದ್ಯಾರ್ಹತೆ ಪತ್ರಗಳು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಮತ್ತು ಛಾಯಾಚಿತ್ರಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ [email protected] ಮೂಲಕ ಅಥವಾ ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-56001 ಈ ವಿಳಾಸಕ್ಕೆ ಅಂಚೆ ಮೂಲಕ ದಿನಾಂಕ:31-08-2017ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ.ಸಿದ್ದರಾಜು ಅವರು ತಿಳಿಸಿದ್ದಾರೆ. 

ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ
ಕೋಲಾರ, ಆಗಸ್ಟ್ 21 ;    ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ದಿನಾಂಕ: 11-09-2017 ರಿಂದ 17-09-2017 ರವರೆಗೆ ಕೋಲಾರ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಆಸಕ್ತ ನಾಗರೀಕರು ಅರ್ಜಿಗಳನ್ನು ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೋಲಾರ ಇಲ್ಲಿ ಪಡೆದು ದಿನಾಂಕ: 10-09-2017 ರೊಳಗಾಗಿ ಸಲ್ಲಿಸಬಹುದಾಗಿದೆ. ಮಹಿಳೆಯರಿಗೆ ವಿಶೇಷ ಆದ್ಯತೆ ಇರುತ್ತದೆ ಎಂದು ಸಶಸ್ತ್ರ ಆರಕ್ಷಕ ನಿರೀಕ್ಷಕರಾದ ಕೆ.ಆರ್.ರಘು ಅವರು ತಿಳಿಸಿದ್ದಾರೆ. 

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...