ಕನ್ನಡದ ಕೋಟ್ಯಾಧಿಪತಿಗೆ ಕೋಲಾರದ ಶಿಕ್ಷಕಿ ಪದ್ಮಾವತಿ

Source: sonews | By sub editor | Published on 7th July 2018, 12:38 AM | State News |

ಕೋಲಾರ : ಸರ್ಕಾರಿ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಸ್ಪರ್ಧಾ ಪ್ರಪಂಚದಲ್ಲಿ ಯಾವತ್ತು ಮುಂಜೂಣಿಯಲ್ಲಿರುತ್ತಾರೆ ಎನ್ನುವುದಕ್ಕೆ ತಾಜಾ ಉದಾಹರಣಗೆ ಶಾಪೂರು ಸರ್ಕಾರಿ ಪ್ರೌಢಶಾಲಾ ಶಿಕ್ಷಕಿ ಪದ್ಮಾವತಿ ಎಂದು ಜಿಲ್ಲಾ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಜೆ.ಜಿ.ನಾಗರಾಜ್ ತಿಳಿಸಿದರು.

ನಗರದ ಪಾಲಸಂದ್ರ ಲೇಔಟ್‍ನಲ್ಲಿಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಕನ್ನಡ ಕೋಟ್ಯಾಧಿಪತಿ ಸ್ಪರ್ಧೆಗೆ ಆಯ್ಕೆಯಾದ ಪದ್ಮಾವತಿ ರವರಿಗೆ ಸನ್ಮಾನಿಸಿ ಬೀಳ್ಕೊಡುಗೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಸ್ಟಾರ್ ಸುವರ್ಣ ಛಾನಲ್ ನಡೆಸವ ಕೋಟ್ಯಾದಿಪತಿ ಆಯ್ಕೆಯಲ್ಲಿ ನಾಲ್ಕು ರೌಂಡ್‍ಗಳ ಪರೀಕ್ಷೆಯಲ್ಲಿ ಗೆದ್ದು ಈ ದಿನ ಕಾರ್ಯಕ್ರಮದಲ್ಲಿ ಸ್ಪರ್ಧಾಳು ಆಗಿರುವುದು ಪ್ರಶಂಶನೀಯ ವಿಚಾರ ಎಂದರು

ಕೋಲಾರ ಜಿಲ್ಲೆಯಿಂದ ಮೊಟ್ಟ ಮೊದಲ ಬಾರಿಗೆ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಸ್ಪರ್ಧೆಗೆ ಹೋಗುತ್ತಿರುವ ಪದ್ಮಾವತಿಯವರಿಗೆ ಅಭಿನಂದನೆ ಸಲ್ಲಿಸಿದ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ. ಶ್ರೀನಿವಾಸ್ ವಹಿಸಿದ್ದು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ತಾಲ್ಲೂಕು ಸ್ಕೌಟ್ಸ್ ಅಂಡ್ ಗೈಡ್ಸ್ ಸಮಿತಿ ಅಧ್ಯಕ್ಷ ಅಪ್ಪ ನಾರಾಯಣಸ್ವಾಮಿ, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಜಯದೇವ್, ಜಿಲ್ಲಾ ಕಾರ್ಮಿಕ ವಿಭಾಗದ ಕಾಂಗ್ರೆಸ್ ಅಧ್ಯಕ್ಷ ಆಟೋ ಸುರೇಶ್, ಶಿಕ್ಷಣ ಸಂಯೋಜಕ ಆರ್. ಶ್ರೀನಿವಾಸನ್, ಹಾಸ್ಯ ಕಲಾವಿದ ಚಿಟ್ನಹಳ್ಳಿ ರಾಮಚಂದ್ರ, ಮುಖಂಡ ಗೋಪಾಲ್, ಜಿಲ್ಲಾ ಚುಟುಕು ಸಹಿತ್ಯ ಪರಿಷತ್ ಕಾರ್ಯದರ್ಶಿ ಪಿ. ನಾರಾಯಣಪ್ಪ, ಉಪಾಧ್ಯಕ್ಷ ಟಿ. ಸುಬ್ವರಾಮಯ್ಯ, ಪಾಪೇಗೌಡ ಮತ್ತಿತರರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.
 

Read These Next

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...