ಕೋಲಾರ: ಟೊಮೊಟೋ ಮಾರುಕಟ್ಟೆಗೆ ಸ್ಥಳ ಒದಗಿಸುವಂತೆ ಆಗ್ರಹಿಸಿ ರೈತಸಂಘದಿಂದ ವಿನೂತನ ಪ್ರತಿಭಟನೆ

Source: sonews | By Staff Correspondent | Published on 26th February 2018, 11:19 PM | State News | Don't Miss |

ಕೋಲಾರ: ದೇಶದಲ್ಲೇ ಅತಿ ಹೆಚ್ಚು ತರಕಾರಿ ಮತ್ತು ಟೊಮೋಟೋ ಬರುವ ಮಾರುಕಟ್ಟೆಗೆ ಜಾಗದ ಕೊರತೆಯಿರುವುದರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿ ಮಾರುಕಟ್ಟೆಗೆ ಸೂಕ್ತವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ರೈತರಿಗೆ ಅನುಕೂಲ ಮಾಡಿ ಮಾರುಕಟ್ಟೆಯನ್ನು ಅಭಿವೃದ್ದಿ ಮಾಡಬೇಕೆಂದು ರೈತಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಟೋಮೋಟೋ ಬಾಕ್ಸ್‍ಗಳನ್ನು ಇಟ್ಟು ಹೋರಾಟ ಮಾಡುವ ಮೂಲಕ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಲಾಯಿತು.

ರಾಜ್ಯ ಉಪಾದ್ಯಕ್ಷ ಕೆ,ನಾರಾಯಣಗೌಡ ಮಾತನಾಡಿ ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಮಾರುಕಟ್ಟೆ ಎಂಬ ಹೇಸರಾಗಿರುವ ಕೋಲಾರ ಜಿಲ್ಲೆಯ ಮಾರುಕಟ್ಟೆಯಲ್ಲಿ ಅತ್ಯಾಧಿಕವಾಗಿ ತರಕಾರಿಗಳು ಬರುವುದರಿಂದ ಜಾಗದ ಕೊರತೆಯಿಂದ ಟೊಮೋಟೋ ಬೆಳೆಗಾರರಿಗೆ ಹಾಗೂ ಖರೀದಿದಾರರಿಗೆ ತುಂಬಾ ತೊಂದರೆಯಾಗುತ್ತಿದೆ. ಅತಿ ಹೆಚ್ಚು ವಾಣಿಜ್ಯ ಬೆಳೆಗಳನ್ನು ಬೆಳೆಯುವ ಕೋಲಾರ  ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮೋಟೋ ಪ್ರಮುಖ ಬೆಳೆಯಾಗಿರುವುದರಿಂದ ಅತಿ ಹೆಚ್ಚಾಗಿ ಅಂದರೆ ಶೇ,95ರಷ್ಟು ಟೊಮೋಟೋ ಬೆಳೆ ಬೆಳೆದು ದೇಶ ಮತ್ತು ಹೊರದೇಶಕ್ಕೆ ರಪ್ತು ಮಾಡುವ ಮಾರುಕಟ್ಟೆಯಾಗಿದೆ. ಮಾರ್ಚ್‍ಯಿಂದ ಸಪ್ಟೆಂಬರ್‍ವರೆಗೂ ಪ್ರತಿನಿತ್ಯ ನೂರಾರು ವಾಹನಗಳ ಸಂಚಾರ ದಟ್ಟವಾಗಿರುತ್ತದೆ. ಅದರ ಜೊತೆಗೆ ಇನ್ನಿತರ ಹತ್ತಾರು ತರಕಾರಿಗಳೂ ಪ್ರತಿ ನಿತ್ಯ ಲೋಡ್‍ಗಟ್ಟಲೇ ಮಾರುಕಟ್ಟೆಗ ಬರುವುದರಿಂದ ಜಾಗದ ಸಮಸ್ಯೆಯಿಂದ ತರಕಾರಿ ಮತ್ತು ಟೊಮೋಟೊ ಮಂಡಿ ಮಾಲೀಕರಿಗೆ ಹಾಗೂ ರೈತರಿಗೆ ವ್ಯಾಪರಸ್ಥರಿಗೆ ಪ್ರತಿನಿತ್ಯ ಜಗ¼ವಾಡುವಂತಾಗಿ ರೈತರಿಂದ ರಾಷ್ಟ್ರೀಯ ಹೆದ್ದಾರಿಯೂ 3-4 ಬಾರಿ ಬಂದ್ ಸಹ ನಡೆದಿದೆ ಎಂದು ದೂರಿದರು.

