ಕೋಲಾರ : ಪೋಲಿಯೋ ನಿರ್ಮೂಲನೆಗೆ ಕಾರ್ಯಾಗಾರ

Source: sonews | By Staff Correspondent | Published on 18th January 2018, 11:30 PM | State News |

ಕೋಲಾರ : ಕೋಲಾರ ರೋಟರಿ ಸಂಸ್ಥೆ ಹಾಗೂ ಜಿಲ್ಲಾ ಪಲ್ಸ್ ಪೋಲಿಯೊ ಕಮಿಟಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಪೋಲಿಯೊ ನಿರ್ಮೂಲನೆ ಕಾರ್ಯಗಾರವನ್ನು ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ನಡೆಯಿತು. 

ಪೋಲಿಯೊ ನಿರ್ಮೂಲನೆ ಕಾರ್ಯಗಾರವನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಎಸ್.ಎನ್. ವಿಜಯ ಕುಮಾರ ಉದ್ಘಾಟನೆ ಮಾಡಿದರು,  ಪಲ್ಸ್ ಪೋಲಿಯೊ ಬಿತ್ತಿ ಪತ್ರಗಳನ್ನು ರೋಟರಿ ಅದ್ಯಕ್ಷ ದೇವರಾಜ್ ಬಿಡುಗಡೆ ಮಾಡಿ ಮಾತನಾಡಿ ಈ ಒಂದು ಕಾರ್ಯಗಾರದಲ್ಲಿ ಪೋಲಿಯೊ ಮುಕ್ತ ಜಿಲ್ಲೆಯನ್ನಾಗಿಸಲು ಆಶಾ ಕಾರ್ಯಕರ್ತರು ಶ್ರಮಿಸಬೇಕೆಂದು ತಿಳಿಸಿದರು. ವೈದ್ಯಧಿಕಾರಿ ಎನ್.ಟಿ. ನಾಗರಾಜ್ ಪೋಲಿಯೊ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲಾಖೆ ಸಿಬ್ಬಂದಿ ವರ್ಗದವರಿಗೆ ಕಿರುಚಿತ್ರ ಪ್ರದರ್ಶನದ ಮುಖಾಂತರ ತಿಳಿಸಿದರು.

ರೋಟರಿ ಜಿಲ್ಲಾ 3190 ಪೋಲಿಯೊ ಛೇರಮನ್ ವಿ.ಪಿ.ಸೋಮಶೇಖರ್ ಮಾತನಾಡಿ ಇದೇ ತಿಂಗಳ 28ರಂದು ಭಾನುವಾರ ಇಡೀ ರಾಜ್ಯಾದ್ಯಂತ 5 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ತಮ್ಮ 0ಯಿಂದ 5 ವರ್ಷದ ಮಕ್ಕಳನ್ನು ಕರೆತರಲು ಸಹಕರಿಸಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಧಿಕಾರಿ ಚಂದನ ಕುಮಾರ, ರೋಟರಿ ಖಜಾಂಚಿ ರೋ| |ಸಿ.ಆರ್.ಅಶೋಕ, ವಾ|| ಓಂಪ್ರಕಾಶ್, ವಾ||ರಂಜಿತ್ ಕುಮಾರ್, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂಧಿ ವರ್ಗ ಮತ್ತು ಜಿಲ್ಲಾ ಆಶಾ ಕಾರ್ಯಕರ್ತರು ಹಾಜರಿದ್ದರು. 
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...