ಕೋಲಾರ: ಡಿ.೧೯ ರಂದು ಕೂಡಲಸಂಗಮದಲ್ಲಿ ಕಾಂಗ್ರೇಸ್ ಬೃಹತ್ ಸಮಾವೇಶ;ವರ್ತೂರ ಪ್ರಕಾಶ್

Source: sonews | By Staff Correspondent | Published on 7th December 2017, 7:02 PM | State News | Don't Miss |

ಕೋಲಾರ: ರಾಜ್ಯದ ಮೂಲೆ ಮೂಲೆಗಳಲ್ಲೂ  ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ  ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿ.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಶಾಸಕ ವರ್ತೂರು ಪ್ರಕಾಶ್ ಹೇಳಿದರು.
ತಾಲೂಕು ಬೆಗ್ಲಿ ಗ್ರಾಮದ ಸಮೀಪ ಇರುವ ತೋಟದ ಮನೆಯಲ್ಲಿ ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಅಭಿಮಾನಿಗಳ ಕಾರು ರ್ಯಾಲಿ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಡಿ.19 ರಂದು ಕೂಡಲ ಸಂಗಮದಲ್ಲಿ ನಡೆಯಲಿರುವ ನಮ್ಮ ಕಾಂಗ್ರೆಸ್ ಐತಿಹಾಸಿಕ ಸಮಾವೇಶಕ್ಕೆ ಪೂರ್ವಭಾವಿ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ತಮ್ಮ ಅಭಿಮಾನಿ ಬೆಂಬಲಿಗರು ಸ್ವಯಂ ಪ್ರೇರಣೆಯಿಂದ ಕಾರುಗಳನ್ನು ತಂದಿದ್ದು, ಇಂದಿನಿಂದ ರಾಜ್ಯದೆಲ್ಲೆಡೆ ಈ ಕಾರುಗಳು ಪ್ರವಾಸ ನಡೆಸಿ ಕೂಡಲಸಂಗಮ ಸಮಾವೇಶಕ್ಕೆ ನಾಲ್ಕರಿಂದ ಐದು ಲಕ್ಷ ಮಂದಿಯನ್ನು ಸೇರಿಸುವ ಕೆಲಸ ಮಾಡಲಿದ್ದಾರೆಂದು ವಿವರಿಸಿದರು.
ನಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ಕೆ ಶಕ್ತಿ ಕೊಟ್ಟಿರುವ ಉತ್ತರ ಕರ್ನಾಟಕದ ಅಭಿಮಾನಿ ಬೆಂಬಲಿಗರಿಗೆ ತಾವು ಧ್ಯವಾಗಳನ್ನು ಅರ್ಪಿಸುವುದಾಗಿ ಹೇಳಿದ ಅವರು, ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರಹಸ್ಯ ಅಜೆಂಡಾ ಇಲ್ಲ, ಬಡವರು, ದೀನ ದಲಿತರು ಹಾಗೂ ಅಹಿಂದ ವರ್ಗದವರು, ಶೋಷಿತರ ಪಕ್ಷವಾಗಿದೆ. ಪಕ್ಷದ ಪ್ರಚಾರ ಕಾರ್ಯಕ್ಕೆ ತಾವು ಯಾವುದೇ ಹಣಕಾಸು ನೆರವು ನೀಡಿಲ್ಲ, ಅಭಿಮಾನಿ ಬೆಂಬಲಿಗರೇ ಸ್ವಯಂ ಪ್ರೇರಿತವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪರ ಬೆಂಬಲವಾಗಿ ಎಲ್ಲಾ ಲಿಂಗಾಯಿತರಿಲ್ಲ, ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಎಲ್ಲಾ ಒಕ್ಕಲಿಗರೂ ಇಲ್ಲ ಹಾಗೆಯೇ ಎಲ್ಲಾ ಕುರುಬರು ಸಿದ್ದರಾಮಯ್ಯ ಜೊತೆಯಲ್ಲಿಲ್ಲ, ತಮಗೂ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿಮಾನಿ ಬೆಂಬಲಿಗರಿದ್ದು, ಅವರವರ ಬೆಂಬಲಿಗರು ಅವರವರ ಪಕ್ಷದಲ್ಲಿರುತ್ತಾರೆಂದು  ವಿವರಿಸಿದರು.
ನಮ್ಮ ಕಾಂಗ್ರೆಸ್ ಪಕ್ಷವು ಒಂದು ಸಮಾಜದ ಪಕ್ಷವಲ್ಲವೆಂದು ಸ್ಪಷ್ಟಪಡಿಸಿದ ಅವರು, ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ, ಬಡವರ ಕಲ್ಯಾಣಕ್ಕಾಗಿ ಎಲ್ಲಾ ವರ್ಗದವರ ಪಕ್ಷವಾಗಿ ನಮ್ಮ ಕಾಂಗ್ರೆಸ್ ಅನ್ನು ರೂಪಿಸಲಾಗುತ್ತಿದೆ, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ನೊಂದಿರುವ ಅನೇಕ ಮುಖಂಡರು ನಮ್ಮ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಬಹಳಷ್ಟು ಮುಖಂಡರು ಪಕ್ಷದ ಸಂಪರ್ಕದಲ್ಲಿದ್ದಾರೆಂದು ಅವರು ಮಾರ್ಮಿಕವಾಗಿ ನುಡಿದರು.
ಡಿ.19 ರ ಕೂಡಲಸಂಗಮದಲ್ಲಿ ಪಕ್ಷವನ್ನು ಅಧಿಕೃತವಾಗಿ ಉದ್ಘಾಟಿಸಿದ ನಂತರ ಕರ್ನಾಟಕದ ಯಾವ ಯಾವ ಕ್ಷೇತ್ರಗಳಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಬೇಕೆಂಬುದನ್ನು ನಿರ್ಧರಿಸಲಾಗುವುದು,  ತಮ್ಮ ಬೆಂಬಲಿಗರಿರುವ  ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತದೆಯೆಂದು ಸುಳಿವು ನೀಡಿದರು.
ಇದೇ ಸಂದರ್ಭದಲ್ಲಿ ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಕಾರುಗಳ ಪ್ರಚಾರ ಕಾರ್ಯಕ್ಕೆ ಪಕ್ಷದ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಕಾರುಗಳ ರ್ಯಾಲಿಯು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದಿತು.
ಈ ಸಂದರ್ಭದಲ್ಲಿ  ದರಖಾಸ್ತು ಸಮಿತಿ ಅಧ್ಯಕ್ಷ ಬೆಗ್ಲಿ ಸೂರ್ಯಪ್ರಕಾಶ್, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಜಿಪಂ ಸದಸ್ಯ ಅರುಣ ಪ್ರಸಾದ್, ನಗರಸಭೆ ಮಾಜಿ ಅಧ್ಯಕ್ಷ ರಘುರಾಂ, ನಗರಸಧಾ ಸದಸ್ಯರಾದ ಸೋಮಶೇಖರ್, ಮಂಜುನಾಥ್, ತಾಪಂ, ಗ್ರಾಪಂ ಸದಸ್ಯರುಗಳು ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...