ಕಳೆದ ವರ್ಷ ಅವಕ ಹೆಚ್ಚಾಗಿದ್ದರಿಂದ ಸ್ಥಳದ ಸಮಸ್ಯೆ ಮತ್ತು ವಾಹನಗಳಿಗೆ ರಸ್ತೆಯಲ್ಲೇ ನಿಲ್ಲಿಸಿ  ಟೊಮೋಟೊ ಲೋಡ್ ಮಾಡುವುದರಿಂದ ಮದ್ಯಾನ ಮಾರುಕಟ್ಟೆಗೆ ಬರುವ ತರಕಾರಿ ಜಾಗದ ಸಮಸ್ಯೆಯಿಂದ ಸರಿಯಾದ ಬೆಲೆ ಸಿಗದೆ ರೈತರು ತಮ್ಮ ತರಕಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಸುರಿದು ಪ್ರತಿಭಟನೆ ಮಾಡಿ ಲಾಟಿ ಚಾರ್ಜ ಸಹ ನಡೆದಿದ್ದರೂ ಜಿಲ್ಲಾqಳಿತ ಸೂಕ್ತ ಜಾಗದ ವ್ಯವಸ್ಥೆ ಮಾಡದೇ ಕಾಲಹರಣ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ ಮಾತನಾಡಿ   ಹಿಂದಿನ ಜಿಲ್ಲಾಧಿಕಾರಿಯಾದ ತ್ರೀಲೋಕ್‍ಚಂದ್ರರವರು ಮಾರುಕಟ್ಟೆಗೆ ಬೇಟಿ ನೀಡಿ ದಲ್ಲಾಳರೂ, ರೈತರು, ಅಧಿಕಾರಿಗಳ ಸಭೆಗಳನ್ನು ನಡೆಸಿ,  6 ತಿಂಗಳಲ್ಲಿ ಟೊಮೋಟೋ ಮಾರುಕಟ್ಟೆಗೆ ಪರ್ಯಾಯ ಜಾಗ ಮಾಡುತ್ತೇವೆಂದು ಆ ಜವಬ್ದಾರಿಯನ್ನು ತಹಶೀಲ್ದಾರ್ ವಿಜಿಯಣ್ಣನವರಿಗೆ ವಹಿಸಿ ವರ್ಷ ಕಳೆದರು ಜಾಗವೂ ಇಲ್ಲ ಅದರ ಬಗ್ಗೆ ಪ್ರಸ್ತಾವನೆಯೂ ಇಲ್ಲದಾಗಿದೆ, ನೆಪಮಾತ್ರಕ್ಕೆ ವಕ್ಕಲೇರಿ ಬಳಿ 40 ಎಕರೆ ಜಮೀನನ್ನು ಗುರುತಿಸಿದ್ದೇವೆಂದು ಹೇಳಿದ ಮಾತೇ ಹೊರತು ಇದುವರೆಗೂ ಮಾರುಕಟ್ಟೆಯ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ರೀತಿ ರೈತನಿಗೆ ಅನುಕೂಲವಾಗುವ ಕೆಲಸವನ್ನೇ ಮಾಡಿಕೊಡದೇ ಇದ್ದರೇ ರೈತರ ಪರಿಸ್ಥಿತಿ ಏನು ಎಂಬುದು ಜಿಲ್ಲಾಡಳಿತಕ್ಕೆ ರೈತರ ಪ್ರಶ್ನೆಯಾಗಿದೆ. ಜಿಲ್ಲಾಡಳಿತ ಸೂಕ್ತ ಜಾಗವನ್ನು ಗುರುತಿಸಿ ತರಕಾರಿ ಮತ್ತು ಟೊಮೋಟೋ ಜಾಗವನ್ನು ಬೇರೆ ಬೇರೆ ಮಾಡದೇ ಹೋದರೆ ಮಾರುಕಟ್ಟೆ ಪಕ್ಕದ ಆಂದ್ರ ರಾಜ್ಯಕ್ಕೆ ವರ್ಗಾವಣೆಯಾಗುವ ಬೀತಿಯೂ ಎದ್ದು ಕಾಣುತ್ತಿದೆ ಎಂದು ಜಿಲ್ಲಾಡತದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿದರು.

