ಕೋಲಾರ: ವಸತಿಶಾಲೆಗಳ ಹಗರಣಗಳನ್ನು ಸಿಬಿಐ ಗೆ ಒಪ್ಪಿಸುವಂತೆ ರೈತ ಸಂಘ ಆಗ್ರಹ

Source: sonews | By Staff Correspondent | Published on 16th March 2018, 6:55 PM | State News | Don't Miss |

ಕೋಲಾರ: ಜಿಲ್ಲಾಧ್ಯಂತ ಇರುವ ವಸತಿ ಶಾಲೆಗಳ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು.  ಬ್ರಷ್ಟಾಚಾರದಲ್ಲಿ ತೊಡಗಿರುವ ಸಿಬ್ಬಂಧಿಯನ್ನು ಕೆಲಸದಿಂದ ವಜಾ ಮಾಡಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ರೈತ ಸಂಘದಿಂದ ಸಮಾಜ ಕಲ್ಯಾಣ ಇಲಾಖೆ ಮುಂದೆ ಧರಣಿ ಮಾಡಿ ಆಗ್ರಹಿಸಲಾಯಿತು. 

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಬಡಮಕ್ಕಳ ವಿದ್ಯಾಭ್ಯಾಸದ ಹಿತ ದೃಷ್ಟಿಯಿಂದ ಕಟ್ಟಕಡೆಯ ಮಕ್ಕಳಿಗೂ ಶಿಕ್ಷಣ ದೊರೆಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟ್ಯಾಂತರ ರೂ. ಅನುದಾನವನ್ನು ಬಿಡುಗಡೆ ಮಾಡಿ ವಸತಿ ಶಾಲೆಗಳಾದ ಮುರಾರ್ಜಿದೇಸಾಯಿ ಅಂಬೇಡ್ಕರ್ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಅನುಕೂಲವಾಗಲೆಂದು ನಿರ್ಮಾಣ ಮಾಡಿ ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಣ ಬಿಡುಗಡೆ ಮಾಡುತ್ತಿದ್ದಾರೆ.  ಅದಕ್ಕೆ ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಂದ ಹಿಡಿದು ಶಾಲೆಯ ಪ್ರಾಂಶುಪಾಲರು, ಸಿಬ್ಬಂದಿವರ್ಗ, ಟೆಂಡರ್‍ದಾರರು ಕಮೀಷನ್ ಆಸೆಗಾಗಿ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸದೆ ಮೂಲಭೂತ ಸೌಕರ್ಯಗಳಿಂದ ಶಾಲೆಗಳನ್ನು ವಂಚಿತ ಮಾಡುವ ಜೊತೆಗೆ ಮಕ್ಕಳ ಭವಿಷ್ಯದ ಜೊತೆ ಚಲ್ಲಾಟವಾಡುತ್ತಿರುವುದುಮಕ್ಕಳ ಭವಿಷ್ಯ ಆತಂಕದಲ್ಲಿದ್ದು, ವಸತಿ ಶಾಲೆಗಳು ಅಧಿಕಾರಿಗಳ ಲೂಟಿ ಕೇಂದ್ರಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಸ್ ಮಾತನಾಡಿ ಮತ್ತೊಂದೆಡೆ ಮಕ್ಕಳಿಗೆ ಬುದ್ದಿ ಹೇಳಬೇಕಾದ ಗುರುಗಳೆ ಹಣ ಮತ್ತು ಅಧಿಕಾರಕ್ಕಾಗಿ ಜಾತಿ ನಿಂದನೆ ಪರಸ್ಪರ ಆರೋಪ ಕೋಟಿ ಕೋಟಿ ಹಣದ ಆರೋಪ ಮಾಡಿಕೊಳ್ಳುತ್ತಿದ್ದರೂ ತಾವುಗಳು ಇದಕ್ಕೂ ನಮಗೂ ಸಂಬಂಧವಿಲ್ಲ ನಮಗೆ ಬರುವ ನಮ್ಮ ಪಾಲು ಬಂದರೆ ಸಾಕೆಂದು ಮೌನವಾಗಿರುವುದಕ್ಕೆ ಕಾರಣವಾದರೂ ಏನು?  ವಸತಿ ಶಾಲೆಗಳಲ್ಲಿ ನಡೆಯುತ್ತಿರುವ ಹಗಲು ದರೋಡೆ ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೆ ಮಕ್ಕಳ ಭವಿಷ್ಯದ ಜೊತೆ ಚಲ್ಲಾಟವಾಡುತ್ತಿರುವ ಸಿಬ್ಬಂಧಿಯ ಬೇಜವಾಬ್ದಾರಿ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೆ ಇದು ಜಿಲ್ಲಾಧ್ಯಂತ ನೊಂದು ಬೆಂದಿರುವ ಪೋಷಕರ ಪ್ರಶ್ನೆಯಾಗಿದೆ.  ಮತ್ತೊಂದೆಡೆ ಟಿ.ವಿ ಮಾದ್ಯಮಗಳಲ್ಲಿ ಪ್ರಾಂಶುಪಾಲರ ವರ್ಗಾವಣೆ ಪ್ರಸಾರವಾಗಿ ಇಲಾಖೆಯ ಮಾನ ಹರಾಜಾಗುತ್ತಿದೆ ಹಾಗೂ ಸರ್ಕಾರದಿಂದ ಮಕ್ಕಳಿಗೆ ತಲುಪಬೇಕಾದ ಆಹಾರ ಪದಾರ್ಥಗಳಾದ ಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ಹಾಜರಾತಿಯಿಂದ ಹಿಡಿದು ಪೀಠೋಪಕರಣಗಳವರೆಗೂ ನಖಲಿ ದಾಖಲೆಗಳ ಸೃಷ್ಟಿ ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದ್ದರಿಂದ ಮಾನ್ಯ ಜಂಟಿ ನಿರ್ಧೇಶಕರು ಒಂದು ವಾರದೊಳಗೆ ವಸತಿ ಶಾಲೆಗಳಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಿ ಸೂಕ್ತವಾದ ಅಧಿಕಾರಿಗಳಿಂದ ತನಿಖೆ ನಡೆಸಿ ಬಡ ಮಕ್ಕಳಿಗೆ ಅನುಕೂಲವಾಗುವ ವಸತಿ ಶಾಲೆಗಳನ್ನು ಅಬಿವೃದ್ಧಿಪಡಿಸಿ   ಟಿಂಡರ್ ದಾರರ ವಿರುದ್ಧ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಕೆಲಸದಿಂದ ವಜಾ ಮಾಡದೇ ಹೋದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಧರಣಿಯಲ್ಲಿ ನಮಗೆ ನ್ಯಾಯ ಸಿಗುವವರೆಗೂ ಮಾಡಬೇಕಾಗುತ್ತದೆ ಎಂದು ರೈತ ಸಂಘದಿಂದ ಎಚ್ಚರಿಸಲಾಯಿತು.

