ಆಗ್ನೇಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಗಳ ತಯಾರಿಕೆ ಕುರಿತ ಅರ್ಹತಾ ದಿನಾಂಕ ಪ್ರಕಟ

Source: sonews | By Staff Correspondent | Published on 12th December 2017, 11:34 PM | State News | Don't Miss |

ಕೋಲಾರ:  ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಸದಸ್ಯ ಸ್ಥಾನವು ದಿ. 21/6/2018ಕ್ಕೆ ತೆರವಾಗಲಿದ್ದು, 2018ನೇ ಸಾಲಿನಲ್ಲಿ ದ್ವೈವಾರ್ಷಿಕ ಚುನಾವಣೆಗಾಗಿ ಹೊಸದಾಗಿ ಮತದಾರರ ಪಟ್ಟಿಯನ್ನು ದಿನಾಂಕ : 1/11/2017ನ್ನು ಅರ್ಹತಾ ದಿನಾಂಕವನ್ನಾಗಿರಿಸಿಕೊಂಡು ತಯಾರಿಸುವ ಹಿನ್ನೆಲೆಯಲ್ಲಿ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳನ್ನು ಹೊಸದಾಗಿ ತಯಾರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ದಿನಾಂಕ : 28/9/2017 ರಿಂದ ದಿನಾಂಕ : 07/11/2017 ರವರೆಗೆ ಸ್ವೀಕೃತವಾದ ಅರ್ಜಿಗಳನ್ನು ಇತ್ಯರ್ಥಪಡಿಸಿ, ಮಾನ್ಯ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ ರವರು ದಿನಾಂಕ : 21/11/2017 ರಂದು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಗಳನ್ನು ಪ್ರಕಟಿಸಿರುತ್ತಾರೆ.  ಸದರಿ ಕರಡು ಮತದಾರರ ಪಟ್ಟಿಗಳು ಜಿಲ್ಲೆಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಲಭ್ಯವಿರುತ್ತದೆ.  

ಈ ಕಾರ್ಯಕ್ರಮದನ್ವಯ ದಿನಾಂಕ : 21/11/2017 ರಿಂದ ದಿನಾಂಕ : 21/12/2017 ರವರೆಗೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸ್ವೀಕರಿಸುವ ಅವಧಿಯಾಗಿದ್ದು, ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆಗೊಳಿಸಲು ವಿಫಲರಾದ ಅರ್ಹ ವ್ಯಕ್ತಿಗಳು ಅಂದರೆ, ಪ್ರೌಢಶಾಲೆ ಮಟ್ಟಕ್ಕೆ ಕಡಿಮೆ ಇಲ್ಲದ ತರಗತಿ: ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ 1/11/2017 ಕ್ಕಿಂತ ಹಿಂದಿನ 6 ವóರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷಗಳು ಬೋಧನಾ ವೃತ್ತಿಯಲ್ಲಿ ತೊಡಗಿರುವವರು ಮತ್ತು ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರುವವರು ತಮ್ಮ ಅರ್ಜಿಯನ್ನು ತಾವು ಸಾಮಾನ್ಯ ನಿವಾಸಿಯಾಗಿರುವಂತಹ ಕ್ಷೇತ್ರದ ತಹಶೀಲ್ದಾರ್/ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಅಥವಾ ನಿರ್ಧಿಷ್ಠಾಧಿಕಾರಿಗಳಿಗೆ ನಿಗಧಿತ ನಮೂನೆ-19 ರಲ್ಲಿ ಸೂಕ್ತ ದಾಖಲೆಗಳೊಂದಿಗೆ ತಾವಾಗಲೀ ಅಥವಾ ತಮ್ಮ ಸಂಸ್ಥೆಯ ಮುಖ್ಯಸ್ಥರ ಮೂಲಕವಾಗಲೀ ಸಲ್ಲಿಸಬಹುದಾಗಿರುತ್ತದೆ. 
ಕರಡು ಮತದಾರರ ಪಟ್ಟಿಗಳಲ್ಲಿ ಈಗಾಗಲೇ ನಮೂದಿಸಲಾಗಿರುವ ಮತದಾರರ ಮಾಹಿತಿಯಲ್ಲಿ ತಿದ್ದುಪಡಿ ಅವಶ್ಯಕವಿದ್ದಲ್ಲಿ ತಿದ್ದುಪಡಿಗಾಗಿ ಅರ್ಜಿಯನ್ನು ಮತ್ತು ಆಕ್ಷೇಪಣೆ ಇದ್ದಲ್ಲಿ ಆಕ್ಷೇಪಣೆಯನ್ನೂ ಸಹ ದಿನಾಂಕ : 21/12/2017 ರೊಳಗಾಗಿ ನೀಡಬಹುದಾಗಿರುತ್ತದೆ.  ಹಾಗೂ ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದರೂ ಸಹ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ನಮೂದಾಗದಿದ್ದಲ್ಲಿ ಅಂತಹ ವ್ಯಕ್ತಿಗಳು ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ, ಮತ್ತೊಮ್ಮೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
ಈ ಸಂಬಂದ ರಾಜಕೀಯ ಪಕ್ಷಗಳು ಸಹಕರಿಸಲು ಹಾಗೂ ಅರ್ಹ ಮತದಾರರುಗಳಾದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪ್ರಾಂಶುಪಾಲರುಗಳು ಮತ್ತು ಶಿಕ್ಷಕರು/ಉಪನ್ಯಾಸಕರು/ಪ್ರಾಧ್ಯಾಪಕರುಗಳು ಹಾಗೂ ಬೋಧನಾ ವೃತ್ತಿಯಲ್ಲಿ ತೊಡಗಿರುವ ಇತರರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ.  ಈ ಹಿಂದೆ ನಿರ್ವಹಿಸಲಾದ ಉಪ ಚುನಾವಣೆಯ ಮತದಾರರ ಪಟ್ಟಿಯನ್ನು ಮುಂದೆ ನಿರ್ವಹಿಸಲಾಗುವ ದ್ವೈವಾರ್ಷಿಕ ಚುನಾವಣೆಗೆ ಬಳಸಲಾಗುವುದಿಲ್ಲವಾದ್ದರಿಂದ, ಹೊಸದಾಗಿ ಅರ್ಜಿಗಳನ್ನು ನೋಂದಣಿಗಾಗಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...