ಸಿಗಂದೂರು-ಜೋಗ-ಶಿವನಸಮುದ್ರಗಳಿಗೆ ಕೆಎಸ್‍ಟಿಡಿಸಿ ಸ್ಪೆಷಲ್ ಪ್ಯಾಕೆಜ್

Source: so news | By Manju Naik | Published on 17th June 2018, 12:37 PM | State News |

ಬೆಂಗಳೂರು,ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಮಳೆಗಾಲದ ವೈಭವವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರವಾಸಿಗರಿಗೆ ಸಿಗಂದೂರು-ಜೋಗ -ಶಿವನಸಮುದ್ರ ಹಾಗೂ ತಲಕಾಡಿಗೆ ವಿಶೇಷ ಪ್ರವಾಸವನ್ನು ಆಯೋಜಿಸಿದೆ. ಸಿಗಂದೂರು-ಜೋಗ ಜಲಪಾತ ಪ್ರವಾಸ ಎರಡು ದಿನವಾಗಿದ್ದು , ನಿಗಮದ ಬಸ್‍ನಲ್ಲಿ ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮುಂಜಾನೆ ಸಾಗರಕ್ಕೆ ತಲುಪಿ ನಂತರ ಸಿಗಂದೂರಿಗೆ ಕರೆದೊಯ್ದು ಶ್ರೀ ಚೌಡೇಶ್ವರಿ ದೇವಿಯ ದರ್ಶನ ವ್ಯವಸ್ಥೆ ಮಾಡಲಾಗಿದೆ.

ನಂತರ ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಯಲ್ಲದೆ ಶರಾವತಿ ಸಾಹಸ ಶಿಬಿರಕ್ಕೂ ಭೇಟಿ ನೀಡಿ ಅಲ್ಲಿ ವಿವಿಧ ಚಟುವಟಿಕೆಗಳಲ್ಲಿ ಪ್ರವಾಸಿಗರು ಪಾಲ್ಗೊಳ್ಳಬಹುದಾಗಿದೆ.ಇದಕ್ಕೆ ಪ್ರವಾಸ ದರ 2150 ರೂ. ವೆಚ್ಚವಿರುತ್ತದೆ. ಪ್ರತಿ ಶುಕ್ರವಾರ ಮತ್ತು ಶನಿವಾರ ಈ ಪ್ರವಾಸವಿರುತ್ತದೆ. ಇದಲ್ಲದೆ ಶಿವನಸಮುದ್ರ ಮತ್ತು ತಲಕಾಡಿಗೆ ಯಶವಂತಪುರ ಟಿಟಿಎಂಸಿಯಿಂದ ಬಸ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಹೊರಟು 11 ಗಂಟೆಗೆ ಶಿವನಸಮುದ್ರ , ಗಗನಚುಕ್ಕಿ , ಭರಚುಕ್ಕಿ ಜಲಪಾತ ವೀಕ್ಷಣೆ ಮಧ್ಯರಂಗ ದರ್ಶನ ನಂತರ ತಲಕಾಡು ಮತ್ತು ವೈದ್ಯನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಅದೇ ದಿನ ರಾತ್ರಿ 9 ಗಂಟೆಗೆ ಬೆಂಗಳೂರು ತಲುಪಲಿದೆ. ಇದಕ್ಕೆ 800 ರೂ.ಗಳನ್ನು ನಿಗದಿಪಡಿಸಲಾಗಿದೆ. ಇದಕ್ಕೆ ಪ್ರತಿ ಶನಿವಾರ ಮತ್ತು ಭಾನುವಾರ ಆಯೋಜಿಸಲಾಗುತ್ತದೆ. ಹೆಚ್ಚಿನ ವಿವರಗಳಿಗೆ www.kstdc.co, ಮೊಬೈಲ್ 8970650070 ಸಂಪರ್ಕಿಸಬಹುದು.

Read These Next

ದಿನ ನಿತ್ಯದ ಅಗತ್ಯ ವಸ್ತುಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವಂತೆ ಆಗ್ರಹಿಸಿ ರೈತಸಂಘದಿಂದ ಪ್ರತಿಭಟನೆ

ಕೋಲಾರ: ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ವಸ್ತುಗಳಾದ ಡೀಜಲ್, ಪೆಟ್ರೋಲ್, ಗ್ಯಾಸ್‍ನ್ನು ಜಿ.ಎಸ್.ಟಿ ವ್ಯಾಪ್ತಿಗೆ ತರಬೇಕೆಂದು ...

ಅಜರ್‍ಬೈಜಾನ್ ಜೊತೆಗಿನ ದ್ವಿಪಕ್ಷೀಯ ಸಂಬಂಧವನ್ನು ಭಾರತ ಗೌರವಿಸುತ್ತದೆ - ಮುನಿಯಪ್ಪ

ಕೋಲಾರ:  ಭಾರತ ಮತ್ತು ಅಜರ್‍ಬೈಜಾನ್ ನಮ್ಮ ಐತಿಹಾಸಿಕ ಸಂಬಂಧಗಳು ಮತ್ತು ಹಂಚಿಕೆ ಸಂಪ್ರದಾಯಗಳ ಆಧಾರದ ಮೇಲೆ ನಿಕಟ ಮತ್ತು ಸೌಹಾರ್ದಯುತ ...

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...