ಪೆಟ್ರೋಲ್ ಡೀಸಲ್ ಬೆಲೆ ಗಗನಕ್ಕೆ; ಕೇಂದ್ರದ ವಿರುದ್ಧ ರೈತಸಂಘ ಪ್ರತಿಭಟನೆ

Source: sonews | By sub editor | Published on 29th May 2018, 11:12 PM | State News | Don't Miss |

ಕೋಲಾರ: ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಪೆಟ್ರೋಲ್ ಡೀಸಲ್ ಬೆಲೆಗೆ ಕಡಿವಾಣ ಹಾಕಿ ಜನ ಸಾಮಾನ್ಯರ ಹಿತಕಾಯಬೇಕೆಂದು ಎತ್ತಿನ ಬಂಡಿಯಲ್ಲಿ ದ್ವೀಚಕ್ರ ವಾಹನ ಮೆರವಣಿಗೆ ಮಾಡುವ ಮುಖಾಂತರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಪೆಟ್ರೋಲ್ ಬೆಲೆ 80 ರೂ ಡೀಸಲ್ 70 ರೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಜನ ಸಾಮಾನ್ಯರ ಬದುಕು ಬೀದಿಗೆ ಬೀಳುತ್ತಿದೆ. ಈ ಏರಿಕೆಯಿಂದ ರೈತರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದ್ದು, ಈಗಾಗಲೇ ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ಸಿಗದೆ ಕಂಗಾಲಾಗಿದ್ದ ರೈತನು ಡೀಸಲ್ ಬೆಲೆ ಏರಿಕೆಯಿಂದ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾನೆ.    ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರು ಜನ ಸಾಮಾನ್ಯರ ಕಷ್ಟಗಳು ಮಾತ್ರ ಬಗೆಹರಿಸುವಲ್ಲಿ ಯಾವುದೇ ರಾಜಕೀಯ ಪಕ್ಷಗಳು ಪ್ರಯತ್ನ ಪಡುತ್ತಿಲ್ಲ. ಯಾವುದೋ ಒಂದು ನೆಪ ಜನ ಸಾಮಾನ್ಯರನ್ನು ಯಾಮಾರಿಸಿ ಬಡವರ ಜೀವನದ ಜೊತೆ ಚಲ್ಲಾಟ ವಾಡುತ್ತಿರುವುದು ಕಾಯಕವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ ಜನರ ಕಷ್ಟಗಳನ್ನು ನಿವಾರಣೆ ಮಾಡುತ್ತೇನೆ, ದೇಶವನ್ನು ಅಭಿವೃದ್ದಿಯತ್ತ ಕೊಂಡೋಯುತ್ತೇನೆಂದು ಅಧಿಕಾರ ಸ್ವೀಕಾರ ಮಾಡಿ ನಾಲ್ಕು ವರ್ಷ ಕಳೆದರೂ ಜನ ಸಾಮಾನ್ಯರ ಸಮಸ್ಯೆಗಳು ಹೆಚ್ಚಾಗಿವೆ ಹೊರೆತು ಕಡಿಮೆಯಾಗುತ್ತಿಲ್ಲ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಏರಿಕೆ ನೆಪದಿಂದ ಒಂದುವಾರದಿಂದ ಸತತವಾಗಿ ಗಗನ್ನಕ್ಕೇರುತ್ತಿರುವ ಪೆಟ್ರೋಲ್ ಡೀಸಲ್ ಬೆಲೆಗೆ ಕಡಿವಾಣ ಹಾಕುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗುತ್ತಿದೆ. ಇದರಿಂದ ಜನ ಸಾಮಾನ್ಯರ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಒಂದು ಕಡೆ ನಾನು ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಲೆಯಿಲ್ಲದೆ ಆತ್ಮಹತ್ಯೆ ಇತ್ತ ರೈತರು ಮುಖ ಮಾಡುತ್ತಿದ್ದಾರೆ. ಕೋಟಿ ಕೋಟಿ ಹಣವನ್ನು ಅಂಬಾನಿ ಆದಾನಿಗಳಿಗೆ ಸಾಲದ ರೂಪದಲ್ಲಿ ಕಾರ್ಪೋರೇಟ್ ಕಂಪನಿಗಳ ಬೆಂಬಲವಾಗಿ ನಿಂತ್ತಿದ್ದಾರೆ. ಈಗ ತೈಲಬೆಲೆಗಳ ಏರಿಕೆಗೆ ಕಡಿವಾಣ ಹಾಕುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿರುವುದರಿಂದ ಜನ ಸಾಮಾನ್ಯರು ಸರ್ಕಾರದ ವಿರುದ್ಧ ಇಡೀ ಶಾಪಹಾಕುತ್ತಿದ್ದಾರೆ. ಕೂಡಲೇ ಮಾನ್ಯ ಪ್ರಧಾನ ಮಂತ್ರಿಗಳು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂಧಿಸುವುದೇ ಆದರೆ ಗಗನ್ನಕ್ಕೇರುತ್ತಿರುವ ತೈಲಬೆಲೆಗೆ ಕಡಿವಾಣ ಹಾಕದಿದ್ದರೆ  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನಸಾಮಾನ್ಯರು ತಕ್ಕಪಾಠ ಕಲಿಸುತ್ತಾರೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
    

