ಚಿಕ್ಕಬಳ್ಳಾಪುರ:ರಾಜ್ಯದ ಒಕ್ಕಲಿಗರ ಸಂಘದಲ್ಲಿ ಪ್ರಾಮಾಣಿವಾಗಿ ಸಲ್ಲಿಸಿರುವ ಸೇವೆ ಗುರುತಿಸಲು ಪಾರದರ್ಶಕ ಪ್ರಯತ್ನ-ರಮೇಶ್

Source: tamim | By Arshad Koppa | Published on 21st January 2017, 9:00 AM | State News |

ಚಿಕ್ಕಬಳ್ಳಾಪುರ,ಜನವರಿ20: ರಾಜ್ಯದ ಒಕ್ಕಲಿಗರ ಸಂಘದಲ್ಲಿ ಪ್ರಾಮಾಣಿವಾಗಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನೀಡಲಾಗಿರುವ ಜವಾಬ್ದಾರಿಯನ್ನು ಎಲ್ಲಾ ಸದಸ್ಯರು ಮತ್ತು ನಿರ್ದೇಶಕರ ಸಹಕಾರದಿಂದ ಸಂಘದ ಆಡಳಿತ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಿಭಾಯಿಸುವುದಾಗಿ ರಾಜ್ಯ ಒಕ್ಕಲಿಗರ ಸಂಘದ ನೂತನ ಖಜಾಂಚಿ ಯಲುವಹಳ್ಳಿ ರಮೇಶ್ ಹೇಳಿದರು.
    ತಾಲೂಕಿನ ನಂದಿ ಗ್ರಾಮದ ಕಾಂಗ್ರೇಸ್ ಕಾರ್ಯಕರ್ತರ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು ಈ ಹಿಂದೆ ಸಹ ಒಕ್ಕಲಿಗರ ಸಂಘವನ್ನು ಮಾದರಿಯಾಗಿ ಪರಿವರ್ತನೆ ಮಾಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ ಸಮಾಜದ ಅಭಿವೃಧ್ಧಿಗಾಗಿ ಪೂರಕವಾಗಿರುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದಾಗಿ ಹೇಳಿದ ಅವರು ಸಮಾಜದ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡುವುದಾಗಿ ಪ್ರಕಟಿಸಿದರು.
    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿಸ್ವಾಮಿ,ಮಾಜಿ ಉಪಾಧ್ಯಕ್ಷ ಚಿನ್ನನ್ನ,ಜೆಸಿಬಿ ಮಂಜುನಾಥ್,ಅಂಗಟ್ಟ ಮಂಜುನಾಥ್,ರಾಮಚಂದ್ರಚಾರಿ ಮತ್ತಿತರರು ಉಪಸ್ಥಿತರಿದ್ದರು.

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...