ಉ.ಪ್ರ ಬಿಜೆಪಿ ಸರಕಾರದಲ್ಲಿ ಮುಸ್ಲಿಂ ಸಚಿವ ?

Source: S O News service | By Staff Correspondent | Published on 14th March 2017, 12:29 AM | National News | Special Report | Don't Miss |

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರದಿದ್ದರೂ ಪಕ್ಷದ ಸರಕಾರದಲ್ಲಿ ಮುಸ್ಲಿಮರು ಪ್ರಾತಿನಿಧ್ಯ ಪಡೆಯಲಿದ್ದಾರೆ.

 

403 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 312 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿಯು ಅಭೂತಪೂರ್ವ ಗೆಲುವನ್ನು ದಾಖಲಿಸಿದೆ. ಬಿಜೆಪಿ ಮುಸ್ಲಿಂ ಸಮುದಾಯದಲ್ಲಿ ಸುಭದ್ರ ಮತಗಳ ಬುನಾದಿ ಹೊಂದಿಲ್ಲವಾದ್ದರಿಂದ ಸಂಪುಟದಲ್ಲಿ ಮುಸ್ಲಿಂ ವ್ಯಕ್ತಿಗೆ ಪ್ರಾತಿನಿಧ್ಯ ನೀಡುವ ಯೋಜನೆ ಸಮುದಾಯವನ್ನು ತಲುಪುವ ಉದ್ದೇಶ ಹೊಂದಿದೆ.

ಮುಸ್ಲಿಮರ ಒಂದು ವರ್ಗವು,ವಿಶೇಷವಾಗಿ ಮಹಿಳೆಯರು ಮತ್ತು ಯುವಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಅಜೆಂಡಾವನ್ನು ಒಪ್ಪಿಕೊಂಡಿದ್ದಾರೆ ಮತ್ತು ತ್ರಿವಳಿ ತಲಾಖ್ ವಿರುದ್ಧ ಪಕ್ಷದ ನಿಲುವಿನಿಂದ ಸಂತಸಗೊಂಡಿದೆ ಎಂದು ಬಿಜೆಪಿ ಭಾವಿಸಿದೆ ಮತ್ತು ಇದು ಸಮುದಾಯವನ್ನು ತಲುಪುವ ಯತ್ನಕ್ಕೆ ಪ್ರೇರಣೆಯಾಗಿದೆ.

 ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕನಿಲ್ಲದಿದ್ದರೆ ವಿಧಾನ ಪರಿಷತ್ತಿನಲ್ಲಿ ಮುಸ್ಲಿಂ ಸದಸ್ಯರೋರ್ವರು ಇರಲಿದ್ದಾರೆ. ಸರಕಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯವಂತೂ ಇರುತ್ತದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮಾಧ್ಯಮ ಸಂದರ್ಶನದಲ್ಲಿ ಹೇಳಿದ್ದಾರೆ. ಬಿಜೆಪಿಯ ಮಾಜಿ ಅಧ್ಯಕ್ಷರೂ ಆಗಿರುವ ನಾಯ್ಡು ಪಕ್ಷದ ನೀತಿ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ಹೊಂದಿದ್ದಾರೆ.

ತನ್ನ ಸಾಂಪ್ರದಾಯಿಕ ಮತಗಳ ಮೇಲೆ ಕಣ್ಣಿಟಿದ್ದ ಬಿಜೆಪಿಯ ಚುನಾವಣಾ ಪ್ರಚಾರ ಮುಖ್ಯವಾಗಿ ಅಭಿವೃದ್ಧಿ ವಿಷಯಗಳು ಮತ್ತು ಹಿಂದುತ್ವವನ್ನು ಕೇಂದ್ರಬಿಂದು ವನ್ನಾಗಿಸಿಕೊಂಡಿತ್ತು. ಈಗ ಸಂಪುಟಕ್ಕೆ ಮುಸ್ಲಿಂ ಸಚಿವರನ್ನು ಸೇರಿಸಿಕೊಂಡರೆ ಅದು ಪಕ್ಷದ ಸಾಮಾಜಿಕ ಬುನಾದಿಯ ವಿಸ್ತರಣೆಗೆ ನೆರವಾಗಲಿದೆ ಮತ್ತು ಹಿಂದು ಬಲಪಂಥೀಯ ಪಕ್ಷವೆಂಬ ಭಾವನೆಯನ್ನು ತೊಡೆದು ಹಾಕುವಲ್ಲಿ ನೆರವಾಗಲಿದೆ.

