ಕಾರು ಬೈಕ್ ಅಪಘಾತ; ಬೆಂಕಿಗಾಹುತಿಯಾದ ಬೈಕ್ ; ಸವಾರ ಮೃತ್ಯು

Source: sonews | By Staff Correspondent | Published on 20th May 2018, 10:16 PM | Coastal News | State News | Don't Miss |

ಗಂಗೊಳ್ಳಿ: ಕಾರು ಹಾಗೂ ಬೈಕ್ ಮಧ್ಯೆ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ಸಂಜೆ 7:30ರ ಸುಮಾರಿಗೆ ಸಂಭವಿಸಿದ ಅಪಘಾತ ದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಬೈಕ್ ಬೆಂಕಿಯಿಂದ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಬೈಂದೂರು ಸಮೀಪದ ತಗ್ಗರ್ಸೆಯ ಪುನಿತ್ ಪೂಜಾರಿ (22) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಆಕಾಶ್ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಬೆಂಗಳೂರು ಮೂಲದ ವೈದ್ಯರದ್ದಾಗಿದ್ದು, ಅದರಲ್ಲಿದ್ದವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕುಂದಾಪುರ ಕಡೆಯಿಂದ ಬೈಂದೂರು ಕಡೆ ಹೋಗುತ್ತಿದ್ದ ಬೈಕ್‌ಗೆ ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್‌ನಲ್ಲಿದ್ದವರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡ ಸವಾರ ಪುನಿತ್ ಮೃತಪಟ್ಟರು.

ಅಪಘಾತದಿಂದ ಸಂಪೂರ್ಣ ನುಜ್ಜುಗುಜ್ಜಾದ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣ ಬೆಂಕಿಗೆ ಅಹುತಿಯಾಗಿ ಸುಟ್ಟು ಹೋಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪುನಿತ್ ಪೂಜಾರಿ ನಿನ್ನೆಯಷ್ಟೆ ಈ ಹೊಸ ಬೈಕ್ ಖರೀದಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...