ಸ್ತ್ರೀ ಶಕ್ತಿ ಸಂಘಗಳ 1100 ಕೋಟಿ ರೂ. ಸಾಲ ಮನ್ನಾ ಕ್ಕೆ ಆಗ್ರಹ

Source: sonews | By Staff Correspondent | Published on 28th May 2018, 8:30 PM | State News | Don't Miss |

ಕೋಲಾರ: ರಾಜ್ಯದಲ್ಲಿನ ಸ್ತ್ರೀ ಶಕ್ತಿ ಸಂಘಗಳ 1100 ಕೋಟಿ ರೂ. ಸಾಲ ಮನ್ನಾ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿ ಮಾಜಿ ಸದಸ್ಯೆ ಕುರ್ಕಿ ರಾಜೇಶ್ವರಿ ಹಾಗೂ ಕೆಜಿಎಫ್ ಶಾಸಕಿ ರೂಪಕಲಾ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನ ಜೆಪಿ ನಗರದಲ್ಲಿನ ನಿವಾಸದಲ್ಲಿದ್ದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಸ್ತ್ರೀ ಶಕ್ತಿ ಸಂಘಗಳ ಪೈಕಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ಮೂಲಕ ಕೋಟ್ಯಾಂತರ ರೂಪಾಯಿ ಸಾಲವನ್ನು ಸ್ತ್ರೀ ಶಕ್ತಿ ಸಂಘಗಳಿಗೆ ವಿತರಣೆ ಮಾಡಿದ್ದನ್ನು ಗಮನಕ್ಕೆ ತಂದರು.

ಅದರಂತೆಯೇ ಮಹಿಳಾ ಸಂಘಗಳು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡುತ್ತಿದ್ದಾರೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿನ ಬಹುತೇಕ ಸ್ತ್ರೀಶಕ್ತಿ ಸಂಘಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಲವನ್ನು ಪಡೆದುಕೊಂಡಿದ್ದಾರೆ.  ಎಲ್ಲಿಯೂ ಸಾಲವನ್ನು ದುರುಪಯೋಗ ಪಡಿಸಿಕೊಂಡಿಲ್ಲ, ರಾಜ್ಯದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ನಂಬರ್ ಸ್ಥಾನದಲ್ಲಿದೆ ಎಂದು ಮನವರಿಕೆ ಮಾಡಿಕೊಟ್ಟರು.

ರಾಜ್ಯದಲ್ಲಿರುವ 1100 ಕೋಟಿ ರೂಪಾಯಗಳ ಸಾಲವನ್ನು ಮನ್ನಾ ಮಾಡಿದರೆ ಎಷ್ಟೋ ಬಡ ಕುಟುಂಬಗಳು ನಿಮ್ಮ ಋಣದಲ್ಲಿರುತ್ತಾರೆ ಎಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವ್ರು ಚುನಾವಣೆಯ ಸಂದರ್ಭದಲ್ಲಿ ನಾನು ರೈತರ-ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನ ಮಾಡೋದಾಗಿ ಹೇಳಿದ್ದೇ. ಆದರೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೂ ಕೂಡ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡೋದಾಗಿ ಹೇಳಿದರು.

ಈ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು, ಅಲ್ಲದೆ ಪೂರ್ಣ ಪ್ರಮಾಣದಲ್ಲಿ ಸಾಲವನ್ನು ಕಟ್ಟಿರುವ ಮಹಿಳಾ ಸಂಘಗಳಿಗೆ  ಹೆಚ್ಚಿಗೆ ಸಾಲ ಕೊಡುವುದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಮಹಿಳಾ ಸಂಘಗಳಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ನೀಡರುವ ಸಾಲದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅಲ್ಲದೆ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರ ಶ್ರಮವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ನರಸಾಪುರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರೀಶ್‍ಗೌಡ, ಯುವ ಮುಖಂಡ ಶ್ರೀಕಾಂತ್‍ಗೌಡ ಹಾಜರಿದ್ದರು.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...