ರಸ್ತೆ ಅಪಘಾತ; ಬೈಕ್ ಸವಾರ ಮೃತ್ಯು

Source: sonews | By Staff Correspondent | Published on 22nd July 2017, 11:02 PM | Coastal News | Incidents | Don't Miss |

ಭಟ್ಕಳ : ವೆಂಕಟಾಪುರದ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಎದುರಿನ ಹೆದ್ದಾರಿಯ ಮೇಲೆ ಸಂಭವಿಸಿದ ಲಾರಿ ಹಾಗೂ  ಹೊಂಡಾ ಏಕ್ಟಿವಾಗೆ ಅಪಘಾತದಲ್ಲಿ  ಏಕ್ಟಿವಾ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಕೊನೆಯುಸಿರೆಳೆದ ಘಟನೆ ನಡೆದಿದೆ.   
ಮೃತನನ್ನು  ಹೆಬಳೆ ನೆರ್ಲೆಸರ ನಿವಾಸಿ ವಸಂತ ನಾಗಪ್ಪ ಮೊಗೇರ (೪೫) ಎಂದು ಗುರುತಿಸಲಾಗಿದೆ. ಈತ  ಶಿರಾಲಿಯಿಂದ ಭಟ್ಕಳದ ಕಡೆಗೆ  ಹೊಂಡಾ ಏಕ್ಟಿವಾದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಹೊನ್ನಾವರ ಕಡೆಯಿಂದ  ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಈತನ ಬಲಕಿವಿ ಮತ್ತು ತಲೆಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಮೃತಪಟ್ಟಿದ್ದಾನೆ. ಮೃತನ ಸಹೋದರ  ಲಾರಿ ಚಾಲಕನ ವಿರುದ್ದ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದು  ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...