ಶಾಹಿ ಎಕ್ಷ್‍ಪೋಟ್ಸ್ ಕಾರ್ಖಾನೆಯಲ್ಲಿ ಕಾರ್ಮಿಕರಿಂದ ಮತದಾನದ ಪ್ರತಿಜ್ಞೆ

Source: sonews | By Staff Correspondent | Published on 3rd April 2018, 12:42 AM | State News | Don't Miss |

ಕೋಲಾರ : ನಗರದ ಹೊರವಲಯದ ಕೆಂದಟ್ಟಿಯಲ್ಲಿರುವ ಶಾಹಿ ಎಕ್ಸ್‍ಪೋಟ್ರ್ಸ್ ಕಾರ್ಖಾನೆಯಲ್ಲಿ ಇಂದು ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 700 ಕ್ಕೂ ಹೆಚ್ಚು ಕಾಮಿರ್ಕರು ನೈತಿಕ ಹಾಗೂ ಕಡ್ಡಯ ಮತದಾನದ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಜಿಲ್ಲಾ ವ್ಯವಸ್ಥಿತ ಮತದಾರರ ಜಾಗೃತಿ ಹಾಗೂ ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿ ಹಾಗೂ ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಂದು ಶಾಹಿ ಎಕ್ಸ್‍ಪೋಟ್ರ್ಸ್ ಕಾರ್ಖಾನೆಯಲ್ಲಿ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾ ವಾರ್ತಾಧಿಕಾರಿ ಅಧಿಕಾರಿ ಪಲ್ಲವಿ ಹೊನ್ನಾಪುರ ಅವರು ಮಾತನಾಡಿ ಸಂವಿಧಾನವು ನಮ್ಮ ನಾಯಕರನ್ನು ಆಯ್ಕೆ ಮಾಡುವ ಹಕ್ಕನ್ನು ನಮಗೇ ನೀಡಿದೆ. ಅದನ್ನು ವ್ಯರ್ಥ ಮಾಡದೇ ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ಯಾವುದೇ ಆಮಿಷ, ಉಡುಗೊರೆಗಳಿಗೆ ಬಲಿಯಾಗದೇ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಸಲಹೆ ನೀಡಿದರು.

ಮೇ, 12, 2018ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರಾಮಣಿಕವಾಗಿ ಮತ ಚಲಾಯಿಸುವೆ, ಸೂಕ್ತವಾದ ಅಭ್ಯರ್ಥಿಯನ್ನೇ ಆಯ್ಕೆ ಮಾಡುವೆ. ಮೊದಲ ಬಾರಿಗೆ ಮತದಾನ ಮಾಡುತ್ತಿರುವುದು ನನಗೆ ಹೊಸ ಹುಮ್ಮಸ್ಸನ್ನು ನೀಡಿದೆ. ನಮ್ಮ ನಾಯಕರನ್ನು ಆಯ್ಕೆ ನಾನೇ ಮಾಡುವ ಬಗ್ಗೆ ಹರ್ಷವಾಗುತ್ತಿದೆ ಎಂದು ಮುಳಬಾಗಿಲಿನ ಜ್ಯೋತಿ ತಮ್ಮ ಅನಿಸಿಕೆ ಹಂಚಿಕೊಂಡರು. 

ಕಾರ್ಯಕ್ರಮದಲ್ಲಿ ಪಾಳ್ಗೊಂಡಿದ್ದ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆ ಅಧಿಕಾರಿ ರವಿಚಂದ್ರ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ  ಸಿ ಆರ್ ಮಂಜುನಾಥ್ ಅವರು ವಂದಿಸಿದರು. 
 
Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...