ಮಾರುಕಟ್ಟೆ ಸ್ಥಳವಕಾಶ ನೀಡದೇ ಇದ್ದರೇ ಇದರ ಲಾಭ ಪಡೆಯಲು ಪಕ್ಕದ ರಾಜ್ಯದವರು ಜಿಲ್ಲೆಯ ತರಕಾರಿ ಬೆಳೆಗಾರರಿಗೆ ಗುಣಮಟ್ಟದ ಮಾರುಕಟ್ಟೆ ಕಲ್ಪಿಸಲು ಮುಂದಾಗುತ್ತಿದ್ದು, ಇದು ನಡೆದರೆ ಸರ್ಕಾರಕ್ಕೆ ಬರುವ ಕೋಟ್ಯಾಂತರ ರೂಪಾಯಿ ಆದಾಯ ಕೈತಪ್ಪುತ್ತದೆ. ಹಾಗೂ ಜಿಲ್ಲೆಯ ರೈತರಿಗೆ ಸಾಗಾಣಿಕೆ ಮತ್ತು ಮಾರುಕಟ್ಟೆ ದುಬಾರಿಯಾಗಿ ಪರಿಗಣಿಸುತ್ತದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಟೊಮೋಟೋ ಅವಕ ಹೆಚ್ಚಾಗುವ ಸಾದ್ಯತೆಯಿದ್ದು, ಕೂಡಲೇ ಮಾರುಕಟ್ಟೆಗೆ ಬೇಟಿ ನೀಡಿ ಸಂಬಂದಪಟ್ಟ ಅಧಿಕಾರಿಗಳನ್ನು ಸಭೆ ಕರೆದು ಟೊಮೋಟೋ ಮಾರುಕಟ್ಟೆಗೆ 50 ಎಕರೆ ಜಮೀನನ್ನು ಮಂಜೂರು ಮಾಡಿಕೊಟ್ಟು ಮುಂದೆ ಆಗುವ ಮಾರುಕಟ್ಟೆಯಲ್ಲಿನ ಅನಾಹುತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಲಾಯಿತು. 

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಮಾರುಕಟ್ಟೆ ಜಾಗದ ಬಗ್ಗೆ ವಕ್ಕಲೇರಿ ಹೋಬಳಿಯಲ್ಲಿ ಸ್ಥಳಾವಕಾಶ ಕೊರತೆ ಇದ್ದು, ಈಗಾಗಲೇ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಮೂರು ತಿಂಗಳ ಒಳಗೆ ಸುಸಜ್ಜಿತವಾದ ಜಾಗವನ್ನು ಮಾರುಕಟ್ಟೆಗೆ ಕಲ್ಪಿಸಿ ಮಾರುಕಟ್ಟೆಯ ತೊಂದರೆಗಳನ್ನು ನಿವಾರಿಸುತ್ತೇವೆಂದು ಭರವಸೆ ನೀಡಿದರು.

ಈ ಹೋರಾಟದಲ್ಲಿ ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್, ಮಹಿಳಾ ಘಟಕ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ರಂಜಿತ್‍ಕುಮಾರ್, ವಕ್ಕಲೇರಿ ಹನುಮಯ್ಯ,  ಸುಪ್ರೀಂಚಲ, ಶಿವು, ಸುರೇಶ್, ಅಂಬ್ಲಿಕಲ್ ಮಾಂಜು, ಬಾಲು, ಎಂ.ಹೊಸಹಳ್ಳಿ ಚಂದ್ರಪ್ಪ, ರಮೇಶ್, ಕೆಂಬೋಡಿ ಕೃಷ್ಣೇಗೌಡ, ಈಕಂಬಳ್ಳಿ ಮಂಜುನಾಥ್, ಕ್ಯಾಸಾಂಬಳ್ಳಿ ಪ್ರತಾಫ್, ಪುತ್ತೇರಿ ರಾಜು,  ಪುರುಷೋತ್ತಮ್, ಮುಂತಾದವರಿದ್ದರು.
   


 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...