ಕೋಲಾರ:ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲುಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಸೂಚನೆ

Source: shabbir | By Arshad Koppa | Published on 1st August 2017, 7:34 AM | State News | Guest Editorial |

ಕೋಲಾರ, ಜುಲೈ 31 :    ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದ್ದು ನೀರಿನ ಕೊರತೆ ಇರುವಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರನ್ನು ಪೂರೈಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. 
    ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬರ ಪರಿಸ್ಥಿತಿ ಅಧ್ಯಯನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನ ಕೊರತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಯಾವುದೇ ರೀತಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಾಗೃತಿ ವಹಿಸಿ ಎಂದರು. 
    ಗ್ರಾಮಾಂತರ ಪ್ರದೇಶದಲ್ಲಿ ಈಗಾಗಲೇ ಸುಮಾರು 34 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 32 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಪೂರೈಸಲಾಗುತ್ತಿದೆ. ಒಂದು ದಿನಕ್ಕೆ ಸುಮಾರು 110 ಟ್ಯಾಂಕ್‍ಗಳ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇನ್ನು ನಗರ ಪ್ರದೇಶಗಳಲ್ಲಿ 87 ಟ್ಯಾಂಕರ್‍ಗಳ ಮೂಲಕ ಸುಮಾರು 683 ಟ್ಯಾಂಕ್‍ಗಳ ನೀರನ್ನು ಪೂರೈಸಲಾಗುತ್ತಿದೆ. ನೀರಿನ ಸಮಸ್ಯೆ ಕಂಡು ಬರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. 
    ಜಿಲ್ಲೆಯಲ್ಲಿ ಸುಮಾರು 10 ವಾರಗಳಿಗೆ ಆಗಷ್ಟು ಮೇವು ಲಭ್ಯವಿದೆ. ರೈತರಲ್ಲಿ ಸುಮಾರು 68,812 ಮೆಟ್ರಿಕ್‍ಟನ್ ದಾಸ್ತಾನಿದೆ. ಪಶುಪಾಲನಾ ಇಲಾಖೆ ವತಿಯಿಂದ ಈವರೆಗೆ 1,01,432 ಮೇವು ಭೀಜದ ಮಿನಿಕಿಟ್‍ಗಳನ್ನು ಉಚಿತವಾಗಿ ವಿತರಣೆ ಮಾಡಲಾಗಿದೆ. ಇದನ್ನು ಪಡದು ರೈತರು ಹಸಿರು ಮೇವನ್ನು ಸಮೃದ್ಧವಾಗಿ ಬೆಳೆದ್ದಾರೆ ಎಂದರು. 
     ರೈತರು ಸ್ವಯಂ ಪ್ರೇರಿತವಾಗಿ ಸುಮಾರು 12,075 ಎಕರೆಗಳಲ್ಲಿ ಪಶುಸಂಗೋಪನಾ ಇಲಾಖೆ ಮತ್ತು ಕೋಮುಲ್ ವತಿಯಿಂದ ಮಿನಿಕಿಟ್‍ಗಳನ್ನು ಪಡೆದು ಹಸಿರು ಮೇವನ್ನು ಬೆಳೆದಿದ್ದಾರೆ. ಜೊತೆಗೆ ಜಿಲ್ಲಾಡಳಿತವು ಕೋಮುಲ್ ಸಹಯೋಗದೊಂದಿಗೆ ಎಂ.ಪಿ.ಸಿ.ಸಿ.ಎಸ್‍ಗಳೊಂದಿಗೆ ಕರಾರು ಮೂಲಕ 16,833 ಎಕರೆ ಖಾಸಗಿ ಜಮೀನಿನಲ್ಲಿ ಹಸಿರು ಮೇವನ್ನು ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. 
    ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ಇಲ್ಲಿಯವರೆಗೆ ಎಷ್ಟು ಡೆಂಗ್ಯೂ ಪ್ರಕರಣಗಳು ಕಂಡು ಬಂದಿವೆ. ಇವುಗಳ ನಿಯಂತ್ರಣಕ್ಕೆ ಯಾವ ರೀತಿ ಕ್ರಮಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿಗಳು ಪ್ರಶ್ನಿಸಿದಾಗ, ಜಿಲ್ಲೆಯಲ್ಲಿ 161 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಒಂದು ವಾರದಿಂದ 08 ಪ್ರಕರಣಗಳು ಬೆಳಕಿಗೆ ಬಂದಿದೆ. ಇವುಗಳನ್ನು ನಿಯಂತ್ರಿಸಲು ಜನತೆಯಲ್ಲಿ ಅರಿವು ಮೂಡಿಸಲಾಗುತ್ತಿದೆ. ಅಷ್ಟೇ ಅಲ್ಲದೆ ನಗರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗ್ ಹೊಡೆಸಲಾಗುತ್ತಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ವಿನಯ್‍ಗಡ್ ಅವರು ಮಾಹಿತಿ ನೀಡಿದರು. 
    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ಅವರು, ಕೇವಲ ಮಾಹಿತಿ ನೀಡುವುದು ಮಾತ್ರವಲ್ಲ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿದಿನ ಮುಂಜಾನೆ ವಿವಿಧ ಸ್ಥಳಗಳಿಗೆ ಕುದ್ದು ಭೇಟಿ ನೀಡಿ ನೈರ್ಮಲ್ಯ ಸಮಸ್ಯೆ, ಲಾರ್ವ ಹತೋಟಿಗೆ ಕ್ರಮವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿ ಅಗತ್ಯ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು. 
    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...