ಕೋಲಾರ:ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಮಸ್ಯೆ ಇದ್ದಲ್ಲಿ ನನ್ನನ್ನು ಸಂಪರ್ಕಿಸಿ-ಸ್ವಾಮಿ

Source: shabbir | By Arshad Koppa | Published on 24th July 2017, 8:19 AM | State News | Guest Editorial |

ಕೋಲಾರ ಜು.22: ಪ್ರಾಥಮಿಕ ಶಾಲಾ ಶಿಕ್ಷಕರು ಕರ್ತವ್ಯವನ್ನು ಮರೆಯಬಾರದು. ಕಛೇರಿಗಳ ಬಳಿ ಸುಳಿದಾಡಬಾರದು. ತಮ್ಮ ಶಾಲಾ ಕರ್ತವ್ಯ ಮುಗಿಸಿದ ನಂತರ ಸಂಜೆಗೆ ಸಮಸ್ಯೆಗಳಿದ್ದಲ್ಲಿ ನನ್ನನ್ನು ಕಛೇರಿಯಲ್ಲಿ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಜಿಲ್ಲಾ ಉಪನಿರ್ದೇಶಕ ಸ್ವಾಮಿ ತಿಳಿಸಿದರು.
    ತಮ್ಮ ಕಾರ್ಯಾಲಯದಲ್ಲಿಂದು ಜಿಲ್ಲಾ ಪ್ರಾಥಮಿಕ ಶಾಲಾ ಬಡ್ತಿ ಮುಖ್ಯೋಪಾದ್ಯಾಯರ ಸಂಘ ನೀಡಿದ ಸ್ವಾಗತ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
    ಸಂಘದ ಜಿಲ್ಲಾಧ್ಯಕ್ಷ ಆರ್. ಶ್ರೀನಿವಾಸನ್ ಮಾತನಾಡಿ ಜಿಲ್ಲೆಯಾದ್ಯಂತ ಇರುವ ಮುಖ್ಯೋಪಾದ್ಯಾಯರ ಸಮಸ್ಯೆಗಳು ಮತ್ತು ಶೈಕ್ಷಣಿಕ ಮಾರ್ಗದಶನಕ್ಕಾಗಿ ತಿಂಗಳಿಗೊಮ್ಮೆ ಸಭೆ ನಡೆಸಬೇಕೆಂದು ಮತ್ತು ಜಿಲ್ಲೆಯ ಶೈಕ್ಷಣ ಕ ಅಭಿವೃದ್ಧಿಯ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಶೈಕ್ಷಣ ಕ ಕಾರ್ಯಾಗಾರವನ್ನು ಇಲಾಖಾ ವತಿಯಿಂದ ಹಮ್ಮಿಕೊಂಡು ಮುಖ್ಯ ಶಿಕ್ಷಕರನ್ನು ಶಾಲಾ ನಾಯಕತ್ವದೆಡೆಗೆ ಸದೃಢರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ. ಶ್ರೀನಿವಾಸ್, ಕಾರ್ಯದರ್ಶಿ ಬಿ. ಶ್ರೀನಿವಾಸ್, ಖಜಾಂಚಿ ಬಹದ್ದೂರ್ ಸಾಬ್, ಮಹಿಳಾ ಸಂಘಟನಾ ಕಾರ್ಯದರ್ಶಿ ಚಾಮುಂಡೇಶ್ವರಿ ದೇವಿ, ಪ್ರಭಾವತಿ, ಹೆಚ್.ಸಿ. ಬೈರೇಗೌಡ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಜನಾರ್ಧನ್, ಕಾರ್ಯದರ್ಶಿ ಸೊಣ್ಣಪ್ಪ, ಉಪಾಧ್ಯಕ್ಷ ವೆಂಕಟರವಣಪ್ಪ, ಶಂಕರಪ್ಪ ಕೆ.ಜಿ.ಎಫ್. ಘಟಕದ ಅಧ್ಯಕ್ಷ ಕೃಷ್ಣಪ್ಪ, ಕಾರ್ಯದರ್ಶಿ ಗೋಪಾಲ್, ಮುಂತಾದವರು ಉಪಸ್ಥಿತರಿದ್ದರು.

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...