ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಗುರ್ತಿಸಿ - ಬಿ.ಇ.ಒ. ರಘುನಾಥರೆಡ್ಡಿ

Source: sonews | By sub editor | Published on 20th July 2018, 12:36 AM | State News |

ಕೋಲಾರ :  ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಗುರ್ತಿಸಿ ಸ್ಪರ್ಧಾ ಮನೋಭಾವ ಬೆಳೆಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ರಘುನಾಥರೆಡ್ಡಿ ತಿಳಿಸಿದರು.
    
ತಾಲ್ಲೂಕಿನ ಅಬ್ಬಣಿಯಲ್ಲಿಂದು ಸಾರ್ವಜನಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದ ಪೂರ್ವಬಾವಿ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. 
    
ಇತ್ತೀಚೆಗಷ್ಟೇ ವಿಶ್ವದ ಗಮನ ಸೆಳೆದ ಅಸ್ಸಾಂನ ಹಿಮಾದಾಸ್ ಕಡುಬಡತನದಲ್ಲೂ ತನ್ನಲ್ಲಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಿ ಹದಿನೆಂಟು ವಯಸ್ಸಿನೊಳಗಿನ ವಿದ್ಯಾರ್ಥಿಗಳಲ್ಲಿ ವಿಶ್ವದ ಕ್ರೀಡಾ ತಾರೆಯಾಗಿ ಮಿನುಗಿದ್ದು ಇದನ್ನು ಎಲ್ಲರೂ ಉದಾಹರಣೆಯನ್ನಾಗಿ ಇರಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿ ಸ್ಪರ್ಧಿಯನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು ಎಂದರು.
    
ವಿದ್ಯಾರ್ಥಿಗಳು ಯಾವುದೇ ಕ್ರೀಡಾ ಸ್ಪರ್ಧೆಯಲ್ಲಿ ಸ್ಪರ್ಧೆಯೇ ಮುಖ್ಯ ಎಂಬ ಭಾವನೆಯನ್ನು ಮನನ ಮಾಡಿಕೊಂಡು ಸೋಲು-ಗೆಲುವನ್ನು ಲೆಕ್ಕಿಸಬಾರದು. ಆಗ ಮಾತ್ರ ಹೋಬಳಿ, ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಎಲ್ಲವೂ ಗೌಣವಾಗುತ್ತದೆ. ಸರ್ಕಾರ ಸಮಾಜ ಮನ್ನಣೆ ಸಿಗುತ್ತದೆ ಎಂದರು.
    
ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಂಜುನಾಥ್ ಮಾತನಾಡಿ ಜಿಲ್ಲೆಯಾದ್ಯಂತ ಈಗಾಗಲೇ ಪ್ರತಿ ತಾಲ್ಲೂಕಿನಲ್ಲಿ ದಿನಾಂಕಗಳನ್ನು ಹೋಬಳಿ ಮಟ್ಟದಿಂದ ನಿಗಧಿಪಡಿಸಿದ್ದು, ಕ್ರೀಡಾಕೂಟ ಯಶಸ್ಸಿಗೆ ದೈಹಿಕ ಶಿಕ್ಷಕರು ಹಾಗೂ ಶಿಕ್ಷಕರು ಶ್ರಮವಹಿಸುವ ಅಗತ್ಯವಿದೆ ಎಂದರು
    
ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲ್ಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಸಿ.ಎಸ್.ಚೌಡಪ್ಪ ಮಾತನಾಡಿ ಸ್ಪರ್ಧಾ ನಿಯಮಗಳನ್ನು ಪಾಲಿಸುವುದು, ವಿದ್ಯಾರ್ಥಿಗಳನ್ನು ಕರೆತರುವುದು ಮತ್ತು ಯಾವುದೇ ಸಮಸ್ಯೆ ಉದ್ಭವಿಸದಂತೆ ವಿದ್ಯಾರ್ಥಿ ರಕ್ಷಣೆ ನಮ್ಮ ಜವಾಬ್ದಾರಿ ಎಂಬುದನ್ನು ಅರಿತು ಕ್ರೀಡಾಪ್ರೇಮಿಗಳಾಗುವಂತೆ ತಿಳಿಸಿದರು.
    
ತಾಲ್ಲೂಕು ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಮಾತನಾಡಿ ತಾಲ್ಲೂಕಿನಾದ್ಯಂತ ಈಗಾಗಲೇ ಶಾಲಾ ಮಟ್ಟದಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಗುಂಪು ಕ್ರೀಡೆಗಳು ವೈಯಕ್ತಿಕ ಕ್ರೀಡೆಗಳನ್ನು ಯಶಸ್ವಿಯಾಗಿ ಮಾಡಿರುವುದು ಶಿಕ್ಷಕರ ಸುತ್ಯಾರ್ಹ ಕಾರ್ಯ ಹಾಗೆಯೇ ಮುಂದಿನ ದಿನಗಳಲ್ಲೂ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಲು ತಿಳಿಸಿದರು.
     
ಜಿಲ್ಲಾ ಭಡ್ತಿ ಮುಖ್ಯೋಪಾದ್ಯಾಯರ ಸಂಘದ ಉಪಾಧ್ಯಕ್ಷ ಜಿ.ಶ್ರೀನಿವಾಸ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚಂದ್ರಪ್ಪ,  ಶಾಪೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಸುಬ್ರಮಣಿಯಪ್ಪ, ಪಟ್ನ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯ ಶ್ರೀರಾಮರೆಡ್ಡಿ, ಅಬ್ಬಣಿ ಸರ್ಕಾರಿ ಶಾಲೆಯ ಮುಖ್ಯೋಪಾದ್ಯಾಯಿನಿ ಲಕ್ಷ್ಮೀದೇವಮ್ಮ ಎಲ್ಲಾ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಮುಖ್ಯೋಪಾದ್ಯಾಯರು, ದೈಹಿಕ ಶಿಕ್ಷಕರು, ಸಹ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.
 

Read These Next

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...