ಅಲ್ ಅಮೀನ್ ಪಿಯು ಕಾಲೇಜ ವಿದ್ಯಾರ್ಥಿಗಳಿಂದ ವಿಶೇಷ ಎನ್.ಎಸ್.ಎಸ್ ಶಿಬಿರ

Source: sonews | By Staff Correspondent | Published on 12th December 2017, 11:19 PM | State News | Don't Miss |

ಕೋಲಾರ: ಅಲ್ ಅಮೀನ್ ಪಿಯು ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳಿಂದ ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಎನ್.ಎಸ್.ಎಸ್ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೈಯದ್ ಇಕ್ಬಾಲ್‍ಪಾಷ ರವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ನಮ್ಮ ಗ್ರಾಮದ ಸ್ವಚ್ಚತೆಯನ್ನು ನಾವೇ ಕಾಪಾಡಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.

ಅಲ್ ಅಮೀನ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಅಖ್ತರ್ ಸೈಯೀಧಾ ಖಾನಂ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪ ನಿರ್ದೇಶಕರ ಕಚೇರಿಯ ಗೋಪಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ವೀಣಾ ಕುಲಕರ್ಣಿ, ಇತಿಹಾಸ ಉಪನ್ಯಾಸಕ ಮಂಜುನಾಥ್, ಆಂಗ್ಲ ಭಾಷಾ ಉಪನ್ಯಾಸಕ ರಿಯಾಜ್ ಅಹಮದ್, ರಾಜ್ಯಶಾಸ್ತ್ರ ಉಪನ್ಯಾಸಕಿ ಮೊಹ್ಸಿನಾ ಬೇಗಂ, ಎನ್,ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಹೆಚ್.ಕಲೀಂ ಉಪಸ್ಥಿತರಿದ್ದರು. 
ಉಪನ್ಯಾಸಕರೊಂದಿಗೆ     ಎನ್.ಎಸ್.ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ, ಗ್ರಾಮದ ರಸ್ತೆಗಳು, ಚರಂಡಿಗಳನ್ನು ಸ್ವಚ್ಚಗೊಳಿಸುವ ಮೂಲಕ ಗ್ರಾಮದ ಸಾರ್ವಜನಿಕರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು.
 
Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...