1991ರಲ್ಲಿ ಆಗಿನ ಉ.ಪ್ರ.ಮುಖ್ಯಮಂತ್ರಿ ಕಲ್ಯಾಣಸಿಂಗ್‌ಅವರು ಮುಸ್ಲಿಂ ನಾಯಕ ಇಜಾಝ್ ರಿಝ್ವಿ ಅವರನ್ನು ವಿಧಾನ ಪರಿಸತ್ ಸದಸ್ಯರನ್ನಾಗಿ ಮಾಡಿ,ಸಚಿವರನ್ನಾಗಿ ನೇಮಕಗೊಳಿಸಿದ್ದರು. ಅವರ ಪುತ್ರಿ ಸೀಮಾ ರಿಝ್ವಿ 1999ರಲ್ಲಿ ರಾಮ ಪ್ರಕಾಶ ಗುಪ್ತಾ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಚಿವೆಯಾಗಿದ್ದರು.

220 ಮಿ.ಜನಸಂಖ್ಯೆಯಲ್ಲಿ ಸುಮಾರು ಶೇ.18ರಷ್ಟು ಜನರು ಧಾರ್ಮಿಕ ಅಲ್ಪಸಂಖ್ಯಾತ ಗುಂಪುಗಳಿಗೆ ಸೇರಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಯ 383 ಅಭ್ಯರ್ಥಿಗಳ ಪಟ್ಟಿಯಲ್ಲಿ ಒಂದೇ ಒಂದು ಮುಸ್ಲಿಂ ಹೆಸರಿಲ್ಲದ್ದನ್ನು ಸಮರ್ಥಿಸಿಕೊಂಡಿರುವ ನಾಯ್ಡು,ಅದೊಂದು ದೌರ್ಬಲ್ಯವಾಗಿತ್ತೇ ಹೊರತು ತಪ್ಪಾಗಿರಲಿಲ್ಲ. ಗೆಲ್ಲುವ ಭರವಸೆಯಿದ್ದ ಸೂಕ್ತ ಮುಸ್ಲಿಂ ಅಭ್ಯರ್ಥಿ ನಮಗೆ ಸಿಕ್ಕಿರಲಿಲ್ಲ ಎಂದು ಹೇಳಿದ್ದಾರೆ.

ಒಂದು ವರ್ಗದ ಮುಸ್ಲಿಮರು ಬಿಜೆಪಿ ಪರವಾಗಿ ಮತಗಳನ್ನು ಚಲಾಯಿಸಿದ್ದಾರೆ. ತ್ರಿವಳಿ ತಲಾಖ್ ವಿಷಯದಲ್ಲಿ ಮುಸ್ಲಿಂ ಮಹಿಳೆಯರು,ವಿಶೇಷವಾಗಿ ಯುವತಿಯರು ನಮಗೆ ಮತಗಳನ್ನು ಹಾಕಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಮತದಾರರಲ್ಲಿ ಶೇ.33ರಷ್ಟು ಮುಸ್ಲಿಮರಿದ್ದ 42 ಕ್ಷೇತ್ರಗಳ ಪೈಕಿ 31ರಲ್ಲಿ ಬಿಜೆಪಿ ಗೆದ್ದಿದೆ ಎನ್ನುವುದನ್ನು ಚುನಾವಣಾ ಆಯೋಗದ ಅಂಕಿಅಂಶಗಳು ಸ್ಪಷ್ಟಪಡಿಸಿವೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...