ಜನತೆಗೆ ತಿಳುವಳಿಕೆ ಇದ್ದರೂ ಕಾನೂನು ಉಲ್ಲಂಘನೆಯಾಗುತ್ತಿರುವುದು ವಿಷಾದಕರ ಸಂಗತಿ -ಮಹಾಲಕ್ಷ್ಮಿ ನೇರಳೆ.ಎಸ್  

Source: sonews | By Staff Correspondent | Published on 12th December 2017, 11:29 PM | State News | Don't Miss |

ಕೋಲಾರ : ಭಾರತದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು, ರಾಜ್ಯ ನಿರ್ದೇಶಕ ತತ್ವಗಳು ಸೇರಿದಂತೆ ಸಮಾನತೆ, ಸಹೋದರತೆ, ಬಾತೃತ್ವ ಸಾರುವ ಅಧಿನಿಯಮಗಳು ಅಡಕವಾಗಿವೆ. ಈ ಎಲ್ಲಾ ಹಕ್ಕುಗಳ ಬಗ್ಗೆ ಜನತೆಗೆ ತಿಳುವಳಿಕೆ ಇದ್ದರೂ ಸಹ ಪ್ರತಿ ದಿನ ಮನುಷ್ಯ ಕೆಲವೊಮ್ಮೆ ಕಾನೂನನ್ನು ಉಲ್ಲಂಘಿಸುತ್ತಿರುವುದು ಸಮಂಜಸವಲ್ಲ ಎಂದು ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಹಾಲಕ್ಷ್ಮಿ ನೇರಳೆ.ಎಸ್ ಅವರು ವಿಷಾದವ್ಯಕ್ತಪಡಿಸಿದರು.

ಇಂದು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಕಾನೂನು ಅರಿವು - ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದ ಮೊದಲನೇ, ಎರಡನೇ ಮಹಾಯುದ್ಧಗಳು ನಡೆದ ಮೇಲೆ ಕದನ ನಡೆದ ದೇಶಗಳಲ್ಲಿ ಸಂಭವಿಸಿದ ಅಪಾರ ಸಾವು ನೋವುಗಳನ್ನು ಕಂಡು ನಿಬ್ಬೆರಗಾದ ಬುದ್ಧಿಜೀವಿಗಳು, ಚಿಂತಕರು 1948 ಡಿಸೆಂಬರ್ 10ರಂದು ವಿಶ್ವಸಂಸ್ಥೆಯಲ್ಲಿ ಮಾನವನ ಹಕ್ಕುಗಳ ದಿನಾಚರಣೆಯನ್ನು ಘೋಷಣೆ ಮಾಡಿದರು. ಅಂದಿನಿಂದ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲೂ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಮಾನವನ ಮೂಲಭೂತ ಹಕ್ಕುಗಳಿಗೆ ಚ್ಯುತಿ ಬರದ ಹಾಗೆ ಕಾರ್ಯೋನ್ಮುಖವಾಗುತ್ತಿದೆ ಎಂದು ತಿಳಿಸಿದರು

