ಕೋಲಾರ:ಆಗಸ್ಟ್ 27ರಂದು ಪ್ರತಿಭಾ ಪುರಸ್ಕಾರ ಮತ್ತು 9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತೋತ್ಸವದ ಪೂರ್ವಭಾವಿ ಸಭೆ 

Source: shabbir | By Arshad Koppa | Published on 25th August 2017, 10:15 PM | State News | Guest Editorial |

ಕೋಲಾರ ಆ. 25 : ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ, ಕೋಲಾರ ಜಿಲ್ಲಾ ಘಟಕದ ಆಶ್ರಯದಲ್ಲಿ ಇದೇ ಆಗಸ್ಟ್ 27ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಕೋಲಾರ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ  ವಿಶ್ವಕರ್ಮ ಸಮಾಜದ 100 ಪ್ರತಿಭಾನ್ವಿತ ವಿಧ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ಮತ್ತು 9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತೋತ್ಸವದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದೆ.
    ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷರಾದ ಕೆ.ಪಿ. ನಂಜುಂಡಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಮಾಜಿ ಶಾಸಕರಾದ ವೈ.ಸಂಪಂಗಿ, ಎಸ್.ಎನ್. ಕೃಷ್ಣಯ್ಯಶೆಟ್ಟಿ, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಬಿ.ಪಿ. ವೆಂಕಟಮುನಿಯಪ್ಪ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಓಂಶಕ್ತಿ ಚಲಪತಿ, ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ನಾಚಹಳ್ಳಿ ವೆಂಕಟರೆಡ್ಡಿ, ಮಹಾಸಭಾ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಆರ್.ವಿ. ಭಾಗ್ಯಮ್ಮ, ಕಾರ್ಯಾಧ್ಯಕ್ಷೆ ಜಿ.ಎಸ. ಸಿದ್ಧರಾಜಮ್ಮಣ ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುವಿಶ್ವಕರ್ಮ, ಮಹಾಸಭಾದ ರಾಜ್ಯ ಸಂಚಾಲಕ ಟಿ.ಕೆ. ಪುರುಷೋತ್ತಮ್, ಉದ್ಯಮಿಗಳಾದ ಎಸ್. ದೇಶಕಾಚಾರ್ ಮತ್ತಿತರರು ಭಾಗವಹಿಸಲಿದ್ದಾರೆಂದು ಜಿಲ್ಲಾಧ್ಯಕ್ಷ ಕಲಾವಿದ ವಿಷ್ಣು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು, ಹೋಬಳಿ, ಗ್ರಾಮಗಳಿಂದ ಮಹಾಸಭಾದ ಪದಾಧಿಕಾರಿಗಳು ಸೇರಿದಂತೆ 2000 ಕ್ಕೂ ಅಧಿಕ ಮಂದಿ ವಿಶ್ವಕರ್ಮರು ಭಾಗವಹಿಸಲಿದ್ದಾರೆ. 
    
                           (ಶಿಲ್ಪಿ ಜಿ.ಎನ್. ಸೋಮಶೇಖರಾಚಾರ್ಯ)
   ಪ್ರಧಾನ ಕಾರ್ಯದರ್ಶಿ
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾ(ರಿ)
    ಕೋಲಾರ ಜಿಲ್ಲೆ
          ಮೊ. : 7975855841

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...