ಜಿಲ್ಲಾದ್ಯಂತ ನಾಳೆಯಿಂದ ಮೂರು ದಿನ ಸಭೆ, ಸಮಾರಂಭ, ಮೆರವಣಿಗೆ ನಿಷೇಧ: ಜಿಲ್ಲಾಧಿಕಾರಿ

Source: sonews | By Staff Correspondent | Published on 11th December 2017, 6:30 PM | Coastal News | State News | Don't Miss |

ಕಾರವಾರ;  ೧೨ರಿಂದ ೧೪ರವರೆಗೆ ಮೂರು ದಿನಗಳು ಉತ್ತರ ಕನ್ನಡ ಜಿಲ್ಲಾದ್ಯಂತ ಯಾವುದೇ ಸಭೆ, ಸಮಾರಂಭ, ಮೆರವಣಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದುವೆ, ಮುಂಜಿ, ಇತ್ಯಾದಿ ವೈಯಕ್ತಿಕ ಕಾರ್ಯಕ್ರಮ ಹೊರತುಪಡಿಸಿ ಉತ್ತರ ಕನ್ನಡ ಜಿಲ್ಲಾದ್ಯಂತ ೧೧ ತಾಲೂಕುಗಳಲ್ಲಿ ಯಾವುದೇ ಸಭೆ, ಸಮಾರಂಭ, ಮೆರವಣಿಗೆಗಳು, ಬೈಕ್ ರ‍್ಯಾಲಿಗಳನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ಪೊಲೀಸ್ ಕಾಯ್ದೆ ೧೯೫೩ ಕಲಂ ೩೫ರಡಿಯಲ್ಲಿ ಜಿಲ್ಲಾ ದಂಡಾಧಿಕಾರಿಗಳಿಗೆ ಪ್ರದತ್ತವಾದ ಅಧಿಕಾರ ಬಳಿಸಿ ನಿಷೇಧಾಜ್ಞೆ ಆದೇಶಿಸಲಾಗುತ್ತಿದ್ದು, ಅದೇಶ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...