ಜಂಟಿ ನಿರ್ದೇಶಕ ಜಯಣ್ಣರವರು ಮಾತನಾಡಿ ಸಂಬಂದಪಟ್ಟ ಅಧಿಕಾರಿಗಳು ಮತ್ತು ಪ್ರಾಂಶುಪಾಲರ ಸಭೆ ಕರೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಆಹಾರ ಸರಬರಾಜಿನಲ್ಲಾಗುತ್ತಿರುವ ಲೋಪದೋಶಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಈ ಹೋರಾಟದಲ್ಲಿ ಜಿಲ್ಲಾಧ್ಯಕ್ಷೆ ಎ.ನಳಿನಿ, ಕೆ. ಶ್ರೀನಿವಾಸಗೌಡ, ಮರಗಲ್ ಶ್ರೀನಿವಾಸ್  ಆನಂದಸಾಗರ್, ರಂಜೀತ್ ಕುಮಾರ್, ಎಂ.ಹೊಸಹಳ್ಳಿ ಚಂದ್ರಪ್ಪ, ಈಕಾಂಬಳ್ಳಿ ಮಂಜು, ಮೂರಾಂಡಹಳ್ಳಿ ಶಿವಾರೆಡ್ಡಿ, ಅಹಿಂದ ಮಂಜು, ಬಾಬು, ಬೂದಿಕೋಟೆ ಹರೀಶ್, ಪ್ರವೀಣ್, ಮುರುಳಿ, ಚರನ್, ವಿಜಯ್, ವೇಣು, ಕ್ಯಾಸಾಂಬಳ್ಳಿ ಪ್ರತಾಪ್, ಮದು, ಸುಪ್ರಿಮ್‍ಚಲ, ಶಿವು, ಸುರೇಶ್ ನಾರಾಯಣ, ಪುತ್ತೇರಿ ರಾಜು ಮುಂತಾದವರಿದ್ದರು.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...