ಶೂನ್ಯಬಡ್ಡಿ ದರದಲ್ಲಿ ಸಾಲ ವಿತರಣಾ ಸಮಾರಂಭ

Source: sonews | By Staff Correspondent | Published on 30th December 2018, 1:00 AM | Coastal News | Don't Miss |

ಶ್ರೀನಿವಾಸಪುರ: ರೈತರು ತಾವು ಪಡೆದ ಸಾಲವನ್ನು ಕಾಲಕ್ಕೆ ಸರಿಯಾಗಿ ಹಿಂದಿರುಗಿಸಬೇಕು ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ಕುಮಾರ್ಹೇಳಿದರು.

ತಾಲ್ಲೂಕಿನ ಆರಿಕುಂಟೆ ಗ್ರಾಮದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ಹಾಗೂ ಮಣಿಗಾನಹಳ್ಳಿ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಶನಿವಾರ ರ್ಪಡಿಸಲಾಗಿದ್ದ ಶೂನ್ಯಬಡ್ಡಿ ದರದಲ್ಲಿ ಸಾಲ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬ್ಯಾಂಕ್ತಾಯಿ ಇದ್ದಂತೆ. ತಾಯಿ ಮಕ್ಕಳ ಸಂಬಂಧದಂತೆ ಬ್ಯಾಂಕ್ವ್ಯವಹಾರ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಸಾಲ ನೀಡಿಕೆ ಸಮಾರಂಭದಲ್ಲಿ 150 ರೈತ ಫಲಾನುಭವಿಗಳಿಗೆ ರೂ.1.32 ಕೋಟಿ ಸಾಲ ವಿತರಣೆ ಮಾಡಲಾಗುವುದು. ಮುಂದೆ 500 ರೈತರಿಗೆ ಸಾಲ ನೀಡಲಾಗುವುದು. ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ತಲಾ ರೂ.1 ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು. ಅರ್ಹ ಫಲಾನುಭವಿಗಳು ಸಾಲ ಪಡೆಯಲು ಮಧ್ಯವರ್ತಿಗಳನ್ನು ಸಂಪರ್ಕಿಸಬಾರದು. ಬ್ಯಾಂಕ್ನೊಂದಿಗೆ ನೇರವಾಗಿ ಸಂಪರ್ಕಿಸಬೇಕು. ಶೋಷಣೆಯಿಂದ ಮುಕ್ತರಾಗಬೇಕು ಎಂದು ಹೇಳಿದರು.

ಎಲ್ಲ ರೀತಿಯ ಸಾಲವನ್ನು ಪಾರದರ್ಶಕವಾಗಿ ಹಾಗೂ ಪಕ್ಷಾತೀತವಾಗಿ ನೀಡಲಾಗುವುದು. ಗ್ರಾಮ ಪಂಚಾಯಿತಿ ಮೂಲಕ ಕರಪತ್ರ ಹೊರಡಿಸಿ, ಸಾಲ ವಿತರಣೆ ಮಾಡಲಾಗುವುದು. ಬಡವರು ಆರ್ಥಿಕವಾಗಿ ಮುಂದೆ ಬರಬೇಕು. ಖಾಸಗಿ ವ್ಯಕ್ತಿಗಳ ಶೋಷಣೆಯಿಂದ ಬಿಡುಡೆಯಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಳೇಗಾರಿಕೆಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರ ಕೆಲಸ ಮಾಡುವಾಗ ಪರ, ವಿರೋಧ ಅಭಿಪ್ರಾಯ ಇರುವುದು ಸಾಮಾನ್ಯ. ಅದನ್ನು ಲೆಕ್ಕಿಸದೆ ಬಡವರ ಪರವಾಗಿ ಕೆಲಸಮಾಡಬೇಕು ಎಂದು ಹೇಳಿದರು.

ಹಿಂದೆ ಕಾರಣಾಂತರವಾಗಿ ಬಿದ್ದುಹೋಗಿದ್ದ ಡಿಸಿಸಿ ಬ್ಯಾಂಕ್ಈಗ ಚೇತರಿಸಿಕೊಂಡಿದೆ. ರಾಜ್ಯದಲ್ಲಿಯೇ ಅತ್ಯುತ್ತಮ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿವಿಧ ಇಲಾಖೆಗಳಿಗೆ ಮಂಜೂರಾಗುವ ಹಣವನ್ನು ಡಿಸಿಸಿ ಬ್ಯಾಂಕ್ನಲ್ಲಿ ಇಡಲಾಗುವುದು. ಆರ್ಥಿಕ ವ್ಯವಹಾರ ಇಲ್ಲಿಂದಲೇ ಪ್ರಾರಂಭವಾಗಲಿದೆ. ರೂ.160 ಕೋಟಿ ವೆಚ್ಚದಲ್ಲಿ ರಾಜ್ಯದ ಗಡಿಯವರೆಗೆ ರಸ್ತೆ ಅಭಿವೃದ್ಧಿ ಮಾಡಲಾಗುವುದು. ಆರು ತಿಂಗಳ ಒಳಗೆ ಕೆರೆಗಳಿಗೆ ನೀರು ತುಂಬಲಾಗುವುದು. ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಪಿಎಲ್ಡಿ ಬ್ಯಾಂಕ್ಅಧ್ಯಕ್ಷ ದಿಂಬಾಲ ಅಶೋಕ್‌, ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌, ಡಿಸಿಸಿ ಬ್ಯಾಂಕ್ನಿರ್ದೇಶಕ ವೆಂಕಟರೆಡ್ಡಿ, ಮುಖಂಡರಾದ ಅಯ್ಯಪ್ಪ, ವೆಂಕಟೇಶ್‌, ಆಲವಟ್ಟ ಮಂಜುನಾಥರೆಡ್ಡಿ, ಸೀತಾರಾಮರೆಡ್ಡಿ, ಲಕ್ಷ್ಮಣರೆಡ್ಡಿ, ಶ್ರೀನಿವಾಸರೆಡ್ಡಿ, ತಮ್ಮಿರೆಡ್ಡಿ ಇದ್ದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...