ಕೋಲಾರ: ಬೃಹತ್ ಉದ್ಯೋಗ ಮೇಳ ಯಶಸ್ವಿ; 5,287 ಮಂದಿ ಉದ್ಯೋಗಕ್ಕೆ ಆಯ್ಕೆ

Source: shabbir | By Arshad Koppa | Published on 25th April 2017, 8:14 AM | State News | Special Report |

ಕೋಲಾರ, ಏಪ್ರಿಲ್ 23 :    ಸಿ.ಬೈರೇಗೌಡ ಕಾಲೇಜಿನಲ್ಲಿ ಸರ್ಕಾರದಿಂದ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಭಾನುವಾರ ತೆರೆ ಬಿತ್ತು. ಶೇ.50 ರಷ್ಟು ಮಂದಿಗೆ ಉದ್ಯೋಗ ದೊರಕಿಸಿಕೊಡುವ ಮೂಲಕ ಉದ್ಯೋಗ ಮೇಳ ಯಶಸ್ವಿಯಾಯಿತು.
     ಜಿಲ್ಲಾಡಳಿತವು ಕೈಗಾರಿಕಾ ಮತ್ತು ವಾಣ ಜ್ಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ದಿ ನಿಗಮಗಳ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವು ಸುಸಜ್ಜಿತವಾಗಿ ನಡೆಯಿತು. 
    ಸುಮಾರು 15 ಸಾವಿಕ್ಕೂ ಹೆಚ್ಚು ಮಂದಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು ಇದರಲ್ಲಿ ಒಟ್ಟು ಒಟ್ಟು 5,287 ಮಂದಿ ಉದ್ಯೋಗಾಕಾಂಕ್ಷಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಂಡರು. 
    ಉದ್ಯೋಗ ಮೇಳದಲ್ಲಿ ಒಟ್ಟು 614 ಮಂದಿಗೆ ಸ್ಥಳದಲ್ಲೇ ಉದ್ಯೋಗ ಆದೇಶ ಪತ್ರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಮತ್ತು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ವಿತರಿಸಿದರು. ಉದ್ಯೋಗ ಮೇಳದಲ್ಲಿ ಸುಮಾರು 4,673 ಮಂದಿಯನ್ನು ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು. 
    ಉದ್ಯೋಗ ಮೇಳದ ಮೊದಲ ದಿನ 319 ಮಂದಿಗೆ ಸ್ಥಳದಲ್ಲೇ ಉದ್ಯೋಗ ಆದೇಶ ಪತ್ರವನ್ನು ವಿತರಿಸಲಾಯಿತು. ಸುಮಾರು 3,561 ಮಂದಿಯನ್ನು ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು. ಎರಡನೇ ದಿನ ಸುಮಾರು 295 ಮಂದಿಗೆ ಸ್ಥಳದಲ್ಲೇ ಉದ್ಯೋಗ ಆದೇಶವನ್ನು ಪತ್ರವನ್ನು ವಿತರಿಸಲಾಯಿತು. ಸುಮಾರು 1,112 ಮಂದಿಯನ್ನು ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು. 
    ಉದ್ಯೋಗಾಕಾಂಕ್ಷಿಳಿಗೆ ಸ್ಥಳದಲ್ಲಿ ನೋಂದಣ ಗೆ ಅವಕಾಶವನ್ನು ಕಲ್ಪಿಸಲಾಗಿತ್ತು. ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿ ನೋಂದಣ  ಮಾಡಿಕೊಂಡಿದ್ದರು. ಒಟ್ಟಾರೆ ಉದ್ಯೋಗ ಮೇಳವು ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಒದಗಿಸುವಲ್ಲಿ ಯಶಸ್ವಿಯಾಯಿತು. 
    ಉದ್ಯೋಗ ಮೇಳದಲ್ಲಿ ಉತ್ತಮವಾಗಿ ಕೆಲಸ ಮಾಡಿದ ವಿವಿಧ ಇಲಾಖೆಯ ಅಧಿಕಾರಿಗಳಿಗೆ, ಸಿಬ್ಬಂಧಿಗಳಿಗೆ, ವಾಲೆಂಟರಿಯರ್ಸ್ ಸೇರಿದಂತೆ ಎಲ್ಲರನ್ನೂ ಜಿಲ್ಲಾಡಳಿತ ಸತ್ಕರಿಸಿತು. 
    ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಮಂಜುನಾಥ್, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎನ್.ಸುರೇಶ್, ಸಹಾಯಕ ನಿರ್ದೇಶಕ ರವೀಚಂದ್ರ, ಸಿ.ಬೈರೇಗೌಡ ಕಾಲೇಜಿನ ಮುಖ್ಯಸ್ಥ ಕೃಷ್ಣಾರೆಡ್ಡಿ, ಸುರೇಶ್, ಶ್ರೀವತ್ಸ, ದೀಕ್ಷಿತ್, ಶ್ರೀಪ್ರಕಾಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 
    
ಉದ್ಯೋಗ ಮೇಳಕ್ಕೆ ನಾವೇನು ಬಂಡವಾಳ ಹಾಕಿಲ್ಲ. ಅರ್ಹ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸಿಕೊಡಬೇಕೆಂಬ ಪ್ರಾಮಾಣ ಕ ಪ್ರಯತ್ನ ಮಾಡಿದ್ದೇವೆ. ಸಾಕಷ್ಟು ಮಂದಿಗೆ ಉದ್ಯೋಗ ದೊರೆತಿದೆ. ಇದರಿಂದ ಅವರ ಕುಟುಂಬಕ್ಕೆ ಆಶ್ರಯ ಒದಗಿದಂತಾಗಿದೆ.
                -ಕೆ.ಆರ್.ರಮೇಶ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು.

ಕೋಲಾರ ಬೃಹತ್ ಉದ್ಯೋಗ ಮೇಳಕ್ಕೆ ಹೆಚ್ಚಿನ ಕಾಳಜಿಯನ್ನು ವಹಿಸಲಾಗಿತ್ತು. ಅರ್ಹರಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂಬ ಸದುದ್ದೇಶದಿಂದ ಆಯೋಜಿಸಲಾಗಿದ್ದ ಉದ್ಯೋಗ ಮೇಳವು ಯಶಸ್ವಿಯಾಗಿದೆ. 5 ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಮೇಳವು ಅನುಕೂಲವಾಗಿದೆ. ಉದ್ಯೋಗ ಮೇಳದ ಯಶಸ್ವಿಗೆ ಎಲ್ಲರೂ ಉತ್ತಮವಾಗಿ ಸಹಕಾರ ನೀಡಿದ್ದಾರೆ. 
ಡಾ.ಕೆ.ವಿ.ತ್ರಿಲೋಕ್ ಚಂದ್ರ, ಜಿಲ್ಲಾಧಿಕಾರಿಗಳು
 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...