ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆ, ಹಾಸ್ಟಲ್‍ಗಳಿಗೆ ಸೇರಿಸಿ - ಬಾಲಾಜಿ

Source: sonews | By Staff Correspondent | Published on 29th May 2018, 11:17 PM | State News |

ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆಯು ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿದ್ದು, ಹಲವಾರು ಯೋಜನೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಇಂತಹ ಸೌಲಭ್ಯಗಳ ಸದುಪಯೋಗ ಆಗಬೇಕು. ಈ ನಿಟ್ಟಿನಲ್ಲಿ ಗುಣಮಟ್ಟದ  ಶಿಕ್ಷಣ ಪಡೆಯಲು ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ, ಹಾಸ್ಟಲ್ ಸೌಲಭ್ಯ ಪಡೆದುಕೊಳ್ಳುವಂತೆ ಪೋಷಕರಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಾಜಿ ತಿಳಿಸಿದರು.
    

ತಾಲ್ಲೂಕಿನ ಹರಟಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು ಸಮಾಜ ಕಲ್ಯಾಣ ಇಲಾಖೆಯ ಕರಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.
    

ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ಜ್ಞಾನಾರ್ಜನೆ ಹೊಂದಿ ಸಮಾಜದ ಅತ್ಯನ್ನತ ಸ್ಥಾನದಲ್ಲಿದ್ದಾರೆ. ಸರ್ಕಾರಿ ಶಾಲೆಗಳು ಇಂದು ಯಾವುದರಲ್ಲೂ ಕಡೆಮೆಯಿಲ್ಲ ವೆಂಬಂತೆ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಬೇಕು. ಸರ್ಕಾರ ನೀಡುವ ಕ್ಷೀರಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ಹಲವಾರು ಯೋಜನೆಗಳ ಸದುಪಯೋಗ ಪಡೆದುಕೊಂಡು ಸರ್ಕಾರಿ ಹಾಸ್ಟಲ್‍ಗಳಲ್ಲಿ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ವ್ಯಕ್ತಿತ್ವವನ್ನು ಮೈಗೂಡಿಸಿಕೊಳ್ಳಬೇಕು ಎಂದರು.
    

ವಿದ್ಯಾರ್ಥಿಗಳನ್ನು ಶಾಲೆಗೆ ಆಹ್ವಾನಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲ್ಲೂಕು ಶಿಕ್ಷಣ ಸಂಯೋಜಕ ಆರ್. ಶ್ರೀನಿವಾಸನ್ ಮಾತನಾಡಿ ವಿದ್ಯಾರ್ಥಿಗಳು ತಂದೆ-ತಾಯಿ, ಗುರು-ಹಿರಿಯರಿಗೆ ಮೆಚ್ಚುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಸರ್ಕಾರ 23000 ಕೋಟಿ ರೂಗಳನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೀಡಿದ್ದು, ಉತ್ತಮವಾಗಿ ಓದಿ ಉನ್ನತ ಹುದ್ದೆ ಪಡೆದುಕೊಳ್ಳಬೇಕು. ಉಚಿತ ಪುಸ್ತಕ, ಬೈಸಿಕಲ್, ಶೂ, ಸಮವಸ್ತ್ರ ಮತ್ತಿತರ ಸೌಲಭ್ಯಗಳನ್ನು ಪಡೆಯುವ ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು.
    

ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಿ. ಶ್ರೀನಿವಾಸ್‍ಮಾತನಾಡಿ ವಿದ್ಯಾರ್ಥಿಗಳು ಸುಸಂಸ್ಕøತ ಪ್ರಜೆಗಳಾಗಿ ಸಮಾಜಕ್ಕೆ ಮತ್ತು ತಂದೆ-ತಾಯಿಗಳಿಗೆ ಹೊರೆಯಾಗದಂತೆ ಶ್ರಮಪಟ್ಟು ಓದಿ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 
    

ಸಹ ಶಿಕ್ಷಕರಾದ ಪಿ.ಎಂ.ಗೋವಿಂದಪ್ಪ, ಎಂ.ಆರ್.ಮೀನ, ಹೆಚ್.ಮುನಿಯಪ್ಪ, ಆರ್.ಮಂಜುಳ, ಕೆ.ಮಮತ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

Read These Next