ಹೋಂಡಾ ಮೋಟಾರ್ಸ್ ಅಂಡ್ ಸ್ಕೂಟರ್ ಇಂಡಿಯಾ ವತಿಯಿಂದ ಬ್ಯಾಗ್ ಮತ್ತು ಲೇಖನ ಸಾಮಗ್ರಿ ವಿತರಣೆ

Source: sonews | By sub editor | Published on 7th July 2018, 12:14 AM | State News | Don't Miss |

ಕೋಲಾರ: ತಾಲೂಕಿನ ನರಸಾಪುರ ಹೋಬಳಿಯ ಕೆ.ಬಿ ಹೊಸಹಳ್ಳಿ ಗ್ರಾಮದ ಉನ್ನತ್ತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹೋಂಡಾ ಮೋಟಾರ್ಸ್ ಅಂಡ್ ಸ್ಕೂಟರ್ ಇಂಡಿಯಾ ಪ್ರೈವೇಟ್ ಲಿಮಿಡೆಟ್ ವತಿಯಿಂದ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿದರು.

ಕಂಪನಿಯ ಅಡ್ವೈಜರ್ ಕೊಬಾಯಿಶಿ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡುತ್ತಾ ಕಂಪನಿಯು ನೀಡುವಂತಹ ಸವಲತ್ತುಗಳನ್ನು ಸದುಯೋಗಪಡಿಸಿಕೊಂಡು ಒಳ್ಳೆಯ ಶಿಕ್ಷಣವನ್ನು ಪಡೆದು ಗುರುಗಳಿಗೆ ಮತ್ತು ತಂದೆ ತಾಯಿಗಳಿಗೆ ಒಳ್ಳೆಯ ಹೆಸರನ್ನು ತಂದುಕೊಡಬೇಕೆಂದು ಕರೆ ನೀಡಿದರು.

ಕಂಪನಿಯ ಸೀನಿಯರ್ ಮ್ಯಾನೇಜರ್ ಜಯಂತ್‍ಶೆಟ್ಟಿ ಮಾತನಾಡಿ ಕಂಪನಿಯು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ಸವಲತ್ತುಗಳನ್ನು ನೀಡುತ್ತಾ ಬಂದಿದ್ದು, ಮುಂದೆಯೂ ಸಹ ನೀಡುವುದಾಗಿ ತಿಳಿಸಿದರು.
    
ಎಸ್.ಡಿ.ಎಂ.ಸಿ ಅಧ್ಯಕ್ಷ ಅರುಣ್‍ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಶಾಲೆಯು ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಂಪನಿಗೆ ಧನ್ಯವಾದಗಳನ್ನು ತಿಳಿಸಿದರು.
    
ಮುಖ್ಯ ಶಿಕ್ಷಕ ಆನಂದ್‍ಕುಮಾರ್, ಸಹ ಶಿಕ್ಷಕ ಚಂದ್ರ ಮಾತನಾಡುತ್ತಾ ನಮ್ಮ ಶಾಲೆಯಲ್ಲಿ 1 ರಿಂದ 8ನೇ ತರಗತಿಯವರೆಗೆ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು, ತರಗತಿ ನಡೆಸಲು ಕೊಠಡಿಗಳ ಕೊರತೆ ಇರುವುದರಿಂದ ತಾವು ಸಿ.ಎಸ್.ಆರ್ ಯೋಜನೆಯಡಿಯಲ್ಲಿ ತರಗತಿ ಕೊಠಡಿ ಮತ್ತು ಶೌಚಾಲಯ ನಿರ್ಮಿಸಿಕೊಡಬೇಕೆಂದು ಕೋರಿದರು.
    
ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿಗಳಾದ ಶ್ರೀಹರಿ, ವಿನೋದ್, ಸಂತೋಷ್, ಮ್ಯಾನೇಜ್‍ಮೆಂಟ್ ಟೀಂನ ಸದಸ್ಯರು, ಶಿಕ್ಷಕ ರಮೇಶ್, ಸಹ ಶಿಕ್ಷಕಿಯರಾದ ಸಂಧ್ಯಾರಾಣಿ, ಛಾಯಾ, ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.


 

Read These Next

ಭ್ರಷ್ಟಾಚಾರ ನಿರ್ಮೂಲನೆಗೆ ನಾಗರಿಕರು ಸಹಕರಿಸಬೇಕು- ಪ್ರಧಾನ ಸಿವಿಲ್‌ ನ್ಯಾಯಾಧೀಶ ಮಹಮದ್‌ ರೋಷನ್‌ ಷಾ

ಶ್ರೀನಿವಾಸಪುರ: ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ನಾಗರಿಕರು ಸಹಕರಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್‌ ...

ಭ್ರಷ್ಟಾಚಾರ ನಿರ್ಮೂಲನೆಗೆ ನಾಗರಿಕರು ಸಹಕರಿಸಬೇಕು- ಪ್ರಧಾನ ಸಿವಿಲ್‌ ನ್ಯಾಯಾಧೀಶ ಮಹಮದ್‌ ರೋಷನ್‌ ಷಾ

ಶ್ರೀನಿವಾಸಪುರ: ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ನಾಗರಿಕರು ಸಹಕರಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್‌ ...

ಪಿ.ಯು.ಕಾಲೇಜ್ ಸಹಪಠ್ಯ ಚಟುವಟಿಕೆ; ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಶಿಹಾಬುದ್ದೀನ್ ಪ್ರಥಮ

ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ...