ಕೋಲಾರ:ಜಿಲ್ಲಾ ಯುವ ಸಲಹಾ ಸಮಿತಿಗೆ ಕೆ.ಎಸ್.ನಾಗವೇಣಿ ಆಯ್ಕೆ 

Source: shabbir | By Arshad Koppa | Published on 28th May 2017, 3:53 PM | State News |

ಕೋಲಾರ, ಮೇ 27:    ಜಿಲ್ಲೆಯ ನೆಹರು ಯುವಕೇಂದ್ರದ ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿಗೆ ಸೋಮೇನಹಳ್ಳಿಯ ಕೆ.ಎಸ್.ನಾಗವೇಣ  ಅವರನ್ನು ಆಯ್ಕೆ ಮಾಡಲಾಗಿದೆ.     
    ಜಿಲ್ಲಾ ನೆಹರು ಯುವ ಕೇಂದ್ರದ ಜಿಲ್ಲಾ ಸಲಹಾ ಸಮಿತಿ ಅಧಿಕಾರೇತರ ಸದಸ್ಯರಾಗಿ ಒಂದು ವರ್ಷಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ನಾಮ ನಿರ್ದೇಶನ ಮಾಡಿದ್ದಾರೆ.
    ಯುವ ಕೇಂದ್ರದ ಕಾರ್ಯಕ್ರಮಗಳು ಹಾಗೂ ಎಲ್ಲಾ ಯುವ ಚಟುವಟಿಕೆಗಳಿಗೆ ಪೂರ್ಣ ಸಹಕಾರ ಸಲಹೆಗಳನ್ನು ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು ಇದಕ್ಕೆ ನಾಗವೇಣ  ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಜಿ.ಇ.ನಾರಾಯಣಗೌಡ ಅವರು ತಿಳಿಸಿದ್ದಾರೆ. 
 
ಮೇ.29 ರಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷರು ಕೋಲಾರಕ್ಕೆ ಆಗಮನ
    ಜಿಲ್ಲೆಯ ಸುಗಟೂರು ಹೋಬಳಿ ವ್ಯಾಪ್ತಿಗೆ ಬರುವ ಬೈಯ್ಯಪ್ಪನಹಳ್ಳಿ ಗ್ರಾಮವನ್ನು ರೈತರ ಆದಾಯ ಕಲ್ಯಾಣ ವೃದ್ಧಿ ಕಾರ್ಯ ಯೋಜನೆಗೆ ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿದೆ. 
    ಈ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಟಿ.ಎನ್. ಪ್ರಕಾಶ್ ಕಮ್ಮರಡಿಯವರು ಮೇ.29 ರಂದು ಮಧ್ಯಾಹ್ನ 12 ಗಂಟೆಗೆ ಕೋಲಾರ ಜಿಲ್ಲೆಗೆ ಬೇಟಿ ನೀಡುವರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಕುರಿತು ಸಭೆ ನಡೆಸುವರು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...