ಕೋಲಾರ: ಕೃಷಿ ಸಂಬಂಧಿತ ಇಲಾಖೆಗಳು ತಿಂಗಳಿಗೊಮ್ಮೆ ರೈತರ ನೆರವಿಗೆ: ಪ್ರಕಾಶ್ ಕಮ್ಮರಡಿ

Source: shabbir | By Arshad Koppa | Published on 8th August 2017, 8:10 AM | State News | Guest Editorial |

ಕೋಲಾರ, ಆಗಸ್ಟ್ 07 :    ಪ್ರತಿ ತಿಂಗಳ 2ನೇ ಮಂಗಳವಾರ ಕೃಷಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸುಗಟೂರು ಹೋಬಳಿಯ ಬೈಯ್ಯಪ್ಪನಹಳ್ಳಿಯಲ್ಲಿ ಸಭೆ ಸೇರಿ ರೈತರ ಸಮಸ್ಯೆಗಳು ಹಾಗೂ ಅನುಮಾನಗಳಿಗೆ ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸುವರು ಎಂದು ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿ ಅವರು ತಿಳಿಸಿದರು. 
 ಇಂದು ಕೃಷಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಹಯೋಗ ಹಾಗೂ ಕೃಷಿ ಬೆಲೆ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರೈತರ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬೈಯಪ್ಪನಹಳ್ಳಿಯನ್ನು ಮಾದರಿ ಕೃಷಿ ಗ್ರಾಮವನ್ನಾಗಿ ಮಾಡಲು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ ಈ ಬಾರಿಯೂ ಮಳೆ ಕೊರತೆ ಉಂಟಾಗಿದೆ. ಈ ಪರಿಸ್ಥಿತಿಯಲ್ಲಿ ರೈತರು ಅರಣ್ಯ ಇಲಾಖೆಯಿಂದ ನೀಡುವಂತಹ ಹೆಬ್ಬೇವಿನ ಗಿಡಗಳನ್ನು ಬೆಳೆಸುವ ಮೂಲಕ ಹೆಚ್ಚಿನ ಆದಾಯವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ಎಕರೆಯಲ್ಲಿ ಹೆಬ್ಬೇವು ಬೆಳೆದರೆ ಏಳು ವರ್ಷಗಳಲ್ಲಿ ಸುಮಾರು 30 ಲಕ್ಷ ರೂ ಆದಾಯ ಪಡೆಯಬಹುದು. ಹಾಗಾಗಿ ರೈತರು ಇಂತಹ ಮರಗಳನ್ನು ನೆಡುವಲ್ಲಿ ಹೆಚ್ಚು ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು. 


ರೈತರ ಜಮೀನಿನ ಮಣ ್ಣನ ಪರೀಕ್ಷೆ ಮಾಡಿ ಮಣ ್ಣನ ಆರೋಗ್ಯಕ್ಕೆ ಅನುಗುಣವಾಗಿ ಯಾವ ಬೆಳೆಗೆ ಹೊಂದಾಣ ಕೆ ಆಗುತ್ತದೆ ಎಂಬುದನ್ನು ಕಂಡುಕೊಳ್ಳಲಾಗುತ್ತದೆ.  ಜಿಲ್ಲೆಯು ಬರಗಾಲದಿಂದ ತತ್ತರಿಸುತ್ತಿದ್ದು ಇಲ್ಲಿನ ಜನರು ಬರವನ್ನು ಮೆಟ್ಟಿ ನಿಂತು ಬರಕ್ಕೆ ಒಗ್ಗಿಕೊಳ್ಳುವಂತಹ ಬೆಳೆಗಳನ್ನು ಬೆಳೆಯಬೇಕು ಎಂದರು.  
ಭೂಮಿಯಲ್ಲಿ ದುಡಿಮೆ ಮಾಡಿ ಬೆಳೆ ತೆಗೆಯಲು ರೈತರ ಆರೋಗ್ಯ ಸುಸ್ಥಿತಿಯಲ್ಲಿರುವುದು ಅತಿ ಮುಖ್ಯ. ಆದ್ದರಿಂದ ಈ ಗ್ರಾಮವನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು ಸುಮಾರು 100 ರೈತರ ಆರೋಗ್ಯ ತಪಾಸಣೆಯನ್ನು ಅವರ ರಕ್ತ ಮತ್ತು ಮೂತ್ರ ಪರೀಕ್ಷೆ ಮಾಡುವ ಮೂಲಕ ಕೈಗೊಳ್ಳಲಾಗುತ್ತಿದೆ ಎಂದರು. 
ಬೆಳೆಗಳಿಗೆ ಕ್ರಿಮಿನಾಶಕಗಳನ್ನು ರೈತರು ಸಿಂಪಡಿಸುವಾಗ ಸುರಕ್ಷತೆಯನ್ನು ಕೈಗೊಂಡಿರುವುದಿಲ್ಲ. ಇದರಿಂದ ಕ್ರಿಮಿನಾಶಕ ಅವರ ದೇಹದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಸೇರಿರುತ್ತದೆ. ಇದರ ಬಗ್ಗೆ ಪರೀಕ್ಷೆ ನಡೆಸುವ ಮೂಲಕ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಬೇಕು. ಈ ಕಾರ್ಯಕ್ರಮದ ಮೂಲ ಉದ್ದೇಶವೇ ಅದು ಎಂದು ಹೇಳಿದರು. 
ಮಣ ಪಾಲದ ಕಸ್ತೂರಿ ಬಾ ವೈದ್ಯಕೀಯ ವಿದ್ಯಾಲಯದ ಡಾ.ಶಂಕರ್ ಭಟ್ಟಣ್ಣ ಅವರು ಮಾತನಾಡಿ, ರೈತರ ಕಲ್ಯಾಣ ಎಂದರೆ ಅವರ ಸರ್ವತೋಮುಖ ಅಭಿವೃದ್ಧಿ ಎಂದರ್ಥ. ರೈತರು ಈ ದೇಶದ ಬೆನ್ನೆಲುಬು. ರೈತ ಆರೋಗ್ಯವಾಗಿದ್ದರೆ ಮಾತ್ರ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಹಾಗಾಗಿ ರೈತರ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಆಂಜಿನಮ್ಮ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಡಾ.ಶಿವಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ರಾವ್, ಕೃಷಿ ವಿಜ್ಞಾನ ಕೇಂದ್ರದ ಅಧ್ಯಕ್ಷರಾದ ತುಳಸಿರಾಮ್, ಸಹಾಯಕ ಕೃಷಿ ನಿರ್ದೇಶಕರಾದ ರಂಗಸ್ವಾಮಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...