ಲೋಕಸಭಾ ಮಹಾಸಮರಕ್ಕೆ ದಿನಾಂಕ ಪ್ರಕಟ : ಕರ್ನಾಟಕದಲ್ಲಿ 2 ಹಂತದ ಚುನಾವಣೆ

Source: so news | By MV Bhatkal | Published on 11th March 2019, 12:23 AM | National News | Don't Miss |

ನವದೆಹಲಿ: 17ನೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇಂದು [ಭಾನುವಾರ] ಕೇಂದ್ರ ಚುನಾವಣೆ ಆಯೋಗ ಮುಖ್ಯಸ್ಥ ಸುನೀಲ್ ಅರೋರ ಅವರು ದಿನಾಂಕ ಪ್ರಕಟಿಸಿದರು.
ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಪ್ರಕಟವಾಗಲಿ. ಕರ್ನಾಟಕದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಇಂದಿನಿದಂದಲೇ ನೀತಿ ಸಂಹಿತಿ ಜಾರಿಯಾಗಿದೆ.
ಏಪ್ರಿಲ್ 18 ಗುರುವಾರ 14 ಕ್ಷೇತ್ರಗಳಿಗೆ ಮೊದಲನೇ ಹಂತ ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23 ಮಂಗಳವಾರ  2ನೇ ಹಂತದ ಮತದಾನ ನಡೆಯಲಿದೆ.
ಮೊದಲ ಹಂತದ ಚುನಾವಣೆಯ ಡಿಟೇಲ್ಸ್
* ಕರ್ನಾಟಕದ ಮೊದಲ ಹಂತದ ಚುನಾವಣೆ ಏಪ್ರಿಲ್ 18ರಂದು.
*ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಮಾರ್ಚ್ 19ರಿಂದ.
*ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 26 ಕೊನೆ ದಿನ.
* ಮೊದಲ ಹಂತದ ಚುನಾವಣೆ ನಾಮಪತ್ರಗಳ ಪರಿಶೀಲನೆ ಮಾರ್ಚ್ 27.
* ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 29 ಕೊನೆ ದಿನ.
2ನೇ ಹಂತದ ಚುನಾವಣೆಯ ಡಿಟೇಲ್ಸ್
* ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23 ಮಂಗಳವಾರ  2ನೇ ಹಂತದ ಮತದಾನ ನಡೆಯಲಿದೆ.
*ಮಾರ್ಚ್ 28ರಿಂದ 2ನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ .
*ಎರಡನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆ ದಿನ.
*ಎರಡನೇ ಹಂತದ ಚುನಾವಣೆ ನಾಮಪತ್ರಗಳ ಪರಿಶೀಲನೆ ಏಪ್ರಿಲ್ 5.
*ನಾಮಪತ್ರ ವಾಪಸ್ ಪಡೆಯಲು ಮಾರ್ಚ್  ಕೊನೆ ದಿನ ಏಪ್ರಿಲ್ 8.
ಮೊದಲ ಹಂತದ 14 ಕ್ಷೇತ್ರಗಳು (ಏ.18)
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.
2ನೇ ಹಂತದ ಚುನಾವಣೆ (ಏ.23)
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ
ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...