ಮನವಿ ಸ್ವೀಕರಿಸಿ ಮಾತನಾಡಿದ ಶಿರಸ್ತೆದಾರ್ ಕೃಷ್ಣೇಗೌಡ ಪೆಟ್ರೋಲ್ ಡೀಸಲ್ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುತ್ತಿರುವುದು ನಿಜ.  ಈ ಮನವಿಯನ್ನು ಮೇಲಾಧಿಕಾರಿಗಳಿಗೆ ತಿಳಿಸಿ ಕೂಡಲೇ ಪ್ರಧಾನ ಮಂತ್ರಿಗಳಿಗೆ ಕಳುಹಿಸಿಕೊಟ್ಟು ನಿಮ್ಮ ಬೇಡಿಕೆಗಳನ್ನು ಈಡೇರಿಸಲು  ನಾವು ಸಹ ಪ್ರಯತ್ನ ಪಡುತ್ತೆವೆಂದು ಭರವಸೆ ನೀಡಿದರು.
    

ಈ ಹೋರಾಟದಲ್ಲಿ ಜಿಲ್ಲಾದ್ಯಕ್ಷೆ ಎ.ನಳಿನಿ, ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಕ್ಯಾಸಂಬಳ್ಳಿ ಪ್ರತಾಪ್, ಬೇತಮಂಗಲಮಂಜು, ರಾಮಚಂದ್ರಪ್ಪ, ವಡ್ಡಹಳ್ಳಿ ಮಂಜುನಾಥ್, ಪುತ್ತೇರಿ ರಾಜು, ಪುರುಷೋತ್ತಮ್, ಯುವಮುಖಂಡ ದಿಲೀಪ್, ಮುರಳಿ, ರಂಜೀತ್‍ಕುಮಾರ್, ವೇಮಗಲ್ ಅಮರನಾರಾಯಣಸ್ವಾಮಿ, ಐತಾಂಡಹಳ್ಳಿ ಅಮರೀಶ್,  ಸುಪ್ರೀಂಚಲ, ಸಾಗರ್,  ಭರತ್, ಶಿವ, ನಾರಾಯಣ್, ಕೆಂಬೋಡಿ ಕೃಷ್ಣೇಗೌಡ, ಮುದುವಾಡಿ ಚಂದ್ರಪ್ಪ, ಶಿವಾರೆಡ್ಡಿ, ನವೀನ್, ರಾಕೇಶ್, ಯಲ್ಲಪ್ಪ, ಮಂಜುನಾಥ್, ಅಜಯ್, ಶ್ರೀಧರ್ ಮುಂತಾದವರಿದ್ದರು.
 

Read These Next

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ಶಿರಾಲಿ ಹೆದ್ದಾರಿ ಅಗಲಿಕರಣ;ಸಾರ್ವಜನಿಕರ ಬೇಡಿಯಂತೆ 30 ರ ಬದಲು 45ಮೀಟರ್ ವಿಸ್ತರಣೆ-ಕೇಂದ್ರ ಸಚಿವ ಅನಂತ್ ಭರವಸೆ

ಭಟ್ಕಳ: ಶಿರಾಲಿ ಭಾಗದ ಗ್ರಾಮಸ್ಥರ ಬೇಡಿಕೆಯಂತೆ ರಾ.ಹೆ.66 ರ ಅಗಲೀಕರಣವನ್ನು 30ಮೀಟರ್ ಬದಲು 45ಮೀಟರ್ ಗೆ ವಿಸ್ತರಿಸಲು ಅಗತ್ಯ ಕ್ರಮಗಳನ್ನು ...

ಮಾನವೀಯತೆಯ ಸೌಧದಡಿ ಸಮಾನತೆಯ ಸಮಾಜ ಕಟ್ಟಿದ ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಇನ್ನಿಲ್ಲ

ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ ...

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...

ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಶಿವಯೋಗಿಗಳ ನಿಧನಕ್ಕೆ ರಾಬ್ತಾ ಮಿಲ್ಲತ್ ತೀವ್ರ ಸಂತಾಪ

ಭಟ್ಕಳ: ತ್ರಿವಿಧ ದಾಸೋಹಿ ಜ್ಞಾನಯೋಗಿ ಸಿದ್ದಗಂಗಾ ಶ್ರೀಗಳ ನಿಧನಕ್ಕೆ ರಾಬ್ತಾ-ಇ-ಮಿಲ್ಲತ್ ಸಂಸ್ಥೆಯ ಜಿಲ್ಲಾಧ್ಯಕ್ಷ ನ್ಯಾಯಾವಾದಿ ...

ಮಾನವೀಯತೆಯ ಸೌಧದಡಿ ಸಮಾನತೆಯ ಸಮಾಜ ಕಟ್ಟಿದ ಕಾಯಕ ಯೋಗಿ ಡಾ.ಶಿವಕುಮಾರ ಸ್ವಾಮೀಜಿ ಇನ್ನಿಲ್ಲ

ತುಮಕೂರು: ಪದ್ಮಭೂಷಣ, ಕರ್ನಾಟಕ ರತ್ನ, ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಬೆಳಗ್ಗೆ ...