ಕೋಲಾರ: ಸೆ ೨೩ ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

Source: shabbir | By Arshad Koppa | Published on 22nd September 2017, 3:35 PM | State News |

ಕೋಲಾರ, ಸೆಪ್ಟೆಂಬರ್ 21 :    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:23-07-2017 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಕ್ಲಾಕ್‍ಟವರ್ ಸಮೀಪದ ಆಲ್-ಅಮೀನ್ ಪ್ರೌಢಶಾಲೆ ಆವರಣದಲ್ಲಿ 2017-19 ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
    ಈ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ಉದ್ಘಾಟಿಸಲಿದ್ದು, ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ವರ್ತೂರ್ ಪ್ರಕಾಶ್ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಕೆ.ಹೆಚ್.ಮುನಿಯಪ್ಪ ಅವರು ಘನ ಉಪಸ್ಥಿತಿ ವಹಿಸುವರು. 
 
ಟಿಕ್ನಿಕಲ್ ಸೂಪರ್‍ವೈಸರ್ ಹುದ್ದೆಗೆ ಸಂದರ್ಶನ

ಕೋಲಾರ, ಸೆಪ್ಟೆಂಬರ್ 21 :    ನಗರ ಹೊರವಲಯದ ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ರಕ್ತ ವಿದಳನಾ ಘಟಕದಲ್ಲಿ ಕಾರ್ಯನಿರ್ವಹಿಸಲು ಟಿಕ್ನಿಕಲ್ ಸೂಪರ್‍ವೈಸರ್‍ನ ಒಂದು ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ಮಾಡಲಾಗುವುದು.  
     ಎನ್.ಹೆಚ್.ಎಂ ಯೋಜನೆಯಡಿ ಹುದ್ದೆ ನೇಮಕಾತಿ ಮಾಡಲಾಗುತ್ತಿದೆ. ನೇಮಕಾತಿಯು ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆ ಆವರಣದಲ್ಲಿ ಸೆ.28 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯೊಳಗಾಗಿ ಹೆಸರುಗಳನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಪರಿಗಣ ಸಲಾಗುವುದು. 
    ಅಭ್ಯರ್ಥಿಯು ಪ್ಯಾರಾಮೆಡಿಕಲ್ ಬೋರ್ಡ್‍ನಿಂದ ನೋಂದಾಯಿತ ಕಾಲೇಜಿನಲ್ಲಿ ಡಿ.ಎಂ.ಎಲ್.ಟಿ ಅಧ್ಯಯನ ಮಾಡಿರಬೇಕು. ಒಂದು ವರ್ಷದ ಸೇವಾ ಅನುಭವ ಹೊಂದಿರಬೇಕು.  ಮಾಸಿಕ ವೇತನ 17 ಸಾವಿರ ರೂಗಳಾಗಿದ್ದು, ವಯೋಮಿತಿ 40 ವರ್ಷದೊಳಗಿರಬೇಕು. 
    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದಾಗಿದೆ. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...