ಭಾರತದ ಸಂವಿಧಾನದಲ್ಲೂ ಮಾನವ ಹಕ್ಕುಗಳ ರಕ್ಷಣೆಗಾಗಿಯೇ ಸಮಾನತೆ ಹಕ್ಕು, ಸ್ವಾತಂತ್ರ್ಯದ ಹಕ್ಕು, ಒಳಗೊಂಡಂತೆ ಇತರೆ ಮೂಲಭೂತ ಹಕ್ಕುಗಳು, ರಾಜ್ಯ ನಿರ್ದೇಶಕ ತತ್ವಗಳ ಮೂಲಕ ಪ್ರತಿ ಮಾನವನಿಗೂ ಸಮಾಜದಲ್ಲಿ ಬಾಳಲು ಮೂಲಭೂತ ಹಕ್ಕುಗಳನ್ನು ಒದಗಿಸಲಾಗಿದೆ. ಕಾನೂನಿನ ಮುಂದೆ ಸರ್ವರೂ ಸಮಾನರು ಎಂದು ಒತ್ತಿ ಹೇಳಲಾಗಿದೆ.  ಹಾಗಾಗಿ ಸಮಾಜದಲ್ಲಿ ಮೇಲು ಕೀಳು ಎಂಬ ಬೇಧಭಾವ, ತಾರತಮ್ಯ ಎಸಗುವಂತಿಲ್ಲ. ಕಾನೂನಿನ ಉಲ್ಲಂಘನೆ ಮಾಡುವುದನ್ನು ತಡೆಯಲೆಂದೇ ಮಾನವ ಹಕ್ಕುಗಳ ರಕ್ಷಣೆ ಕಾಯ್ದೆಯನ್ನು 1993ರಲ್ಲಿ   ಪ್ರಾರಂಭ ಮಾಡಲಾಗಿದೆ. ಆ ಮೂಲಕ ದೇಶದಲ್ಲಿ ಮಾನವ ಸುಭೀಕ್ಷೆಯಿಂದ ಜೀವಿಸುವ ಹಕ್ಕುಗಳನ್ನು ಕಲ್ಪಿಸಲಾಗಿದೆ.   ರಾಷ್ಟ್ರದ ಮಾನವ ಹಕ್ಕುಗಳ ಪ್ರಾಧಿಕಾರದ ಅಡಿಯಲ್ಲಿ ರಾಜ್ಯಗಳಲ್ಲಿ ಮಾನವ ಹಕ್ಕುಗಳ ಪ್ರಾಧಿಕಾರ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ಸಂವಿಧಾನದ 17ನೇ ವಿಧಿಯನ್ವಯ ಅಸ್ಪøಶ್ಯತೆಯನ್ನು ಸಂಪೂರ್ಣವಾಗಿ ನಿಷೇದ ಮಾಡಲಾಗಿದೆ. ಈ ಕಾಯ್ದೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ನಡೆದರೆ ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ಬಾಲ ಕಾರ್ಮಿಕರು ದುಡಿಮೆ ಮಾಡುವುದೂ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾಯ್ದೆ ಬಲಿಷ್ಠವಾಗಿದ್ದರೂ ಇಟ್ಟಿಗೆ ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕರನ್ನು ಜೀತ ಪದ್ಧತಿಯಂತೆ ದುಡಿಮೆ ಮಾಡಿಸಿಕೊಳ್ಳುತ್ತಿರುವ ಪ್ರಕರಣ ಅಲ್ಲಲ್ಲಿ ಘೋಚರವಾಗುತ್ತಿವೆ. ಇಂತಹ ಪ್ರಕರಣಗಳೂ ಸಹ ಮಾನಹ ಹಕ್ಕುಗಳ ಉಲ್ಲಂಘನೆಗೆ ನಿದರ್ಶನ. ಆದ್ದರಿಂದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಬೇಕು. ಸರ್ಕಾರದ ಆದೇಶದಂತೆ 16 ವರ್ಷದವರೆಗೆ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದರಿಂದ ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.

ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಮಾಹಿತಿ ಪಡೆಯಲು ಮಾಹಿತಿ ಹಕ್ಕು ಅಧಿನಿಯಮ ಅನ್ವಯ ಮಾಹಿತಿದಾರ ತನಗೆ ಬೇಕಾದ ಮಾಹಿತಿಯನ್ನು ಪಡೆಯಲು ಅನುಕೂಲ ಕಲ್ಪಿಸಲಾಗಿದೆ. ನಾನಾ ರೀತಿಯಲ್ಲಿ ಮಾನವನಿಗೆ ಬದುಕುವ ಹಕ್ಕಿಗೆ ಒತ್ತು ನೀಡುವ ಸಲುವಾಗಿ ರಾಷ್ಟ್ರೀಯ ಹಾಗೂ ರಾಜ್ಯ ಮಾನವ ಹಕ್ಕುಗಳ ಪ್ರಾಧಿಕಾರ ನೆರವಾಗುತ್ತಿದೆ. ಈ ಎಲ್ಲಾ ಕಾನೂನಿನ ನೆರವನ್ನು ಜನ ಸಾಮಾನ್ಯರಿಗೆ ಉಚಿತವಾಗಿ ನೀಡುವ ಉದ್ದೇಶ ಜಿಲ್ಲಾ ಕಾನೂನು ಪ್ರಾಧಿಕಾರದ್ದಾಗಿದೆ. ಜನತೆ ಕಾನೂನು ನೆರವಿನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಳಿಕ ಉಪನ್ಯಾಸ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಗುರುರಾಜ ಜಿ.ಶಿರೋಳ ಅವರು, ಎರಡು ವಿಶ್ವ ಯುದ್ಧಗಳಲ್ಲಿ ಸಂಭವಿಸಿದ ಅಪಾರ ನೋವಿನಿಂದ 1945ರಲ್ಲಿಯೇ ಮಾನವ ಹಕ್ಕುಗಳ ಚಿಂತನೆ ಜಾಗತಿಕ ಮಟ್ಟದಲ್ಲಿ ನಡೆಯಿತು. 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ  ನಮ್ಮ ದೇಶದ ಸಂವಿಧಾನದಲ್ಲಿ ಮಾನವ ಹಕ್ಕುಗಳನ್ನು ಸಂರಕ್ಷಿಸಲೆಂದೆ ಪ್ರಸ್ತಾವನೆಯಲ್ಲಿಯೇ  ಮಾನವನ ಮೂಲಭೂತ ಹಕ್ಕುಗಳ ಬಗ್ಗೆ ಉಲ್ಲೇಖಿಸಲಾಗಿದೆ. ಅದರನ್ವಯ ಪ್ರತಿ ಮನುಷ್ಯನಿಗೆ ಸಮಾನತೆಯ ತತ್ವವನ್ನು ಒತ್ತಿ ಹೇಳಲಾಗಿದೆ. ರಾಜ್ಯ ನಿರ್ದೇಶಕ ತತ್ವಗಳು ಈ ಸಂಬಂಧ ಸಮಗ್ರವಾಗಿ ವಿವರಣೆ ನೀಡಿದೆ ಎಂದು ಹೇಳಿದರು.

ದೇಶದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆಗಳಂತಹ ಕಠಿಣ ಕಾನೂನುಗಳು ಜಾರಿಯಾಗಿವೆ. ಆದರೂ ಸಹ ಮಾನವ ಹಕ್ಕುಗಳ ಉಲ್ಲಂಘನೆಯಿಂದಲೇ ಮಾನವ ಹಕ್ಕುಗಳ ರಕ್ಷಣೆಯ ಕಾನೂನುಗಳು ಜಾರಿಯಾಗುತ್ತಲೇ ಇವೆ. ಆ ಮೂಲಕ ಸಮಾನ ಶಿಕ್ಷಣ, ವೇತನ, ಪ್ರತಿ ಮನುಷ್ಯನಿಗೂ ಜೀವಿಸುವ ಹಕ್ಕುನ್ನು ಸಂವಿಧಾನದ ಮೂಲಭೂತ ಹಕ್ಕುಗಳಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ಸಮಾಜದಲ್ಲಿ ಮಾನವ ಯಾವುದೇ ಕರ್ತವ್ಯ ಮಾಡಿದರೂ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗದಂತೆ ನಡೆದುಕೊಳ್ಳಬೇಕು. ಇದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ನಾವುಗಳು ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು ಹಾಗೂ ಬದುಕಲು ಅವಕಾಶ ಕಲ್ಪಿಸಬೇಕು. ಆಗ ಮಾತ್ರವೇ ಮಾನವ ಹಕ್ಕುಗಳನ್ನು ಸಂರಕ್ಷಿಸಲು ಸಾದ್ಯವಾಗುತ್ತದೆ ಎಂದು ತಿಳಿಸಿದರು.

ಕೋಲಾರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ.ರಾಮಕೃಷ್ಣ ರವರು ಮಾತನಾಡಿ, ಹೆಣ್ಣಿಗೆ ಶಿಕ್ಷಣ ಅತಿ ಮುಖ್ಯ.  ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಸಮಾನತೆ ಕಾಯ್ದುಕೊಳ್ಳಬೇಕು. ಮನುಷ್ಯ ಶಾಂತಿಯುತವಾಗಿ ಬದುಕಲು ಮಾನವ ಹಕ್ಕುಗಳು ಬೇಕು. ಈ ಮೂಲಭೂತ ಹಕ್ಕುಗಳು ಉಲ್ಲಂಘನೆಯಾದರೆ ಕಾನೂನು ಪ್ರಾಧಿಕಾರಕ್ಕೆ ದೂರು ನೀಡುವ ಆತ್ಮಸ್ಥೈರ್ಯ, ಧೈರ್ಯ ತುಂಬಬೇಕು. ಹಾಗೂ ಜಾಗೃತಿ ಮೂಡಿಸುವುದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶ ಎಂದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ಶುಭಾಕಲ್ಯಾಣ್, ಅಪರ ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ರೇಖಾ, ಎ.ಎಸ್.ಪಿ ರಾಜೀವ್, ನ್ಯಾಯಾಧೀಶರಾದ ಎನ್.ವಿ.ವಿಜಯ್, ತಹಶೀಲ್ದಾರ್ ವಿಜಯಣ್ಣ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ಹೆಚ್.ವೆಂಕಟರಮಣ, ವಕೀಲರಾದ  ಧನರಾಜ್, ಲಕ್ಷ್ಮಿನಾರಾಯಣ, ವಿನೋದ್, ಗಾಯಿತ್ರಿ ಸೇರಿದಂತೆ ನ್ಯಾಯಾಧೀಶರು, ವಕೀಲರು, ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...