ನಾವು ಮಾಡಿದ ಉತ್ತಮ ಕಾರ್ಯಗಳೇ ನಮಗೆ ಶ್ರೀರಕ್ಷೆಯಾಗುತ್ತವೆ-ತ್ಯಾಗರಾಜ್

Source: sonews | By Staff Correspondent | Published on 15th January 2018, 9:34 PM | State News |

ಕೋಲಾರ  : ಮನುಷ್ಯನು ಹುಟ್ಟಿದ ಮೇಲೆ ಸಾಯಲೇಬೇಕು. ಇದರ ನಡುವೆ ತಾನು ಮಾಡಿದ ಒಳ್ಳೆಯ ಕಾರ್ಯಗಳು ಶಾಶ್ವತವಾಗಿ ಉಳಿಯುವಂತಿರಬೇಕು. ಅದರಲ್ಲೂ ವಿಕಲಚೇತನ ಮಕ್ಕಳಿಗೆ ಸೇವೆ ಸಲ್ಲಿಸುವ ಸೌಭಾಗ್ಯಕ್ಕಿಂತ ಬೇರೊಂದಿಲ್ಲ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಆರ್. ತ್ಯಾಗರಾಜ್ ಅಭಿಪ್ರಾಯಪಟ್ಟರು.
    
ಕೋಲಾರ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಕೂಡ ಅಂತರಂಗಂಗೆ ವಿದ್ಯಾ ಸಂಸ್ಥೆಯ ಬುದ್ದಿಮಾಂಧ್ಯ ಮಕ್ಕಳಿಗೆ ಕಬ್ಬು, ಎಳ್ಳುಬೆಲ್ಲ, ಸಿಹಿ ಹಂಚಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ ಸಂದರ್ಭದಲ್ಲಿ ಮಾತನಾಡಿದರು.
    
ಮಾನವ ಹಕ್ಕುಗಳ ಸಂಘಟನೆಯ ರೈತ ಘಟಕದ ಅಧ್ಯಕ್ಷ ಶಿವಕುಮಾರ್ ಮಾತನಾಡಿ ಇಂತಹ ಮಕ್ಕಳೊಂದಿಗೆ ಹಬ್ವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಇಂತಹ ಉತ್ತಮ ಕಾರ್ಯವನ್ನು ಮಾಡುತ್ತಿರುವ ಸಂಸ್ಥೆಯ ಆಡಳಿತ ವರ್ಗ, ಸಿಬ್ಬಂದಿಯ ಶ್ರಮವನ್ನು ಎಷ್ಟು ಹೊಗಳಿದರು ಸಾಲದು. ಇಲ್ಲಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಬಟ್ಟೆಗಳನ್ನು ಒಲೆಸುವುದಾಗಿ ತಿಳಿಸಿದರು.    
    
ಇದೇ ಸಂದರ್ಭದಲ್ಲಿ ಬುದ್ದಿಮಾಂದ್ಯ ಮಕ್ಕಳು ಗೀತಗಾಯನ, ಕಿವುಡರ ಸಂಸಾರ ಎಂಬ ನಾಟಕ ಪ್ರದರ್ಶ ನಡೆಸಿಕೊಟ್ಟರು.
    
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಗೌರವಾಧ್ಯಕ್ಷ ಮುನಿವೆಂಕಟಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎನ್. ಮಂಜುನಾಥ್, ಉಪಾಧ್ಯಕ್ಷ ಕೀಲುಕೋಟೆ ಆಂಜಿನಪ್ಪ, ಜಿಲ್ಲಾ ಸಲಹೆಗಾರ ಕೆ.ಎಂ.ರಾಜಣ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಬಿ. ರಾಮ್‍ಸಿಂಗ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಕೆ.ಎನ್. ಗೋವಿಂದರಾಜು, ಮಂಜುನಾಥ್ ಸಿಂಗ್, ಮುಖಂಡರುಗಳಾದ ನಾರಾಯಣಸ್ವಾಮಿ, ಮಹೇಶ್, ಅಮ್ಮೇರಹಳ್ಳಿ ಮುನಿರಾಜು, ಎ.ವಿ.ರಮೇಶ್, ಕೆ.ಎನ್. ಬಾಲಕೃಷ್ಣ, ಜಯಪ್ರಕಾಶ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯಸ್ಥ ಶಂಕರ್‍ರವರು ಸ್ವಾಗತಿಸಿ, ವಿದ್ಯಾರ್ಥಿ ಶರತ್ ಪ್ರಾರ್ಥಿಸಿ, ಶಿಕ್ಷಕರು ನಿರೂಪಿಸಿ ವಂದಿಸಿದರು.

                                

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...